ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ BMRCL ಮತ್ತೆ ಸಜ್ಜು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Date:

ಈ ಹಿಂದೆ ನಮ್ಮ ಮೆಟ್ರೋ ಟಿಕೆಟ್ ದರವನ್ನು ತೀವ್ರ ಪ್ರಮಾಣದಲ್ಲಿ ಏರಿಸಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಇದೀಗ ಮತ್ತೆ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಈಗಾಗಲೇ BMRCL ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆಗಾಗಿ ಕಾಯುತ್ತಿದೆ.

- Advertisement -

ಪ್ರತಿ ವರ್ಷ ಮೆಟ್ರೋ ಟಿಕೆಟ್ ದರಗಳನ್ನು ಪರಿಷ್ಕರಿಸಬೇಕೆಂದು ಸೂಚಿಸಿದ್ದ ದರ ನಿಗದಿ ಸಮಿತಿಯ (FFC) ಶಿಫಾರಸಿನ ಆಧಾರದಲ್ಲಿ ಪರಿಷ್ಕರಣೆ ನಡೆಯಲಿದೆ. ಕಳೆದ ವರ್ಷ ಫೆಬ್ರವರಿಯಲ್ಲಿ ದರ ಏರಿಕೆ ಜಾರಿ ಮಾಡಲಾಗಿದೆ. ಇದೀಗ ಒಂದು ವರ್ಷ ಪೂರ್ಣಗೊಂಡಿರುವುದರಿಂದ ಮತ್ತೆ ದರ ಪರಿಷ್ಕರಣೆಗೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ಶೀಘ್ರವೇ ನಮ್ಮ ಮೆಟ್ರೋ ಟಿಕೆಟ್ ದರ ಮತ್ತೆ ಏರಿಕೆ: ಎಷ್ಟು, ಯಾವಾಗ?

2025ರಲ್ಲಿ ಬಿಎಂಆರ್‌ಸಿಎಲ್ ಶೇ. 71ರಷ್ಟು ದರ ಏರಿಕೆಯನ್ನು ಜಾರಿಗೆ ತಂದಿತ್ತು. ಇದರಿಂದಾಗಿ ತೀವ್ರ ಟೀಕೆಗೆ ಗುರಿಯಾಗಿತ್ತು, ಪ್ರತಿಭಟನೆ ನಡೆದಿತ್ತು. ಮೆಟ್ರೋ ಟಿಕೆಟ್ ದರ ಶೇಕಡ 60 ರೂಪಾಯಿಯಿಂದ 90 ರೂಪಾಯಿಗೆ ಏರಿಕೆಯಾಗಿತ್ತು. ಬಡ, ಮಧ್ಯಮ ವರ್ಗದ ಆರ್ಥಿಕ ಸಂಕಷ್ಟ ಉಂಟಾಗಿ ಮೆಟ್ರೋದಿಂದ ದೂರ ಉಳಿದಿದ್ದರು.

ಇದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಯ ಮೇರೆಗೆ ಶೇ.30ರಷ್ಟು ಅಂದರೆ 8-9 ರೂಪಾಯಿ ಟಿಕೆಟ್ ದರ ಇಳಿಸಲಾಗಿತ್ತು. ಈಗ ಒಂದು ವರ್ಷವಾಗುತ್ತಿದ್ದಂತೆ ಮತ್ತೆ ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...