ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಶಾಂತಿ ನಗರದ ಶಾಸಕ ಎನ್ ಎ ಹ್ಯಾರಿಸ್ ಅಧಿಕಾರ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು, ಬೆಂಗಳೂರಿನ ಜನಕ್ಕೆ ಅನುಕೂಲವಾಗುವ ರೀತಿ ಕೆಲಸ ಮಾಡಲು ನನ್ನ ಪ್ರಯತ್ನ ಮತ್ತು ಶ್ರಮ ಇರುತ್ತದೆ. ಅಲ್ಲದೇ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ನನ್ನ ಮೇಲೆ ನಂಬಿಕೆಯಿಟ್ಟು ಅವಕಾಶ ಕೊಟ್ಟಿದ್ದಾರೆ. ಆ ನಂಬಿಕೆಗೆ ಚ್ಯುತಿ ಬಾರದಂತೆ ಶೇ. 100 ರಷ್ಟು ಕಾರ್ಯವನ್ನು ಪೂರೈಸುತ್ತೇನೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ
ಇಲ್ಲಿ ಯಾವುದಾದರೂ ಸಮಸ್ಯೆಗಳೇನಾದರೂ ಇದ್ದರೆ ಅದನ್ನು ಇನ್ನೆರಡು ಮೂರು ದಿನಗಳಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುತ್ತೇನೆ ಎಂದರು.
ಅಧಿಕಾರ ಸ್ವೀಕಾರ ಮಾಡುವ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳು ಮತ್ತು ಜಲ ಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ ಕೆ ಶಿವಕುಮಾರ್ ಹಾಗೂ ಸಚಿವರಾದ ಕೃಷ್ಣ ಭೈರೇಗೌಡ, ರಹೀಂ ಖಾನ್, ಜಮೀರ್ ಅಹಮದ್ ಖಾನ್ ಮತ್ತು ಶಾಸಕರಾದ ರಿಜ್ವಾನ್ ಅರ್ಷದ್, ಪ್ರಿಯಾಕೃಷ್ಣ ಅವರು ಉಪಸ್ಥಿತರಿದ್ದರು.