ಮಾಲ್‌ ಆಫ್‌ ಏಷ್ಯಾ | ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕ ಹೋಬಳಿ ಬ್ಯಾಟರಾಯನಪುರದ ಮಾಲ್‌ ಆಫ್‌ ಏಷ್ಯಾಗೆ ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಬಟ್ಟು 16 ದಿನಗಳ ಕಾಲ ಈ ಮಾಲ್‌ ಬಂದ್‌ ಮಾಡುವಂತೆ ನಗರ ಪೊಲೀಸ್‌ ಆಯುಕ್ತ ಬಿ. ದಯಾನಂದ ಆದೇಶಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಬಳಸದ ವಾಣಿಜ್ಯ ಅಂಗಡಿಗಳು ಹಾಗೂ ಮಾಲ್‌ಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆ ನಡೆಸಿತ್ತು. ಅಲ್ಲದೇ, ಬ್ಯಾಟರಾಯನಪುರದ ಫೋನಿಕ್ಸ್‌ ಮಾಲ್ ಆಫ್ ಏಷ್ಯಾ ವಿರುದ್ಧ ಕೂಡ ಪ್ರತಿಭಟನೆ ನಡೆಸಿದ್ದರು. ಈ ವೇಳೆ, ಮಾಲ್‌ಗೆ ನುಗ್ಗಿ ಗಲಾಟೆ ನಡೆಸಲಾಗಿತ್ತು. ಈ ಹಿನ್ನೆಲೆ, ಸಾರ್ವಜನಿಕ ಶಾಂತಿ ಕಾಪಾಡುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ನಿರ್ವಹಿಸುವ ದೃಷ್ಟಿಯಿಂದ ಮಾಲ್‌ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಈ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಇನ್ನು ಮಾಲ್​ ವ್ಯಾಪ್ತಿಯಲ್ಲಿ ಸೆಕ್ಷನ್ 144 ಹಾಕಲಾಗಿದೆ. ಮುಂಜಾಗ್ರತ ಕ್ರಮವಾಗಿ ಮಾಲ್ ಬಳಿ ಭದ್ರತೆಗಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಆದೇಶದಂತೆ 5 ಕ್ಕಿಂತ ಹೆಚ್ಚು ಜನ ಸೇರುವ ಹಾಗಿಲ್ಲ. ಹಾಗಾಗಿ ಮುಂದಿನ ಹದಿನೈದು ದಿನಗಳ ಕಾಲ ಮಾಲ್ ಆಫ್ ಏಷ್ಯಾ ಕ್ಲೋಸ್ ಆಗಲಿದೆ. ಅಕ್ಟೋಬರ್ ತಿಂಗಳಲ್ಲಿ ಓಪನ್ ಮಾಲ್ ಆಫ್ ಏಷ್ಯಾ ಓಪನ್ ಆಗಿತ್ತು.

ಮಾಲ್ ವಿರುದ್ಧ ಪ್ರತಿಭಟನೆ

ಇನ್ನು ಮಾಲ್ ನಿರ್ಮಾಣದಿಂದ ಸಂಚಾರಕ್ಕೆ ಅನಾನೂಕೂಲ ಆಗಿದೆ ಎಂದು ಸಾರ್ವಜನಿಕರು ಪ್ರತಿಭಟನೆ ಸಹ ನಡೆಸಿದ್ದರು. ಮಾಲ್​ ಭಾಗದಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಆಗುತ್ತಿಲ್ಲ. ವಿಮಾನ ನಿಲ್ದಾಣಕ್ಕೆ ಹೋಗುವ ವಾಹನಗಳು, ಅಂಬುಲೆನ್ಸ್‌ಗಳ ಓಡಾಟಕ್ಕೂ ಕಷ್ಟ ಆಗಲಿದೆ ಎಂಬ ದೂರುಗಳು ಮಾಲ್ ವಿರುದ್ಧ ದಾಖಲಾಗಿದ್ದವು.

ಸಾಲು ಸಾಲು ದೂರುಗಳು ದಾಖಲಾದ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು ಖುದ್ದು ಮಾಲ್‌ಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ, ಪಾರ್ಕಿಂಗ್ ಸೇರಿದಂತೆ ಕೆಲವು ನ್ಯೂನ್ಯತೆಗಳು ಕಂಡು ಬಂದಿದ್ದವು. ಜತೆಗೆ, ಸಂಚಾರ ದ್ಟಟಣೆ ಕುರಿತು ಜಂಟಿ ಆಯುಕ್ತರ ವರದಿ, ಕಾನೂನು ಸುವ್ಯವಸ್ಥೆ ಬಿಗಡಾಯಿಸುತ್ತಿರುವ ಸಂಬಂಧ ಈಶಾನ್ಯ ವಿಭಾಗದ ಡಿಸಿಪಿ ನೀಡಿದ್ದ ವರದಿ ಪರಿಗಣಿಸಿ ಮಾಲ್‌ ಆಫ್‌ ಏಷಿಯಾವನ್ನು ತಾತ್ಕಾಲಿಕವಾಗಿ ಬಂದ್‌ ಮಾಡಲು ಆದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಲಿನ ಮೂಲಕ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿ ಬಂಧನ

ಬಂದ್ ವೇಳೆ, ಮಾಲ್‌ ಸಿಬ್ಬಂದಿ ಹಾಗೂ ಮಳಿಗೆಗಳ ಸಿಬ್ಬಂದಿ ಕಾರ್ಯಚಟುವಟಿಕೆ ನಡೆಸಬಹುದು. ಮುಂಜಾಗ್ರತಾ ಕ್ರಮವಾಗಿ ಮಾಲ್‌ ಸುತ್ತಮುತ್ತಲೂ ಹೆಚ್ಚಿನ ಪೊಲೀಸ್‌ ಭದ್ರತೆ ಕಲ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆರೋಗ್ಯ ಆಸ್ಪತ್ರೆಯಲ್ಲಿ ಸಿಗುವ ವಸ್ತುವಲ್ಲ, ನಮ್ಮ ಆಹಾರ ಪದ್ಧತಿಯಲ್ಲಿದೆ : ಸಚಿವ ಎನ್.ಚಲುವರಾಯಸ್ವಾಮಿ

ಆರೋಗ್ಯವೆಂಬುದು ಕೇವಲ ಆಸ್ಪತ್ರೆಗಳಲ್ಲಿ ಸಿಗುವ ವಸ್ತುವಲ್ಲ. ಅದು ನಮ್ಮ ದಿನಚರಿಯಲ್ಲಿ ಅಡಗಿದೆ...

ಬಾಗಲಕೋಟೆ |ಇಳಕಲ್ ಪಟ್ಟಣಕ್ಕೆ 24 ಗಂಟೆ ಕುಡಿಯುವ ನೀರಿನ ಯೋಜನೆಗೆ ಚಾಲನೆ

ಇಳಕಲ್ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ...

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಹಾವೇರಿ | ಸಚಿವರ ಮನೆ ಸುತ್ತು ನಿಷೇಧಾಜ್ಞೆ; ಬಂಕಾಪುರ ಟೋಲ್ ಬಂದ್ ಮಾಡಿ ರೈತರು ಆಕ್ರೋಶ

ಕಬ್ಬಿನ ದರ ನಿಗದಿಯಲ್ಲಿ ಹಾವೇರಿ ಜಿಲ್ಲೆಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿಬೇಕು. ಪ್ರತಿ...