ಮಹಾಧರಣಿ | ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ: ರೈತ ಹೋರಾಟಗಾರ ಬಸವರಾಜಪ್ಪ

Date:

ದುಡಿಯುವ ವರ್ಗದ ಜನರನ್ನ, ರೈತರನ್ನು, ಕಾರ್ಮಿಕರನ್ನು ಬೀದಿಗೆ ತಳ್ಳುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡ್ತಾಯಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ತಾನು ನೀಡಿದ್ದ ಎಲ್ಲ ಭರವಸೆಗಳನ್ನ ಮರೆತು, ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ ಎಂದು ರೈತ ಹೋರಾಟಗಾರ ಬಸವರಾಜಪ್ಪ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ನಡೆಯುತ್ತಿರುವ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ಬಡ ವಿರೋಧಿ, ಬಂಡವಾಳಶಾಹಿ ಪರವಾದ ನೀತಿಗಳನ್ನು ಜಾರಿಗೆ ತಂದು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಅಸಮಾನತೆ ತೊರೆದು ಸಮಾನತೆ, ಸಮತಾವಾದ ಆಶಯದೊಂದಿಗೆ ದೇಶದ ಜನರು ಬದುಕಬೇಕೆಂಬ ಆಶಯ ಸ್ವಾತಂತ್ರ್ಯ ಹೋರಾಟದ್ಧಾಗಿತ್ತು. ಆದರೆ, ಇಂದಿನ ಸರ್ಕಾರ ಸ್ವಾತಂತ್ರ್ಯದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ವಿದ್ಯುತ್ ಖಾಸಗಿಕರಣ ನೀತಿಯನ್ನು ಜಾರಿಗೆ ತರಲ್ಲವೆಂದು ಲಿಖಿತವಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಈಗ ತನ್ನ ಮಾತನ್ನು ತಪ್ಪುತ್ತಿದೆ. ಕೇಂದ್ರವು ಮಂದಿರದ ಹೆಸರಿನಲ್ಲಿ ಚುನಾವಣೆಯನ್ನ ಎದುರಿಸುತ್ತಿದೆ. 2014ರಲ್ಲಿ ರಾಮ ಮಂದಿರ ಕಟ್ಟುತ್ತೇವೆ ಎಂದಿದ್ದರು. ಈಗ ಅದನ್ನು ಉದ್ಘಾಟನೆ ಮಾಡ್ತೀನಿ, ಉಚಿತವಾಗಿ ಅಯೋಧ್ಯೆಗೆ ಕರೆದುಕೊಂಡು ಹೋಗ್ತಿವಿ ಅಂತ ಹೇಳಿಕೊಳ್ಳುತ್ತಿದೆ. ಮಂದಿರ ಕಟ್ಟುವುದರಿಂದ ರೈತರ, ಬಡವರ ಸಮಸ್ಯೆಗಳ ಪರಿಹಾರ ಆಗ್ತವೆ ಅನ್ನೋದಾದ್ರೆ, ಜಿಲ್ಲೆಗೊಂದು, ತಾಲೂಕಿಗೊಂದು ಮಂದಿರ ಕಟ್ಟಬಹುದು. ಆದರೆ, ಮಂದಿರ ಕಟ್ಟುವುದರಿಂದ ಸಂಪತ್ತು ಸೃಷ್ಟಿಯಾಗುವುದಿಲ್ಲ. ದೇಶದ ಜನರ ದುಡಿಮೆಯಿಂದ ಸಂಪತ್ತು ಬರುತ್ತದೆ. ಆ ಸಂಪತ್ತು ಮೋದಿ ಸ್ನೇಹಿತರ ಬಳಿ ಕ್ರೋಡೀಕರಣ ಆಗುತ್ತಿದೆ” ಎಂದು ಕಿಡಿಕಾರಿದರು.

“ರಾಜ್ಯದಲ್ಲಿ ಜನರನ್ನು ಬೀದಿ ಪಾಲು ಮಾಡುವಂತಹ ನೀತಿಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತ್ತು. ಕಳೆದ ಚುನಾವಣೆಯಲ್ಲಿ ರಾಜ್ಯದ ಜನರು ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳ ಮುಂದೆ 35 ಹಕ್ಕೊತ್ತಾಯಗಳನ್ನು ಸಂಯುಕ್ತ ಹೋರಾಟ ಸಮಿತಿ ಮುಂದಿಟ್ಟಿತ್ತು. ಅವುಗಳನ್ನ ತಮ್ಮ ಭರವಸೆಗಳಲ್ಲಿ ಸೇರಿಸಿಕೊಳ್ಳುವವರಿಗೆ ಮತ ಚಲಾಯಿಸುವುದಿಲ್ಲವೆಂದು ಕರೆ ಕೊಟ್ಟಿತ್ತು. ನಮ್ಮ ಹಕ್ಕೊತ್ತಾಯಗಳನ್ನು ಒಪ್ಪಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ ಸರ್ಕಾರ ಬಂದು ಆರು ತಿಂಗಳಾಗಿವೆ. ಆದರೂ, ರೈತ, ಕಾರ್ಮಿಕ, ದಲಿತ, ಯುವಜನ ವಿರೋಧಿ ನೀತಿಗಳನ್ನು ಹಿಂಪಡೆಯುವಲ್ಲಿ, ಜನಪರ ನೀತಿಗಳನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕೇವಲ ಗ್ಯಾರಂಟಿ ಯೋಜನೆಗಳಲ್ಲೇ ತೇಲಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಬರ ಉಂಟಾಗಿದೆ. ಇನ್ನೂ ಬರ ಪರಿಹಾರ ನೀಡಿಲ್ಲ. ಒಂದು ಹೆಕ್ಟೇರ್‌ಗೆ ಕನಿಷ್ಠ 40,000 ರೂ. ಪರಿಹಾರ ನೀಡಬೇಕು. ರೈತರು, ಕಾರ್ಮಿಕರು ಗುಳೆ ಹೋಗುವುದನ್ನ ತಪ್ಪಿಸಿ, ಆಯಾ ಗ್ರಾಮಗಳಲ್ಲಿ ಉದ್ಯೋಗ ನೀಡುವ ಕೆಲಸವನ್ನ ಸರ್ಕಾರ ಮಾಡಬೇಕು. ಜಾತಿ ಪ್ರಮಾಣ ಪತ್ರ, ಪಹಣಿ, ಆದಾಯ ದೃಢೀಕರಣ ಪತ್ರ ಪಡೆಯಲು ಶುಲ್ಕವನ್ನ ಹೆಚ್ಚಿಸಲಾಗಿದೆ. ಅದನ್ನು ಕಡಿಮೆ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

“ರಾಮಮಂದಿರ ತೆರೆದ ತಕ್ಷಣ ಮತ್ತೆ ಅಧಿಕಾರಕ್ಕೆ ಬರ್ತೀವಿ ಅಂತ ಬಿಜೆಪಿ ಭಾವಿಸಿದೆ. ಆದರೆ, ಅವರು ಜನರನ್ನ ಕಡೆಗಣಿಸಿದ್ರೆ, ಅವರಿಗೆ ರಾಜ್ಯದಲ್ಲಾದ ಪರಿಸ್ಥಿತಿಯೇ ಎದುರಾಗಲಿದೆ” ಅಂತ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...