ಹೊಸ ವರ್ಷ: ನಮ್ಮ ಮೆಟ್ರೋ ಸೇವೆ ವಿಸ್ತರಣೆ; ರಾತ್ರಿ ಎಷ್ಟು ಗಂಟೆಗೆ ಕೊನೆ ರೈಲು ಸಂಚಾರ?

Date:

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಡಿಸೆಂಬರ್ 31ರ ರಾತ್ರಿ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳನ್ನು ವಿಸ್ತರಿಸುವುದಾಗಿ ಘೋಷಿಸಿದೆ. ಮಧ್ಯರಾತ್ರಿ ಹೊಸ ವರ್ಷ ಆಚರಣೆಯ ನಂತರ ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗುವಂತೆ ಈ ಬದಲಾವಣೆಯನ್ನು ಮಾಡಲಾಗಿದೆ.

- Advertisement -

ನೇರಳೆ ಮಾರ್ಗದಲ್ಲಿ ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟಕ್ಕೆ ಹೋಗುವ ಕೊನೆಯ ರೈಲು ಬೆಳಗಿನ ಜಾವ 1.45ಕ್ಕೆ ಕೊನೆಯದಾಗಿ ಸಂಚಾರ ಮಾಡಲಿದೆ. ಆದರೆ ಚಲ್ಲಘಟ್ಟದಿಂದ ವೈಟ್‌ಫೀಲ್ಡ್‌ಗೆ ಹೋಗುವ ಕೊನೆಯ ರೈಲು ಬೆಳಗಿನ ಜಾವ 2.00ಕ್ಕೆ ಕೊನೆ ಸಂಚಾರ ಮಾಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಚಾಲನೆ

ಹಸಿರು ಮಾರ್ಗದಲ್ಲಿ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್‌ಗೆ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರಕ್ಕೆ ಹೋಗುವ ಕೊನೆಯ ರೈಲುಗಳು ಬೆಳಗಿನ ಜಾವ 2.00ಕ್ಕೆ ಕೊನೆಯದಾಗಿ ಸಂಚರಿಸುತ್ತದೆ.

Advertisements

ಇನ್ನು ಹಳದಿ ಮಾರ್ಗದಲ್ಲಿ ಆರ್.ವಿ.ಯಿಂದ ಕೊನೆಯ ರೈಲು ಬೊಮ್ಮಸಂದ್ರಕ್ಕೆ ಬೆಳಗಿನ ಜಾವ 3.10ಕ್ಕೆ ಹೊರಡಲಿದ್ದು, ಬೊಮ್ಮಸಂದ್ರದಿಂದ ಆರ್.ವಿ. ರಸ್ತೆಗೆ ಹೋಗುವ ಅಂತಿಮ ಸೇವೆ ಬೆಳಗಿನ ಜಾವ 1.30ಕ್ಕೆ ಇರಲಿದೆ.

ಹೆಚ್ಚುವರಿಯಾಗಿ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ನೇರಳೆ ಮಾರ್ಗ ವೈಟ್ ಫೀಲ್ಡ್ ಮತ್ತು ಚಲ್ಲಘಟ್ಟ, ಹಸಿರು ಮಾರ್ಗ ಮಾದವರ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ಕಡೆಗೆ ಹೋಗುವ ಕೊನೆಯ ಮೆಟ್ರೋ ಸೇವೆಗಳು ಬೆಳಗಿನ ಜಾವ 2.45ಕ್ಕೆ ಹೊರಡಲಿವೆ.

ರಾತ್ರಿ 11:30ರ ನಂತರ, ನೇರಳೆ ಮಾರ್ಗ ಮತ್ತು ಹಸಿರು ಮಾರ್ಗದಲ್ಲಿ ರೈಲುಗಳು 8 ನಿಮಿಷಗಳ ಅಂತರದಲ್ಲಿ ಮತ್ತು ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ಕಾರ್ಯನಿರ್ವಹಿಸುತ್ತವೆ. ಆದರೆ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣವನ್ನು ಮಾತ್ರ ಮುಚ್ಚಲಾಗುತ್ತದೆ.

ಹೊಸ ವರ್ಷದ ಆಚರಣೆಯ ಕಾರಣ ಪಬ್‌ಗಳು ಇರುವ, ಅಧಿಕ ಕಾರ್ಯಕ್ರಮಗಳು ನಡೆಯುವ ಎಂಜಿ ರಸ್ತೆಯಲ್ಲಿ ಜನಸಂದಣಿ ಅಧಿಕವಾಗಿರುವ ಕಾರಣ ಡಿಸೆಂಬರ್ 31ರಂದು ರಾತ್ರಿ 10.00 ಗಂಟೆಯಿಂದ ಎಂಜಿ ರಸ್ತೆ ನಿಲ್ದಾಣದಲ್ಲಿ ಪ್ರವೇಶ ಮತ್ತು ನಿರ್ಗಮನವಿರುವುದಿಲ್ಲ. ಆದರೆ ಪಕ್ಕದ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ಮೆಟ್ರೋ ತೆರೆದಿರುತ್ತದೆ.

ಇದಲ್ಲದೆ, ಟಿಕೆಟ್ ಕೌಂಟರ್‌ಗಳಲ್ಲಿ ದೀರ್ಘ ಸರತಿ ಸಾಲುಗಳನ್ನು ತಪ್ಪಿಸಲು, ಡಿಸೆಂಬರ್ 31ರಂದು ರಾತ್ರಿ 11.00 ಗಂಟೆಯ ನಂತರ ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಲ್ಲಿ ಟೋಕನ್ ಮಾರಾಟವನ್ನು ಸ್ಥಗಿತಗೊಳಿಸಲಾಗುತ್ತದೆ. ಈ ನಿಲ್ದಾಣಗಳಿಂದ ರಾತ್ರಿ 11.00 ಗಂಟೆಯ ನಂತರ ಪ್ರಯಾಣಿಸುವ ಪ್ರಯಾಣಿಕರು QR ಟಿಕೆಟ್‌ಗಳನ್ನು ಮಾಡಿಕೊಳ್ಳಬೇಕು ಅಥವಾ ಸ್ಮಾರ್ಟ್‌ ಕಾರ್ಡ್‌ಗಳನ್ನು ಬಳಸಬೇಕು ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...