ಬದುಕಿನ ಪರೀಕ್ಷೆ ಎದುರಿಸಲು ಸಾಹಿತ್ಯವೇ ಸಾಧನ: ಜಯಂತ ಕಾಯ್ಕಿಣಿ

Date:

Advertisements

ಹೊಸ ತಲೆಮಾರಿನ ವಿದ್ಯಾರ್ಥಿಗಳು ಬದುಕಿನ ಸವಾಲುಗಳಿಗೆ ಧೃತಿಗೆಡದೆ ಸಮರ್ಥವಾಗಿ ಎದುರಿಸಲು ಸಾಹಿತ್ಯವೇ ಪ್ರಮುಖ ಸಾಧನ. ಹಾಗಾಗಿ ಇಂದಿನ ತಲೆಮಾರಿನ ಯುವಜನರು ಸಾಹಿತ್ಯಾಭ್ಯಾಸವನ್ನು ಮೈಗೂಡಿಸಿಕೊಳ್ಳಬೇಕು, ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕೃತಿಯ ಅಂತರಂಗದ ಆಶಯವೂ ಸಹ ಬದುಕಿನ ನಾನಾ ಸ್ತರಗಳ ವ್ಯವಸ್ಥೆಯೊಂದಿಗೆ ಮನುಷ್ಯರು ಮುಖಾಮುಖಿಯಾಗುವುದೇ ಆಗಿದೆ ಎಂದು ಖ್ಯಾತ ಸಾಹಿತಿ ಜಯಂತ ಕಾಯ್ಕಿಣಿ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ, ಶೇಷಾದ್ರಿಪುರಂ ಕಾಲೇಜು, ಕನ್ನಡ ಸಂಘ, ಕನ್ನಡ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಕಾರ್ಯಕ್ರಮದಡಿ ವ್ಯಾಸರಾಯ ಬಲ್ಲಾಳರ ‘ಬಂಡಾಯ’ ಕೃತಿ ಕುರಿತು ಮಾತನಾಡಿದ ಅವರು, ವ್ಯಾಸರಾಯ ಬಲ್ಲಾಳರು ಕನ್ನಡ ಸಾಹಿತ್ಯ ಕಂಡ ಅಪರೂಪದ ಬರಹಗಾರ ಎಂದರು.

ಮೃದುದೋರಣೆಯ, ಭಾವ ಪರವಶತೆಯ ಶೈಲಿಯ ಕಾದಂಬರಿಗಳಿಂದ ಗುರುತಿಸಿಕೊಂಡಿದ್ದ ಬಲ್ಲಾಳರು ಕ್ರಾಂತಿಕಾರಕ ಮನಸ್ಥಿತಿಯ ಕಡೆಗೆ ಹೊರಳಿದ್ದು ಅವರ ಬಂಡಾಯ ಕಾದಂಬರಿಯ ವಿಶೇಷವಾಗಿದೆ. ಈ ಕಾದಂಬರಿ ಮೇಲ್ನೋಟಕ್ಕೆ ಕಾರ್ಮಿಕರು ಮತ್ತು ಬಂಡವಾಳ ಶಾಹಿಗಳ ನಡುವಿನ ಸಂಘರ್ಷದ ಕಥಾ ವಸ್ತು ಹೊಂದಿದ್ದರೂ ಅಲ್ಲಿನ ಪಾತ್ರಗಳು ಬದುಕಿನ ವಿವಿಧ ಹಂತಗಳಲ್ಲಿ ಪರಸ್ಪರ ಬಂಡಾಯ ಏಳುವುದನ್ನು ಕಾಣಬಹುದಾಗಿದೆ. ಮನುಷ್ಯನೇ ಮನುಷ್ಯನನ್ನು ಬೇಟೆಯಾಡುವುದು ಬದುಕಿನ ವಿಪರ್ಯಾಸಗಳಲ್ಲಿ ಒಂದು. ಮನುಷ್ಯನಷ್ಟು ಕ್ರೂರಿ ಬೇರೆ ಇಲ್ಲ ಎನ್ನುವುದೇ ಸಾರ್ವಕಾಲಿಕ ಸತ್ಯ. ಇಲ್ಲಿ ಈ ಬಂಡಾಯ, ಮಾಲಿಕ-ಕಾರ್ಮಿಕರ ನಡುವಿನದಾದರೂ ವ್ಯಕ್ತಿಗತವಾದ ಬಂಡಾಯವನ್ನೂ ಸಹ ಇಲ್ಲಿನ ಪಾತ್ರಗಳು ಪ್ರತಿನಿಧಿಸುತ್ತವೆ. ತಲೆಮಾರಿನಿಂದ ತಲೆಮಾರಿಗೆ, ವ್ಯಕ್ತಿಯಿಂದ ವ್ಯಕ್ತಿಗೆ, ಕುಟುಂಬದ ಒಳಗೆ ಮತ್ತು ಹೊರಗೆ ಹೀಗೆ ಬಂಡಾಯ ಎಲ್ಲ ಸ್ಥರಗಳಲ್ಲಿಯೂ ಒಂದಲ್ಲಾ ಒಂದು ಹಂತದಲ್ಲಿ ಸ್ಫೋಟಗೊಳ್ಳುತ್ತದೆ. ಇದು ಪ್ರತಿಯೊಂದು ಸಮಾಜದಲ್ಲೂ ಅನಿವಾರ್ಯ ಮತ್ತು ಸತ್ಯ ಎಂದು ಜಯಂತ ಕಾಯ್ಕಿಣಿ ವಿಶ್ಲೇಷಿಸಿದರು.

