ಮತದಾನದ ದಿನ ಸುಮಾರು ಶೇ.50ರಷ್ಟು ಕುಸಿದ ಮೆಟ್ರೋ ಪ್ರಯಾಣಿಕರ ಸಂಖ್ಯೆ

Date:

  • ಸಾಮಾನ್ಯವಾಗಿ ಪ್ರತಿದಿನ ಮೆಟ್ರೋದಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ
  • ಮತದಾನದ ದಿನ ಮೆಟ್ರೋದ ಎರಡು ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ಯಶಸ್ವಿಯಾಗಿ ಮುಗಿದಿದ್ದು, ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ. 54.53ರಷ್ಟು ಮತದಾನವಾಗಿದೆ. ಮತದಾನದ ದಿನ ಮತದಾರರ ಸಂಚಾರಕ್ಕೆ ಅನುಕೂಲವಾಗಲೆಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಡರಾತ್ರಿಯವರೆಗೂ ಮೆಟ್ರೋ ಸೇವೆ ನೀಡಿತ್ತು. ಆದರೆ, ಮತದಾನದ ದಿನದಂದು ಶೇ. 50ರಷ್ಟು ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿದಿದೆ.  

ಸಾಮಾನ್ಯವಾಗಿ ಪ್ರತಿ ದಿನ ಮೆಟ್ರೋದ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸರಾಸರಿ 5.85 ಲಕ್ಷ ಜನರು ಪ್ರಯಾಣಿಸುತ್ತಾರೆ. ವೈಟ್‌ಫೀಲ್ಡ್ ಮೆಟ್ರೋ ಮಾರ್ಗದಲ್ಲಿ 30,000 ಜನರು ಸಂಚರಿಸುತ್ತಾರೆ. ಬುಧವಾರ(ಮೇ 10) ರಾತ್ರಿ 9.30 ರವರೆಗೆ ನೇರಳೆ (ಕೆಂಗೇರಿ-ಬೈಯಪ್ಪನಹಳ್ಳಿ) ಮತ್ತು ಹಸಿರು (ನಾಗಸಂದ್ರ-ಸಿಲ್ಕ್ ಇನ್‌ಸ್ಟಿಟ್ಯೂಟ್) ಮಾರ್ಗಗಳಲ್ಲಿ 3,03,845 ಜನರು ಪ್ರಯಾಣಿಸಿದ್ದಾರೆ. ಕೆ ಆರ್‌ ಪುರ-ವೈಟ್‌ಫೀಲ್ಡ್ ಮಾರ್ಗದಲ್ಲಿ ಇದೇ ಸಮಯದಲ್ಲಿ 12,395 ಜನರು ಪ್ರಯಾಣಿಸಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ವಿಧಾನಸಭಾ ಚುನಾವಣೆಯ ದಿನದಂದು ಪೀಕ್ ಅವರ್‌ಗಳಲ್ಲಿ ಐದು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಿವೆ. ಪೀಕ್ ಅವರ್ ಅಲ್ಲದ ಸಮಯದಲ್ಲಿ 7-10 ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಸಂಚರಿಸಿವೆ. ವೈಟ್‌ಫೀಲ್ಡ್ ಮಾರ್ಗದಲ್ಲಿ ಪ್ರತಿ 12 ನಿಮಿಷಗಳಿಗೊಮ್ಮೆ ರೈಲುಗಳು ಚಲಿಸಿವೆ. ಮತದಾನದ ದಿನದಂದು ಮಧ್ಯರಾತ್ರಿಯವರೆಗೆ ಮೆಟ್ರೋ ರೈಲುಗಳು ಸಂಚರಿಸಿವೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಟರ್ಮಿನಲ್ ನಿಲ್ದಾಣಗಳಿಂದ (ಬೈಯಪ್ಪನಹಳ್ಳಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ವೈಟ್‌ಫೀಲ್ಡ್ ಮತ್ತು ಕೆಆರ್ ಪುರ) ಕೊನೆಯ ರೈಲು ಮೇ 11 ರಂದು 12.05 ಕ್ಕೆ ಹೊರಟಿದೆ. ಮೆಜೆಸ್ಟಿಕ್‌ನಿಂದ ಕೊನೆಯ ಮೆಟ್ರೋ ರೈಲು ಮೇ 11 ರಂದು 12.35 ಕ್ಕೆ ಬೈಯಪ್ಪನಹಳ್ಳಿ, ನಾಗಸಂದ್ರ, ಸಿಲ್ಕ್ ಸಂಸ್ಥೆ ಮತ್ತು ಕೆಂಗೇರಿ ಕಡೆಗೆ ಹೊರಟಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಶೇ.54.53ರಷ್ಟು ಮತದಾನ

ಇತರ ದಿನಗಳಲ್ಲಿ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ರಾತ್ರಿ 11 ಗಂಟೆಗೆ ಹೊರಡುತ್ತದೆ. ಬಿಎಂಆರ್‌ಸಿಎಲ್ ಮತದಾನದ ದಿನ ನೀಡಿದ ಈ ಹೆಚ್ಚುವರಿ ಸಮಯವು ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸುತ್ತದೆ ಎಂದು ಭಾವಿಸಿತ್ತು. ಆದರೆ, ನಿರೀಕ್ಷೆಗೆ ತಕ್ಕ ಪ್ರಯಾಣಿಕರ ಸಂಚಾರವಾಗಿಲ್ಲ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...

ಬೆಂಗಳೂರು | ಕುದುರೆಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ದೃಢ; ಡಿ.ಜೆ.ಹಳ್ಳಿ `ರೋಗಪೀಡಿತ ವಲಯ’

ಅಕಾಲಿಕ ಮಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೇ,...

ತಾಪಮಾನ ಹೆಚ್ಚಳ | ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ ಪಡೆದ ರಾಜ್ಯದ ವಕೀಲರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ...

ಬೆಂಗಳೂರು | ಗಾಳಿ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ: ಈ ಮಾರ್ಗದಲ್ಲಿ ಸಂಚಾರ ಬಂದ್

ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದ...