ಸಾಹಿತಿ ಡಾ. ಪಿ.ವಿ ನಾರಾಯಣ ಇನ್ನಿಲ್ಲ

Date:

Advertisements

ಸಾಹಿತಿ ಡಾ. ಪಿ.ವಿ ನಾರಾಯಣ (82) ಅವರು ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೊನೆಯುಸಿಳೆದಿದ್ದಾರೆ.

ಬೆಂಗಳೂರಿನ ಜಯನಗರದ 8ನೇ ಬ್ಲಾಕ್‌ನಲ್ಲಿರುವ ಹೇಮಂತ ಅರಿಷ್ಠ ಅಪಾರ್ಟ್ಮೆಂಟ್‌ನಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬನಶಂಕರಿ ಚಿತಾಗಾರದಲ್ಲಿ ಮಧ್ಯಾಹ್ನದ 3 ಗಂಟೆಗೆ ಅವರ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪಿ.ವಿ ನಾರಾಯಣ ಅವರು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನಲ್ಲಿ 1942ರ ಡಿಸೆಂಬರ್ 18ರಂದು ಜನಿಸಿದವರು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೆ, ‘ವಚನ ಸಾಹಿತ್ಯ: ಒಂದು ಸಾಂಸ್ಕೃತಿಕ ಅಧ್ಯಯನ’ ಮಹಾಪ್ರಬಂಧಕ್ಕೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ.

Advertisements

ಅವರು ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಬರವಣಿಗೆಯ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದ ಅವರು ಒಟ್ಟು 45ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಬಿಎಂಶ್ರೀ ಪ್ರತಿಷ್ಠಾನದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

ಅವರ ಕೃತಿಗಳಲ್ಲಿ ಅಶ್ವತ್ಥಾಮನ್, ಬುವಿಯ ಬಸಿರಿಗೆ ಪಯಣ, ಪಂಪ ರಾಮಾಯಣ, ಅಂತರ, ಬಳ್ಳಿಗಾವೆ, ಕಾಯಕತತ್ವ, ಚಂಪೂಕವಿಗಳು, ವಚನ ಚಳವಳಿ, ವಚನ ವ್ಯಾಸಂಗ, ಪದ್ಮಿನೀ ಪರಿಣಯ, ಮದುವೆ ಮತ್ತು ನೀತಿ, ಹನ್ನೆರಡನೇ ರಾತ್ರಿ, ವಿಕಾಸ, ಶೋಧನೆ ನಿರ್ಧಾರ, ಧರ್ಮಕಾರಣ ಪ್ರಮುಖವಾದವು.

ಅವರ ಸಮಾಜದ ಮೇಲೆ ವಿಜ್ಞಾನದ ಪ್ರಭಾವ ಕೃತಿಗೆ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಚನ ವ್ಯಾಸಂಗ ಕೃತಿಗೆ ಇಳಕಲ್ಲಿನ ಶ್ರೀವಿಜಯ ಮಹಂತೇಶ ಮಠ ಪುರಸ್ಕಾರ, ‘ಶೋಧನೆ’ ಕಾದಂಬರಿಗೆ ಸುಧಾ ವಾರ ಪತ್ರಿಕೆಯ ಕಾದಂಬರಿ ಸ್ಪರ್ಧೆ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಸೇರಿ ವಿವಿಧ ಪ್ರಶಸ್ತಿಗಳು ಅವರಿಗೆ ಸಂದಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X