ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಬಹುಕೋಟಿ ಹಗರಣ: ಲೋಕಾಯುಕ್ತ ದಾಳಿ

Date:

  • ಡಿವೈಎಸ್ಪಿ ಪ್ರಕಾಶ್ ರೆಡ್ಡಿ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರ ದಾಳಿ
  • ₹55 ಕೋಟಿ ನಕಲಿ ಕಾಮಗಾರಿ ನಡೆದಿರುವ ಬಗ್ಗೆ ಆರೋಪ

ಒಂದೇ ತಿಂಗಳಲ್ಲಿ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಇದೀಗ, ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ಬಹುಕೋಟಿ ಹಗರಣ ನಡೆದಿದ್ದು, ₹55 ಕೋಟಿ ನಕಲಿ ಕಾಮಗಾರಿ ನಡೆದಿರುವ ಬಗ್ಗೆ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆ, ಬೆಂಗಳೂರಿನ ಯಶವಂತಪುರದಲ್ಲಿ ಡಿವೈಎಸ್ಪಿ ಪ್ರಕಾಶ್ ರೆಡ್ಡಿ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳು ಮೂರು ನಕಲಿ ಕಂಪನಿಗಳಿಗೆ ಗುತ್ತಿಗೆ ನೀಡಿರುವುದು ಬೆಳಕಿಗೆ ಬಂದಿದೆ.

ಕಳೆದ ತಿಂಗಳು ಲೋಕಾಯುಕ್ತ ದಾಳಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ತಿಂಗಳು ಕಾಮಗಾರಿಯನ್ನೇ ನಡೆಸದೆ ₹ 55 ಕೋಟಿ ಬಿಲ್ ಪಾವತಿಸುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಡಿ. ದೇವರಾಜ ಅರಸು ಟ್ರಕ್ ಟರ್ಮಿನಲ್ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು.

ಈ ಸುದ್ದಿ ಓದಿದ್ದೀರಾ? ದಯಾಮರಣ ಕೋರಿ ಪೊಲೀಸರಿಗೆ ಪತ್ರ ಬರೆದ ಆಟೋ ಚಾಲಕ

ಸಂಸ್ಥೆಯ ಅಧ್ಯಕ್ಷ ಡಿ.ಎಸ್. ವೀರಯ್ಯ ಮತ್ತು ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಶಂಕರಪ್ಪ ಅಕ್ರಮವಾಗಿ ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿರುವ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಕುರಿತು ಲೋಕಾಯುಕ್ತದ ಬೆಂಗಳೂರು ನಗರ ಪೊಲೀಸ್ ಘಟಕದ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದರು. ಆರೋಪದಲ್ಲಿ ಮೇಲ್ನೋಟಕ್ಕೆ ಸತ್ಯಾಂಶವಿರುವುದು ಕಂಡುಬಂದಿರುವ ಕಾರಣದಿಂದ ಶಾಂತಿನಗರದ ಬಿಎಂಟಿಸಿ ಕಟ್ಟಡದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿ ಮೇಲೆ ಕಳೆದ ತಿಂಗಳು ದಾಳಿ ಮಾಡಿ, ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...