ನಗರ್ತಪೇಟೆ ಅಗ್ನಿ ಅವಘಡ | ಗೃಹ ಸಚಿವ ಪರಮೇಶ್ವರ್‌, ಸಚಿವ ಜಮೀರ್‌ ಅಹಮದ್‌ ಖಾನ್ ಭೇಟಿ

Date:

ವಿದ್ಯುತ್ ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿಅವಘಡ ಸಂಭವಿಸಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದರು.

- Advertisement -

ನಗರ್ತಪೇಟೆಯಲ್ಲಿ ಅಗ್ನಿಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಎಫ್‌ಎಸ್‌ಎಲ್‌ನವರು ಸ್ಥಳಕ್ಕೆ ಭೇಟಿ ನೀಡಿ ಸ್ಯಾಂಪಲ್‌ ಸಂಗ್ರಹಿಸಿದ್ದಾರೆ. ವರದಿ ನಂತರ ಘಟನೆಯ ಬಗ್ಗೆ ಗೊತ್ತಾಗಲಿದೆ. ಸಂತ್ರಸ್ತರ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಮಾತನಾಡುತ್ತೇನೆ. ಇವತ್ತು ಬೆಳಗ್ಗೆ 3.15 ಗಂಟೆ ಸುಮಾರಿಗೆ ಕೃಷ್ಣ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 38 ವರ್ಷದ ಮದನ್ ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ” ಎಂದು ಹೇಳಿದರು.

“ಮೊದಲು ನೆಲಮಹಡಿಯಲ್ಲಿ ಬೆಂಕಿ ತಗುಲಿದೆ. ತದನಂತರ ಎರಡನೇ ಮಹಡಿ, ಮೂರನೇ ಮಹಡಿವರೆಗೆ ಬೆಂಕಿ ಹಬ್ಬಿದೆ. ಮೇಲೆ ವಾಸವಿದ್ದವರು ತೀರಿಕೊಂಡಿದ್ದಾರೆ. ತನಿಖೆಯ ನಂತರ ಘಟನೆಗೆ ಕಾರಣ ಏನೆಂಬುದು ಗೊತ್ತಾಗಲಿದೆ ಎಂದು ಹೇಳಿದರು. ಪ್ಲಾಸ್ಟಿಕ್ ವಸ್ತುಗಳು, ರಬ್ಬರ್ ಮ್ಯಾಟ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ಶೇಖರಿಸಿಟ್ಟಿದ್ದರು. ಬೆಂಕಿ ತಗುಲಿದ ನಂತರ ಮೇಲೆ ಹೋಗಲು ಆಗಿಲ್ಲ. ಕೆಳ ಮಹಡಿಯಲ್ಲಿ ಸತ್ತಿರುವ ಮದನ್ ಎಂಬಾತ ಮೇಲ್ಮಹಡಿಯ ತನ್ನ ಮನೆಗೆ ಬೀಗ ಹಾಕಿಕೊಂಡು ಬಂದಿದ್ದ. ಇದರಿಂದ ಅವರು ಹೊರಬರಲು ಸಾಧ್ಯವಾಗಿಲ್ಲ. ಘಟನೆಯಲ್ಲಿ ಒಟ್ಟು ಐವರು ತೀರಿಕೊಂಡಿದ್ದಾರೆ‌” ಎಂದರು.

“ಇದೊಂದು ದುರದೃಷ್ಟಕರ ಘಟನೆ.‌ ಈ ರೀತಿ ಆಗಬಾರದಾಗಿತ್ತು. ಚಿಕ್ಕ ಜಾಗದಲ್ಲಿ ನಾಲ್ಕೈದು ಮಹಡಿಯ ಕಟ್ಟಡಗಳನ್ನು ಕಟ್ಟಿದ್ದಾರೆ. ಈ ಭಾಗದಲ್ಲಿ ಸಾವಿರಾರು ಬಿಲ್ಡಿಂಗ್‌ಗಳು ಇದೇ ರೀತಿ ಇವೆ. ಈ ಬಗ್ಗೆ ಬಿಬಿಎಂಪಿ ಯವರು ಗಮನಹರಿಸಬೇಕು. ಟ್ರೇಡ್ ಲೈಸೆನ್ಸ್ ಕೊಡುವವರು ಬಿಬಿಎಂಪಿಯವರು. ಇಂತಹ ಅವಘಡಗಳಾದ ನಮಗೆ ಗೊತ್ತಾಗುತ್ತದೆ. ಬಹುತೇಕರು ಗೋಡನ್ ರೀತಿ ಮಾಡಿಕೊಂಡು, ಅಲ್ಲೇ ವಾಸವಿದ್ದಾರೆ” ಎಂದು ಹೇಳಿದರು.‌

ಸಚಿವ ಜಮೀರ್ 3

ದುರಂತ ಸ್ಥಳಕ್ಕೆ ಜಮೀರ್ ಅಹಮದ್ ಖಾನ್ ಭೇಟಿ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಗೊಂಡು ದುರಂತ ನಡೆದ ಸ್ಥಳ ಹಾಗೂ ನಗರ್ತಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ಪರಿಹಾರ ನೀಡಿದರು.

ವಿಲ್ಸನ್ ಗಾರ್ಡನ್ ಚೆನ್ನಯ್ಯನ ಪಾಳ್ಯದಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿ ಮನೆಗಳು ಹಾನಿ ಯಾದ ಸ್ಥಳಕ್ಕೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಕ್ಕೆ ಐದು ಲಕ್ಷ ರೂ., ತಾಯಿ-ಮಗಳು ಗಾಯಳು ಕುಟುಂಬಕ್ಕೆ ಎರಡು ಲಕ್ಷ ರೂ., ಇಬ್ಬರು ಗಾಯಾಳು ಕುಟುಂಬಕ್ಕೆ ಎರಡು ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 25 ಸಾವಿರ ರೂ. ನೀಡಿದರು. ಕೆ ಎಂ ಡಿಸಿ ಅಧ್ಯಕ್ಷ ಅಲ್ತಾಫ್ ಖಾನ್ ಉಪಸ್ಥಿತರಿದ್ದರು.

ನಂತರ ಬೆಂಗಳೂರು ನಗರ್ತ ಪೇಟೆಯಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕ ನಡೆದ ಸ್ಥಳಕ್ಕೆ ಭೇಟಿ ನೀಡಿದ ಸಚಿವರೂ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಮದನ್, ಸುರೇಶ್ ಕುಟುಂಬಕ್ಕೆ ವೈಯಕ್ತಿಕವಾಗಿ ತಲಾ ಐದು ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದರು. ಮುಖಂಡ ಯುವರಾಜ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...