14 ಕಡೆ ಲೋಕಾಯುಕ್ತ ದಾಳಿ: ಐದು ಮದ್ಯದಂಗಡಿ ಹೊಂದಿದ್ದ ಭೂಮಾಪನ ಇಲಾಖೆ ಅಧೀಕ್ಷಕ

Date:

ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ ಆರೋಪ ಕೇಳಿ ಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಲಾಗಿದೆ. ಈ ದಾಳಿ ವೇಳೆ, ನಗರದ ಕೆ.ಆರ್.ಪುರ ತಾಲ್ಲೂಕಿನ ಭೂಮಾಪನ ಇಲಾಖೆ ಅಧೀಕ್ಷಕ ಕೆ.ಟಿ. ಶ್ರೀನಿವಾಸಮೂರ್ತಿ ಐದು ಮದ್ಯದಂಗಡಿಗಳನ್ನು ಹೊಂದಿರುವುದನ್ನು ಲೋಕಾಯುಕ್ತ ಪೊಲೀಸರು ಪತ್ತೆ ಮಾಡಿದ್ದಾರೆ.

ಆಗಸ್ಟ್ 22ರಂದು ಬೆಂಗಳೂರು, ತುಮಕೂರು ಸೇರಿ 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ ವೇಳೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶೋಧ ಕಾರ್ಯ ಮುಂದುವರೆದಿದೆ.

ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿಯ ಭೂಮಾಪನ ಇಲಾಖೆ ಅಧೀಕ್ಷಕ​​​ ಕೆ.ಟಿ ಶ್ರೀನಿವಾಸಮೂರ್ತಿ ಮನೆಗಳು, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಕೆ.ಟಿ.ಶ್ರೀನಿವಾಸಮೂರ್ತಿ ವಿರುದ್ಧ ಲೋಕಾಯುಕ್ತ ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ.

ಶ್ರೀನಿವಾಸಮೂರ್ತಿ 5ಕ್ಕೂ ಹೆಚ್ಚಿನ ಕಡೆಗಳಲ್ಲಿ ಅಬಕಾರಿ ಲೈಸೆನ್ಸ್‌ ಹೊಂದಿದ್ದು, ಐದು ಕಡೆ ಮದ್ಯದಂಗಡಿಗಳನ್ನು ಹೊಂದಿದ್ದಾರೆ. ಅಲ್ಲದೇ, ಬೆಂಗಳೂರಿನ ಅಂದ್ರಹಳ್ಳಿ, ಹೆಣ್ಣೂರು, ಕೊತ್ತನೂರು ಸೇರಿದಂತೆ ಹಲವೆಡೆ ನಿವೇಶನ, ಮನೆ ಹೊಂದಿರುವುದು ಪತ್ತೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 225 ವಾರ್ಡ್‌ಗಳ ಕರಡು ನಕ್ಷೆ ವೆಬ್‌ಸೈಟ್‌ನಲ್ಲಿ ಪ್ರಕಟ

ಅಂದ್ರಹಳ್ಳಿಯಲ್ಲಿರುವ ನಿವಾಸ, ಹೆಣ್ಣೂರಿನಲ್ಲಿರುವ ಸಹೋದರಿ ನಿವಾಸ, ಪತ್ನಿ ಹೆಸರಿನಲ್ಲಿರುವ ಹೋಟೆಲ್​​​​​ ಬೋರ್ಡಿಂಗ್​ ಹೌಸ್​ ಹಾಗೂ ತುಮಕೂರಿನಲ್ಲಿರುವ ಶ್ರೀನಿವಾಸ ಸಹೋದರನ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಲವು ಕಡೆಗಳಲ್ಲಿ ಸ್ಥಿರಾಸ್ತಿಗಳನ್ನು ಖರೀದಿಸಿರುವ ದಾಖಲೆಗಳೂ ಪತ್ತೆಯಾಗಿದೆ. ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆಗಸ್ಟ್ 17ರಂದು ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 48 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು. ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಕೊಟ್ಯಂತರ ರೂಪಾಯಿ ಜಪ್ತಿ ಮಾಡಿದ್ದರು. ಇದೀಗ ಲೋಕಾಯುಕ್ತ ಪೊಲೀಸರು ಮತ್ತೆ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರೆಸಿದ್ದು, ಒಂದು ವಾರದಲ್ಲಿ ಇದು ಎರಡನೇ ದಾಳಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಮೆಟ್ರೋ | ‘ಚಾಲಕ ರಹಿತ ರೈಲು’ ಸಂಚಾರಕ್ಕೆ ಶೀಘ್ರದಲ್ಲೇ ಸಿಗ್ನಲಿಂಗ್ ಟೆಸ್ಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಚಾಲಕ ರಹಿತ ರೈಲು ಶೀಘ್ರದಲ್ಲಿಯೇ...

ಬೆಂಗಳೂರು | ಕೊಲೆ ಆರೋಪ; ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ ಆರೋಪಿಗಳು 5 ದಿನ ಪೋಲೀಸ್ ವಶಕ್ಕೆ

ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯ ಶೆಡ್ ಒಂದರಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ...

ನಟ ದರ್ಶನ್ ಬಂಧನ | ಸಾಮಾಜಿಕ ಜಾಲತಾಣ, ನಾಗರಿಕ ಸಮಾಜ ಮತ್ತು ಕಾನೂನು ವೈಫಲ್ಯ

ಸದ್ಯ ರಾಜ್ಯದಲ್ಲಿ ನಟ ದರ್ಶನ್ ಅವರ ಬಂಧನ ಸುದ್ದಿಯಲ್ಲಿದೆ. ತಮ್ಮ ಆಪ್ತೆ...

ಆದೇಶ ಪಾಲಿಸದ ಕಲ್ಯಾಣ ಮಂಡಳಿ; ಹೈಕೋರ್ಟ್‌ ಅಸಮಾಧಾನ

ಬಡ ಕಟ್ಟಡ ಕಾರ್ಮಿಕ‌ರ ಮಕ್ಕಳಿಗೆ‌ ಧನಸಹಾಯ ನೀಡಲು ಹೈಕೋರ್ಟ್ ನೀಡಿದ್ದ ‌ಮಧ್ಯಂತರ...