ಸಚಿವ ಬೈರತಿ ಸುರೇಶ್ ಅವರ ಮಾಜಿ ಆಪ್ತ ಕಾರ್ಯದರ್ಶಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಾರುತಿ ಬಗಲಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಧಿಕಾರಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆಗಳು ಪತ್ತೆಯಾಗಿದೆ. ಈವರೆಗೆ 8 ನಿವೇಶನಗಳು, 5 ವಾಸ ಮನೆ, 19 ಎಕರೆ ಜಮೀನಿನ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋಶಾ ಕಂಪನಿಯ ಮತ್ತೊಂದು ನಿಗೂಢ ನಾಟಕ!
2 ವರ್ಷಗಳ ಕಾಲ ಸಚಿವ ಬೈರತಿ ಸುರೇಶ್ ಅವರ ಆಪ್ತ ಕಾರ್ಯದರ್ಶಿ ಆಗಿದ್ದ ಮಾರುತಿ ಬಗಲಿ, 3 ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು.
ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
