ಬೆಂಗಳೂರಿನಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

Date:

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಮಹಿಳೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.

- Advertisement -

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್​ ನರ್ಸಿಂಗ್​​ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಹೊಟ್ಟೆಯಲ್ಲಿ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್​​​ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಆಪರೇಷನ್ ಮಾಡಲಾದ ಸಂದರ್ಭದಲ್ಲಿ ವೈದ್ಯರು ಯಡವಟ್ಟು ಮಾಡಿದ್ದಾರೆಂದು ಕುಟುಂಬದವರು ಆರೋಪ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ವೇಳೆ ಕರುಳಿಗೆ ಹಾನಿಯಾಗಿತ್ತು. ಆದರೆ, ಆ ವಿಚಾರವನ್ನು ವೈದ್ಯರು ಮುಚ್ಚಿಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಹಿತ್ಯ ಸಮ್ಮೇಳನ – ಜನ ಮರುಳೋ-ಜಾತ್ರೆ ಮರುಳೋ ಎಂದಾಗಬಾರದು!

ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದಿದ್ದರು ಪುನಃ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು.

ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಚಿಕ್ಕಮಗಳೂರು | ಚೇತನ್ ಗೊಡ್ಲುಮನೆ ಅವರಿಗೆ ಪಿಎಚ್‌ಡಿ ಪದವಿ ಪ್ರದಾನ 

ಗೊಡ್ಲುಮನೆ ಹೆಚ್.ಹೆಚ್. ರಮೇಶ್ ಗೌಡ ಹಾಗೂ ಹೆಚ್.ಆರ್. ಜಯಲಕ್ಷ್ಮಿ ದಂಪತಿಯ ಹಿರಿಯ...