ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

Date:

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು, ರಾಮನಗರ, ತುಮಕೂರು ಹಾಗೂ ವೈಟ್‌ಫೈಲ್ಡ್ ನಿಲ್ದಾಣಗಳನ್ನು (15 ನಿಲ್ದಾಣ) ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಆಧುನೀಕರಿಸಲು ಉದ್ದೇಶಿಸಲಾಗಿದೆ” ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ.

- Advertisement -

ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ರೈಲ್ವೆ ವಿಭಾಗೀಯ ಕಚೇರಿಯಲ್ಲಿ ವಿಭಾಗೀಯ ರೈಲ್ವೆ ಬಳಕೆದಾರರ ಸಲಹಾ ಸಮಿತಿಯ (ಡಿಆರ್‌ಯುಸಿಸಿ) ಮೂರನೇ ಸಭೆ ನಡೆಸಿತು. ಈ ವೇಳೆ, ಮಾತನಾಡಿದ ಅವರು, “ಯಶವಂತಪುರ-ಚೆನ್ನಸಂದ್ರ ನಡುವೆ ದ್ವಿಪಥೀಕರಣ, ಬೈಯ್ಯಪ್ಪನಹಳ್ಳಿ-ಹೊಸೂರು ಮತ್ತು ಪೆನುಕೊಂಡ-ಧರ್ಮಾವರಂ ನಡುವೆ ವಿದ್ಯುದ್ದೀಕರಣದೊಂದಿಗೆ ದ್ವಿಪಥೀಕರಣ ಮತ್ತು ಬೆಂಗಳೂರು ಕಂಟೋನ್ಮೆಂಟ್ – ವೈಟ್‌ಫೀಲ್ಡ್‌ನ ಚತುಷ್ಪಥ ಕಾಮಗಾರಿ ವೇಗವಾಗಿ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನವೆಂಬರ್ 2023ರಲ್ಲಿ ವಿಭಾಗವು ತನ್ನ ಅತ್ಯಧಿಕ ಸರಕು ಆದಾಯ ₹24.22 ಕೋಟಿ ಗಳಿಸಿದೆ. ವಿಭಾಗವು ಪ್ರಸಕ್ತ ವರ್ಷದಲ್ಲಿ ಇಲ್ಲಿಯವರೆಗೆ ₹173.17 ಕೋಟಿ ಒಟ್ಟು ಸರಕು ಸಾಗಣೆ ಆದಾಯವನ್ನು ದಾಖಲಿಸಿದೆ” ಎಂದು ಹೇಳಿದ್ದಾರೆ.

“ಏಪ್ರಿಲ್ 2023ರಲ್ಲಿ ವಿಭಾಗವು, ಪೆಟ್ರೋಲಿಯಂ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆಯನ್ನು ಹೊಸದಾಗಿ ಪ್ರಾರಂಭಿಸಿದೆ. ಇಲ್ಲಿಯವರೆಗೆ 63 ರೇಕ್‌ಗಳನ್ನು ಲೋಡ್ ಮಾಡಲಾಗಿದ್ದು, ₹9.33 ಕೋಟಿ ಆದಾಯ ಗಳಿಸಿದೆ” ಎಂದು ಮಾಹಿತಿ ನೀಡಿದ್ದಾರೆ.

“ವಿಭಾಗವು ಅಕ್ಟೋಬರ್, 2023ರಲ್ಲಿ ದೊಡ್ಡಬಳ್ಳಾಪುರದಿಂದ ರಾಜಸ್ಥಾನದ ಕನಕಪುರಕ್ಕೆ ಮೊದಲ ಬಾರಿಗೆ ಟ್ರ್ಯಾಕ್ಟರ್‌ಗಳನ್ನು ಲೋಡ್ ಮಾಡಿದೆ. ಆಟೋಮೊಬೈಲ್ ಸಾಗಣೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 430 ರೇಕ್‌ಗಳನ್ನು ಲೋಡ್ ಮಾಡಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ 35% ಹೆಚ್ಚಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರದ ಭವಿಷ್ಯ ಯುವ ಸಮೂಹದ ಕೈಯಲ್ಲಿದೆ : ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

“ಒಟ್ಟಾರೆ, ಸರಕು ಲೋಡಿಂಗ್ ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ, ವಿಭಾಗವು ನವೆಂಬರ್, 2023 ರವರೆಗೆ 515 ರೇಕ್‌ಗಳನ್ನು ಲೋಡ್ ಮಾಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 46% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕ್ಯಾತಸಂದ್ರ, ನಿಡವಂದ, ಪೆನುಕೊಂಡ ಮತ್ತು ವೈಟ್‌ಫೀಲ್ಡ್‌ನಲ್ಲಿರುವ ಗೂಡ್ಸ್ ಶೆಡ್‌ಗಳನ್ನು ಫೆನ್ಸಿಂಗ್/ಬೌಂಡರಿ, ಶೆಲ್ಟರ್, ವರ್ತಕರ ಕೊಠಡಿಗಳು, ಕಾರ್ಮಿಕರಿಗೆ ಕ್ಯಾಂಟೀನ್, ವಿಶ್ರಾಂತಿ ಕೊಠಡಿ ಮುಂತಾದ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೆ ಏರಿಸಲು ಉದ್ದೇಶಿಸಲಾಗಿದೆ” ಎಂದು ಹೇಳಿದ್ದಾರೆ.

ರೈಲು ನಿಲ್ದಾಣಗಳಲ್ಲಿನ ಪ್ರಯಾಣಿಕರ ಸೌಕರ್ಯಗಳನ್ನು ಸುಧಾರಿಸಲು ರೈಲುಗಳಲ್ಲಿ ಪ್ರಯಾಣಿಕರ ಸುಖಾನುಭವವನ್ನು ವರ್ಧಿಸಲು ಮತ್ತು ವಿಭಾಗದ ಪಾರ್ಸೆಲ್ ಆದಾಯವನ್ನು ಹೆಚ್ಚಿಸಲು ಸಲಹೆಗಳನ್ನು ನೀಡಲು ಅವರು ಸದಸ್ಯರಿಗೆ ಕರೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...