ಇಲ್ಲಿ, ಹೆಣ್ಣು ಹಣೆಯ ಮೇಲಿಡುವ ಕುಂಕುಮದ ಬೊಟ್ಟನ್ನು ಸಹ ಕ್ರಾಂತಿಕಾರಕ ಕೆಂಪು ಚಿಹ್ನೆ ಎಂದು ಚಿತ್ರಿಸಿದ ವ್ಯಾಸರಾಯ ಬಲ್ಲಾಳರ ಚಿಂತನಾಶೈಲಿ ಅಚ್ಚರಿಹುಟ್ಟಿಸುವಷ್ಟು ಶಕ್ತವಾಗಿದೆ ಎಂದ ಅವರು ಯಾವುದೇ ಸಮಾಜ ನಮ್ಮ ಅಂತರಂಗದ ಭಾವನಾತ್ಮಕತೆಯ ಭಾಗವಾಗಿರಬೇಕು, ಸಾಹಿತ್ಯ ಅದಕ್ಕೆ ಪೂರಕವಾಗಿರಬೇಕು ಎಂದು ತಿಳಿಸಿದರು.

ಸಾಹಿತ್ಯದ ಈ ಶಕ್ತಿ ಮತ್ತು ಅದರ ಸೌಂದರ್ಯವನ್ನ ವಿದ್ಯಾರ್ಥಿಗಳು ಅನುಭವಿಸಬೇಕೆಂದರೆ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ಓದನ್ನು ರೂಢಿಸಿಕೊಳ್ಳಬೇಕು ಎಂದು ಅವರು ಕಿವಿ ಮಾತು ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರು ಮಣ್ಣು ತಿನ್ನುವುದು, ಮನುಷ್ಯರು ವಿಷ ಉಣ್ಣುವುದು ನಿಲ್ಲುವುದೆಂದು?

ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಮಾನಸ, ಪ್ರತಿ ವಿದ್ಯಾರ್ಥಿಯ ಹಸ್ತಕ್ಕೆ ಪುಸ್ತಕವಿರಬೇಕು. ಪುಸ್ತಕ ಮಕ್ಕಳ ಮಸ್ತಕದಲ್ಲಿ ತುಂಬುವಂತಾಗಬೇಕು. ಆಗ ಮಾತ್ರ ಕನ್ನಡ ಸಾಹಿತ್ಯ ಮತ್ತು ಕನ್ನಡ ಪುಸ್ತಕೋದ್ಯಮವು ಬೆಳೆಯುತ್ತದೆ ಎಂದರು. ಇಂದು ಮುದ್ರಣ ಮಾಧ್ಯಮ ಅತ್ಯಂತ ದೊಡ್ಡರೀತಿಯಲ್ಲಿ ಬೆಳೆದಿದೆ. ಜಗತ್ತಿನಾದ್ಯಂತ ಪ್ರಕಾಶನ ಸಂಸ್ಥೆಗಳು ಆಧುನಿಕ ಸಾಧ್ಯತೆಗಳನ್ನೆಲ್ಲಾ ಬಳಸಿಕೊಂಡು ಪುಸ್ತಕೋದ್ಯಮಕ್ಕೆ ಹೊಸ ಆಯಾಮವನ್ನ ತಂದಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ತನ್ನ ಯೋಜನೆಗಳ ಮೂಲಕ ಪುಸ್ತಕಾಭಿರುಚಿಯನ್ನು ಬೆಳೆಸಲು ಹೊರಟಿದೆ. ಆ ದಿಸೆಯಲ್ಲಿ ಮನೆಗೊಂದು ಗ್ರಂಥಾಲಯ ಮತ್ತು ಅಂಗಳದಲ್ಲಿ ತಿಂಗಳ ಪುಸ್ತಕ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶೇಷಾದ್ರಿಪುರಂ ಕಾಲೇಜಿನ ಗೌರವ ಕಾರ್ಯದರ್ಶಿ ನಾಡೋಜ ಡಾ.ವೂಡೆ ಪಿ. ಕೃಷ್ಣ ಅವರು ಉಪಸ್ಥಿತರಿದ್ದು, ತಮ್ಮ ಕಾಲೇಜು ಇಂತಹ ಸಾಂಸ್ಕೃತಿಕ ಚಟುವಟಿಕೆಗಳಿಗೆ ಸದಾ ಬೆಂಬಲ ಮತ್ತು ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಜಯಂತ ಕಾಯ್ಕಿಣಿ ಹಾಗೂ ವೂಡೇ ಪಿ.ಕೃಷ್ಣ ಅವರನ್ನು ಸನ್ಮಾನಿಸಲಾಯಿತು. ವ್ಯಾಸರಾಯ ಬಲ್ಲಾಳರ ಪುತ್ರಿ ಶ್ರೀಮತಿ ಅಂಜಲಿ ಬಲ್ಲಾಳ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದದ್ದು ವಿಶೇಷವಾಗಿತ್ತು.

ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್, ಶೇಷಾದ್ರಿಪುರಂ ಕಾಲೇಜು ಪ್ರಾಂಶುಪಾಲರಾದ ಮೇಜರ್ ಡಾ. ಆನಂದಪ್ಪ ಐ., ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಹೆಚ್.ಎಂ. ಗೀತಾ, ಕನ್ನಡ ಸಂಘದ ಸಂಚಾಲಕರಾದ ಎಂ.ಎನ್. ಅರ್ಚನಾ ತೇಜಸ್ವಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X