ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆ. 29ಕ್ಕೆ ಮುಂದೂಡಿಕೆ

Date:

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಆಗಸ್ಟ್ 29ರವರೆಗೆ ಮುಂದೂಡಿಕೆ ಮಾಡಿದೆ.

- Advertisement -

ಜೊತೆಗೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮುಡಾ ಪ್ರಕರಣ | ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ: ಸಿದ್ದರಾಮಯ್ಯ

ಸಿಎಂ ರಿಟ್ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಕೈಗೆತ್ತಿಕೊಳ್ಳುತ್ತಿದ್ದಂತೆ ರಾಜ್ಯಪಾಲರ ಪರ ವಾದ ಹಾಜರಾದ ವಕೀಲ ತುಷಾರ್ ಮೆಹ್ತಾ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು.

“ರಾಜ್ಯಪಾಲರ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲಾಗಿತ್ತು. ಶೋಕಾಸ್ ನೋಟಿಸ್ ಹಿಂಪಡೆಯುವ ಸಲಹೆಯನ್ನು ರಾಜ್ಯ ಸಂಪುಟವು ಆಗಸ್ಟ್ 1ರಂದು ನೀಡಿದೆ. ಆದರೆ ಸಲಹೆಯನ್ನು ಧಿಕ್ಕರಿಸಿ ರಾಜ್ಯಪಾಲರು ಈ ನಿರ್ಧಾರ ಮಾಡಿದ್ದು, ಅಸಾಂವಿಧಾನಿಕವಾಗಿದೆ. ರಾಜ್ಯಪಾಲರು ಕಾನೂನಿನ ಎಲ್ಲಾ ಅಂಶಗಳನ್ನು ಗಾಳಿಗೆ ತೂರಿ ಆದೇಶ ಮಾಡಿರುವುದರಿಂದ ಅದನ್ನು ವಜಾ ಮಾಡಬೇಕು” ಎಂದು ಸಿಎಂ ಪರ ವಕೀಲರು ಮನು ಸಿಂಘ್ವಿ ವಾದಿಸಿದ್ದಾರೆ.

“ಅತ್ಯುನ್ನತ ಸ್ಥಾನದಲ್ಲಿರುವ ಹಲವರ ವಿರುದ್ಧ ಅಭಿಯೋಜನಾ ಮಂಜೂರಾತಿ ಕೋರಿರುವ ಅರ್ಜಿಗಳು ವರ್ಷಗಳಿಂದ ಬಾಕಿಯಿದೆ. ಹಾಗಿರುವಾಗ ರಾಜ್ಯಪಾಲರು ತಮ್ಮ ವಿಚಾರದಲ್ಲಿ ಶರವೇಗದಲ್ಲಿ ನಿರ್ಧಾರ ಕೈಗೊಂಡಿರುವುದು ಪಕ್ಷಪಾತದಿಂದ ಕೂಡಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಮತ್ತು ಸಿಎಂ ರಾಜೀನಾಮೆ ನೀಡುವಂತೆ ಮಾಡಲು ಈ ದೂರು ನೀಡಲಾಗಿದೆ” ಎಂದು ವಕೀಲರು ಆರೋಪಿಸಿದರು.

ಇನ್ನು ಈ ರಿಟ್ ಅರ್ಜಿ ಪ್ರತಿ ಇಂದು ಬೆಳಿಗ್ಗೆಯಷ್ಟೆ ಲಭ್ಯವಾದ ಕಾರಣ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು. ಆದ್ದರಿಂದಾಗಿ ವಿಚಾರಣೆಯನ್ನು ಮುಂದೂಡಬೇಕು ಎಂದು ರಾಜ್ಯಪಾಲರ ಪರ ವಕೀಲರು ಪ್ರಕರಣದ ಆರಂಭದಲ್ಲಿಯೇ ಮನವಿ ಮಾಡಿದ್ದಾರೆ. ಹಾಗೆಯೇ ರಾಜ್ಯಪಾಲರ ಆದೇಶಕ್ಕೆ ತಡೆಯಾಜ್ಞೆ ನೀಡಬೇಡಿ ಎಂದೂ ಸಾಲಿಟರಲ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...