ನಮ್ಮ ಮೆಟ್ರೋದಲ್ಲಿ ಯುವತಿಯರನ್ನು ಅಸಭ್ಯವಾಗಿ ವಿಡಿಯೋ ಮಾಡುತ್ತಿದ್ದ ಯುವಕನ ಬಂಧನ

Date:

ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯರ ಖಾಸಗಿ ಅಂಗಾಂಗಗಳ ವಿಡಿಯೋ ಹಾಗೂ ಭಾವಚಿತ್ರ ತೆಗೆಯುತ್ತಿದ್ದ ಯುವಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್‍ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ ನಡೆದಿದೆ.

- Advertisement -

ಆರೋಪಿಗೆ ಬಿಎಂಆರ್‌ಸಿಎಲ್‌ 5,000 ರೂ. ದಂಡ ವಿಧಿಸಿದೆ. ವಶಕ್ಕೆ ಪಡೆಯಲಾದ ಆರೋಪಿಯನ್ನು ಮಹೇಶ್ ಎಂದು ಗುರುತಿಸಲಾಗಿದೆ. ಆರೋಪಿ, ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಭಾವಚಿತ್ರಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೋರೆಗಾಂವ್ ಭೀಮಾ ವಿಜಯೋತ್ಸವ ದಲಿತ ಅಸ್ಮಿತೆಯ ಕತೆಯನ್ನು ಬಲ್ಲಿರಾ?

ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬರು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗುತ್ತಿದ್ದರು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹಲ್ಲೆ ನಡೆಸಿದ್ದಾಳೆ. ಈ ವೇಳೆ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.

ಜಯನಗರ ಮೆಟ್ರೋ ನಿಲ್ದಾಣದಲ್ಲಿ ಯುವಕನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.

ಡ್ಯೂಟಿಯಲ್ಲಿ ಇಲ್ಲದಿದ್ದರೂ ಯುವತಿಯ ಸಹಾಯಕ್ಕೆ ಧಾವಿಸಿದ ಮೆಟ್ರೋ ಸೆಕ್ಯುರಿಟಿ ಗಾರ್ಡ್ ಸುಜೀತ್ ಹಾಗೂ ಎಸ್.ಜಿ ರಾಮ್ ಬಹದ್ದೂರ್ ಅವರನ್ನು ಬಿಎಂಆರ್‌ಸಿಎಲ್ ಅಭಿನಂದಿಸಿದೆ.

image 36 4
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...