ರೌಡಿಶೀಟರ್ ಕೊಲೆ | 11 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Date:

  • ಜೈಲಿನಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಕೊಲೆ
  • ಹಳೆ ದ್ವೇಷದ ಹಿನ್ನೆಲೆ ಹತ್ಯೆ ನಡೆದಿರುವ ಶಂಕೆ

ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪರಪ್ಪನ ಅಗ್ರಹಾರ ಪೊಲೀಸರು 11 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗ್ರೇಸ್ ವಾಲ್ಟರ್, ಶ್ರೀನಿವಾಸ ಅಲಿಯಾಸ್​​​ ಪಾಪ, ಗೋಕುಲ್, ಸುರೇಶ್​​​​​, ಕಾರ್ತಿಕ್, ವಾಲೆ ಪ್ರವೀಣ, ಸಿದ್ದಾಪುರ ಸುನೀಲ್,‌ ಕಣ್ಣನ್ ವೇಲ, ಪ್ರದೀಪ್, ಮನು ಸೇರಿ 11 ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ರೌಡಿಶೀಟರ್​ ವಿಲ್ಸನ್​ಗಾರ್ಡನ್​ ನಾಗ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗ್ರಹದಿಂದ ಬಿಡುಗಡೆಯಾಗಿ ಹೊರ ಬಂದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ ಸಿದ್ದಾಪುರ ಮಹೇಶ್‌ನನ್ನು ವಿರೋಧಿ ಗ್ಯಾಂಗ್ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿತ್ತು.

ಹತ್ಯೆಯಾದ ರೌಡಿಶೀಟರ್ ಅನೇಕ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದನು. 2020ರಲ್ಲಿ ಜಯನಗರದಲ್ಲಿ ನಡೆದಿದ್ದ ಮದನ್​ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಮಹೇಶ್​ ಜೈಲು ಸೇರಿದ್ದನು. ಈತನಿಗೆ ಆಗಸ್ಟ್‌ 6ರಂದು ಜೈಲಿನಿಂದ ಬಿಡುಗಡೆಯಾಗಿತ್ತು. ನಗರದ ಹೊಸ ರೋಡ್ ಜಂಕ್ಷನ್ ಬಳಿ ರೌಡಿಶೀಟರ್ ಕಾರಿನಲ್ಲಿ ತೆರಳುತ್ತಿದ್ದನು. ಈ ವೇಳೆ, ದಾಳಿ ನಡೆಸಿದ ದುಷ್ಕರ್ಮಿಗಳು ಕಾರು ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದರು. ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದರು.

ಸಿದ್ದಾಪುರ ಮಹೇಶ್‌ನ ವಿರೋಧಿ ಗ್ಯಾಂಗ್​ ಎನಿಸಿಕೊಂಡಿದ್ದ ರೌಡಿಶೀಟರ್​​​ ವಿಲ್ಸನ್​​ಗಾರ್ಡನ್​​​ ನಾಗ, ಡಬಲ್ ಮೀಟರ್​ ಮೋಹನ್​​, ಸುನೀಲ್​ ಸೇರಿದಂತೆ ಹಲವರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್​​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  

ಹಳೆ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್‌ನಲ್ಲಿ ಮಹೇಶ್ ಲೀಡರ್ ಆಗಿದ್ದನು.

ವಿಲ್ಸನ್​ಗಾರ್ಡನ್​​​ ನಾಗನ ವಿರೋಧಿಗಳನ್ನು ಒಗ್ಗೂಡಿಸಿ ರೌಡಿಶೀಟರ್ ಸಿದ್ದಾಪುರ ಮಹೇಶ್ ಕೊಲೆಗೆ ಸಂಚು ರೂಪಿಸಿದ್ದನು ಎಂದು ತಿಳಿದುಬಂದಿದೆ. ಈ ಸಂಚಿನ ಬಗ್ಗೆ ತಿಳಿದ ನಾಗನ ಗ್ಯಾಂಗ್ ಮಹೇಶ್‌ನನ್ನು ಹತ್ಯೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜೈಲಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ರೌಡಿಶೀಟರ್‌ನ ಕೊಲೆ

ಈ ಹಿಂದೆ ಶಾಂತಿನಗರ ಲಿಂಗನನ್ನು ನಾಗನ ಗ್ಯಾಂಗ್ ಕೊಲೆ ಮಾಡಿತ್ತು. ಅದಕ್ಕೆ ಪ್ರತೀಕಾರವಾಗಿ ಮಹೇಶ್ ನಾಗನ ಗೆಳೆಯ ಮದನ್​ನನ್ನು ಕೊಲೆ ಮಾಡಿದ್ದನು. ಮದನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮಹೇಶನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದೀಗ ವಿಲ್ಸನ್ ಗಾರ್ಡನ್ ನಾಗನ ಗ್ಯಾಂಗ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದೆ. ಡಬಲ್ ಮೀಟರ್ ಮೋಹನ್ ಹಾಗೂ ವಿಲ್ಸನ್​ ಗಾರ್ಡನ್​ ನಾಗನಿಗಾಗಿ ಪೊಲೀಸರ ಹುಡುಕಾಟ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಮೀಸಲು: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ ಎನ್ನುವುದು ಬರೀ ಘೋಷಣೆಯೇ?

ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು...

ಜನರಲ್ಲಿ ಡೆಂಘೀ ಜಾಗೃತಿ: ರಾಜಧಾನಿಯಲ್ಲಿ ಸ್ವತಃ ಫೀಲ್ಡಿಗಿಳಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಡೆಂಘೀ ರೋಗ ಹೆಚ್ಚಳವಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಈ ಬಗ್ಗೆ ಜನರಲ್ಲಿ...

ಬೀದರ್-ಬೆಂಗಳೂರು ವಿಮಾನ ಸೇವೆ: 2 ವಾರದಲ್ಲಿ ವರದಿ ಸಲ್ಲಿಸಲು ಸಚಿವ ಎಂ.ಬಿ.ಪಾಟೀಲ್ ಸೂಚನೆ

ಬೀದರ್–ಬೆಂಗಳೂರು ನಡುವೆ ನಾಗರಿಕ ವಿಮಾನಯಾನ ಸೇವೆ ಪುನ: ಆರಂಭಿಸುವ ಕುರಿತಂತೆ ವಿವಿಧ...

ಜು. 19: ಬ್ಯಾರಿ ಅಕಾಡೆಮಿ ಅಧ್ಯಕ್ಷ-ಸದಸ್ಯರ ಪದಗ್ರಹಣ; ‘ಪಿರ್ಸಪ್ಪಾಡ್‌’ ಬ್ಯಾರಿ ಸಾಂಸ್ಕೃತಿಕ ಸಂಭ್ರಮ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಪಿರ್ಸಪ್ಪಾಡ್‌ (ಬ್ಯಾರಿ ಸಾಂಸ್ಕೃತಿಕ ಸಂಭ್ರಮ)...