ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಇಂದಿನಿಂದ ಆರಂಭ

Date:

ಆರ್‌ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆ ಆಗಸ್ಟ್ 11ರ ಬೆಳಿಗ್ಗೆಯಿಂದ ಪ್ರಾರಂಭವಾಗಿದೆ. ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 6.30ಕ್ಕೆ, ಭಾನುವಾರ 7 ಗಂಟೆಗೆ ಮೆಟ್ರೋ ಆರಂಭವಾಗಲಿದೆ.

- Advertisement -

ಸೋಮವಾರದಿಂದ ಶನಿವಾರದವರೆಗೆ ವಾರದ ಎಲ್ಲಾ ದಿನಗಳಲ್ಲಿ, ಆ‌ರ್.ವಿ. ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಿಗ್ಗೆ 6.30ಕ್ಕೆ ರೈಲುಗಳು ಪ್ರಾರಂಭವಾಗುತ್ತವೆ. ಪ್ರತಿ ನಿಲ್ದಾಣದಲ್ಲಿ ನಿಲುಗಡೆ ಸಹಿತ ಈ ವಿಭಾಗದ ಒಟ್ಟು ಪ್ರಯಾಣ ಸಮಯವು ಒಂದು ದಿಕ್ಕಿನಲ್ಲಿ ಸುಮಾರು 35 ನಿಮಿಷಗಳಾಗಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳೆ ಮಾಡುತ್ತಿರುವ ಬಿಟ್ಟಿ ಚಾಕರಿಗಳೇನೇನು? ಇದನ್ನೇಕೆ ಅರಿಯಲು ಮುಂದಾಗಿದೆ...

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸರ್ಕಾರದ ಗುರಿಗೆ ಒಂದು ದೊಡ್ಡ ಅಡ್ಡಿ ಎದುರಾಗಿದೆ. ಅದೇನೆಂದರೆ; ಸಾಕಷ್ಟು ಸಂಖ್ಯೆಯ ಮಹಿಳೆಯರನ್ನು ಉದ್ಯೋಗ ಕ್ಷೇತ್ರಕ್ಕೆ ತರುವುದು. ವಿಶ್ವಬ್ಯಾಂಕ್ ಪ್ರಕಾರ, 2047ರ ವೇಳೆಗೆ...

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಇದನ್ನು ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ

ಒಟ್ಟು 16 ನಿಲ್ದಾಣಗಳಿವೆ, ಇದರಲ್ಲಿ ಎರಡು ಟರ್ಮಿನಲ್‌ಗಳು ಸೇರಿವೆ. ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಕೊನೆಯ ರೈಲು ರಾತ್ರಿ 10.42 ಕ್ಕೆ ಮತ್ತು ಆರ್.ವಿ.ರೋಡ್ ಇಂಟರ್‌ಚೇಂಜ್ ನಿಲ್ದಾಣದಿಂದ ಕೊನೆಯ ರೈಲು ರಾತ್ರಿ 11.55 ಕ್ಕೆ ಹೊರಡುತ್ತದೆ. ಬೆಳಿಗ್ಗೆ 6.30ರಿಂದ ಡೆಲ್ಮಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಹಾಗೂ ಬೆಳಿಗ್ಗೆ 7.10ರಿಂದ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಪ್ರತಿ 25 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸಲಿವೆ. ರಾತ್ರಿ 10.00 ಗಂಟೆಯ ನಂತರ ರೈಲು ಸಂಚಾರದ ಅವಧಿ ಕಡಿಮೆಯಾಗುತ್ತದೆ. ಭಾನುವಾರಗಳಲ್ಲಿ ರೈಲು ಸೇವೆಗಳು ಬೆಳಿಗ್ಗೆ 6.30 ಬದಲಾಗಿ 7.00 ಕ್ಕೆ ಪ್ರಾರಂಭವಾಗುತ್ತವೆ. ಅವಧಿ ಅದೇ ರೀತಿಯೇ ಇರುತ್ತದೆ.

ಹಳದಿ ಮಾರ್ಗದ ಟರ್ಮಿನಲ್ ನಿಲ್ದಾಣಗಳ ನಡುವಿನ ಪ್ರಯಾಣದ ದರ ರೂ.60/-. ಟೋಕನ್‌ ಗಳು, NCMC ಕಾರ್ಡ್‌ಗಳು, ಬಿಎಂಆರ್‌ಸಿಎಲ್ ಸ್ಮಾರ್ಟ್ ಕಾರ್ಡ್‌ಗಳು, QR ಟಿಕೆಟ್‌ಗಳು ಎಂದಿನಂತೆಯೇ ಲಭ್ಯವಿದ್ದು, ಹಾಲಿ ಮಾರ್ಗಗಳೊಂದಿಗೆ ಕಾರ್ಯನಿರ್ವಹಿಸಲಿವೆ. ಮತ್ತು ಯಾವುದೇ ಬದಲಾವಣೆ ಇರುವುದಿಲ್ಲ.

ಐಫೋನ್ ಬಳಸುವ ಬಿಎಂಆರ್‌ಸಿಎಲ್ ಪ್ರಯಾಣಿಕರು 2025ರ ಆಗಸ್ಟ್ 11ರಿಂದ ಆಪಲ್ ಸ್ಟೋರ್‌ನಿಂದ ನಮ್ಮ ಮೆಟ್ರೋ ಅಧಿಕೃತ ಆಪ್‌ನ್ನು ಡೌನ್‌ಲೋಡ್‌ ಮಾಡಿಕೊಂಡು, QR ಟಿಕೆಟ್‌ಗಳನ್ನು ಖರೀದಿಸಲು ಹಾಗೂ ಬಿಎಂಆರ್‌ಸಿಎಲ್ ಸ್ಮಾರ್ಟ್ ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಬಳಸಿಕೊಳ್ಳಬಹುದು. ಹೆಚ್ಚು ರೈಲು ಸೆಟ್‌ಗಳನ್ನು ಸೇವೆಗೆ ಸೇರಿಸುತ್ತಿದ್ದಂತೆ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಲಾಗುವುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆ ಅಪಘಾತ | ರಾಜ್ಯದಲ್ಲಿ ವರ್ಷಕ್ಕೆ 11 ಸಾವಿರಕ್ಕೂ ಹೆಚ್ಚು ಬಲಿ; ಪ್ರತಿದಿನ ಸರಾಸರಿ 31 ಮಂದಿ ಸಾವು!

ರಾಜ್ಯದಲ್ಲಿ ರಸ್ತೆ ಅಪಘಾತಗಳು ಆತಂಕಕಾರಿ ಮಟ್ಟ ತಲುಪಿದ್ದು, ಪ್ರತಿ ವರ್ಷ 11...

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ...

ಕರ್ನಾಟಕ | ಆಸ್ತಿ ಖರೀದಿದಾರರಿಗೆ ಶಾಕ್: ನೋಂದಣಿ ದರ ಹೆಚ್ಚಳಕ್ಕೆ ಸರ್ಕಾರ ಸಿದ್ಧತೆ!

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನಿವೇಶನ, ಅಪಾರ್ಟ್‌ಮೆಂಟ್ ಹಾಗೂ ಇತರ ಸ್ಥಿರಾಸ್ತಿಗಳನ್ನು ಖರೀದಿಸುವವರಿಗೆ...

ಬೆಂಗಳೂರಿಗರ ಸುರಕ್ಷತೆ: ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಲು ಪೊಲೀಸ್ ಇಲಾಖೆಗೆ ಸಿಎಂ ಸೂಚನೆ

ಬೆಂಗಳೂರು ನಗರದ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಮಹತ್ವದ...