ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್-​ವೇ ಅವಾಂತರ: ಬಿಡದಿ ಬಳಿ ನಿರ್ಗಮನ ರಸ್ತೆ ಬಂದ್‌ ಮಾಡಿದ ಹೆದ್ದಾರಿ ಪ್ರಾಧಿಕಾರ

Date:

ಬೆಂಗಳೂರು-ಮೈಸೂರು ನಡುವೆ ಎಕ್ಸ್‌ಪ್ರೆಸ್‌-ವೇ ಆರಂಭವಾದಾಗಿನಿಂದಲೂ ನಾನಾ ರೀತಿಯ ಸಮಸ್ಯೆಗಳು, ಅವಾಂತರಗಳಿಂದ ಸುದ್ದಿಯಾಗುತ್ತಲೇ ಇದೆ. ಮಳೆ, ಅಪಘಾತ, ಟೋಲ್‌ ಕಾರಣದಿಂದಾಗಿ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ, ಬಿಡದಿ ಬಳಿ ಎಕ್ಸ್‌ಪ್ರೆಸ್‌-ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರ ಬಂದ್‌ ಮಾಡಿದೆ. ಮತ್ತೆ ಆಕ್ರೋಶಕ್ಕೆ ಗುರಿಯಾಗಿದೆ.

- Advertisement -

ಆರಂಭದಲ್ಲಿ ಎಕ್ಸ್‌ಪ್ರೆಸ್‌-ವೇ ನಡುವಿನ ಸಂಚಾರ ಬೆಂಗಳೂರು-ಮೈಸೂರು ನಡುವೆ ಮಾತ್ರವೇ ಇತ್ತು. ರಸ್ತೆ ಹಾದುಹೋಗುವ ರಾಮನಗರ, ಮಂಡ್ಯ ಜಿಲ್ಲಾ ಕೇಂದ್ರಗಳು ಸೇರಿದಂತೆ ಯಾವುದೇ ಪಟ್ಟಣಕ್ಕೆ ಸಂಪರ್ಕವೇ ಇರಲಿಲ್ಲ. ಹೆದ್ದಾರಿ ಪ್ರಾಧಿಕಾರದ ಈ ಧೋರಣೆಯ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು. ಆ ಬಳಿಕ, ಎಲ್ಲ ನಗರಗಳಿಗೆ ಸಂಪರ್ಕಿಸುವಂತೆ ಎಕ್ಸ್‌ಪ್ರೆಸ್‌-ವೇಗೆಯಿಂದ ಸರ್ವೀಸ್‌ ರಸ್ತೆಗೆ ನಿರ್ಗಮನ ಮತ್ತು ಆಗಮನ ದ್ವಾರಗಳನ್ನು ತೆರೆಯಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಇನ್ನು, ಎಕ್ಸ್‌ಪ್ರೆಸ್‌-ವೇ ಸಂಚಾರಕ್ಕೆ ದುಬಾರಿ ಟೋಲ್‌ ಶುಲ್ಕ ವಿಧಿಸಲಾಗಿರುವ ಪರಿಣಾಮ, ಬೆಂಗಳೂರಿನ ಶೇಷಗಿರಿಹಳ್ಳಿ ಬಳಿಯ ಟೋಲ್‌ನಲ್ಲಿ ಸುಂಕ ಪಾವತಿಸುವುದನ್ನು ತಪ್ಪಿಸಿಲು ಹಲವಾರು ವಾಹನ ಚಾಲಕರು ಬಿಡದಿ ಬಳಿಯೇ ಎಕ್ಸ್‌ಪ್ರೆಸ್‌-ವೇ ಇಂದ ಸರ್ವೀಸ್‌ ರಸ್ತೆಗೆ ಬಂದು, ಸರ್ವೀಸ್‌ ರಸ್ತೆ ಮೂಲಕ ಬೆಂಗಳೂರು ತಲುಪುತ್ತಿದ್ದರು.

ಇದರಿಂದ, ಟೋಲ್ ಸಂಗ್ರಹ ಕಡಿಮೆಯಾಗುತ್ತಿತ್ತು. ಈಗ, ಟೋಲ್ ಸುಂಕವನ್ನು ವಸೂಲಿ ಮಾಡಲೇಬೇಕು ಮತ್ತು ಸಂಗ್ರಹವನ್ನು ಹೆಚ್ಚಿಸಿಕೊಳ್ಳಬೇಕೆಂದು ನಿರ್ಧರಿಸಿರುವ ಹೆದ್ದಾರಿ ಪ್ರಾಧಿಕಾರಿ, ಬಿಡದಿ ಬಳಿ ಎಕ್ಸ್‌ಪ್ರೆಸ್‌ವೇ ಮತ್ತು ಸರ್ವೀಸ್‌ ರಸ್ತೆ ನಡುವಿನ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಿದೆ. ಎಕ್ಸ್‌ಪ್ರೆಸ್‌-ವೇನಲ್ಲಿ ಬರುವ ವಾಹನ ಸವಾರರು ಶೇಷಗಿರಿಹಳ್ಳಿ ಟೋಲ್‌ನಲ್ಲಿ ಸುಂಕ ಪಾವತಿಸಿಯೇ ಬೆಂಗಳೂರಿಗೆ ಬರಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ವರದಿ ಓದಿದ್ದೀರಾ?: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌-ವೇ | ಟೋಲ್‌ ಎಂಬ ಸರ್ಕಾರಿ ದರೋಡೆ; 20 ತಿಂಗಳಲ್ಲಿ 438 ಕೋಟಿ ವಸೂಲಿ

ಪ್ರಾಧಿಕಾರದ ನಡೆಯ ವಿರುದ್ಧ ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಸೂಚನೆಯನ್ನು ನೀಡದೆ, ಏಕಾಏಕಿ ನಿರ್ಗಮನ ರಸ್ತೆಯನ್ನು ಬಂದ್‌ ಮಾಡಲಾಗಿದೆ. ಈ ಧೋರಣೆ ಸರಿಯಲ್ಲ. ಮೈಸೂರು-ಮಂಡ್ಯದಿಂದ ಬಂದವರು ಕುಂಬಳಗೋಡು ಸೇರಿದಂತೆ ಇತರ ಪ್ರದೇಶಗಳಿಗೆ ಹೋಗಬೇಕೆಂದರೆ ಎಕ್ಸ್‌ಪ್ರೆಸ್‌-ವೇಯಿಂದ ಸರ್ವೀಸ್‌ ರಸ್ತೆಗೆ ಹೇಗೆ ಬರಬೇಕು. ಕೆಂಗೇರಿಗೆ ಬಂದು, ವಾಪಸ್‌ ಹೋಗಬೇಕೇ ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...