ಬಿಬಿಎಂಪಿ ನಿರ್ಲಕ್ಷ್ಯ| ಸ್ವಂತ ಹಣದಲ್ಲೇ ರಸ್ತೆ-ಚರಂಡಿ ರಿಪೇರಿ ಮಾಡಿಸಿದ ನಿವಾಸಿಗಳು

Date:

  • ರಸ್ತೆ ರಿಪೇರಿಗಾಗಿ ₹3 ಲಕ್ಷ ಖರ್ಚು ಮಾಡಿದ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ
  • ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ

ಖ್ಯಾತ ವಿಜ್ಞಾನಿಯ ಹೆಸರಿಟ್ಟುಕೊಂಡಿರುವುದು ಬೆಂಗಳೂರಿನ ಸಿ.ವಿ ರಾಮನ್ ನಗರ. ಆದರೆ, ಅಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಗುಂಡಿಬಿದ್ದಿರುವ ರಸ್ತೆಗಳು, ರಸ್ತೆ ಬದಿಯಲ್ಲಿ ಗಬ್ಬುನಾರುವ ಕಸದ ರಾಶಿ ಎಲ್ಲೆಂದರಲ್ಲಿ ಕಾಣಸಿಗುತ್ತದೆ. ಸಿ.ವಿ ರಾಮನ್ ನಗರದ ಭಾಗವಾಗಿರುವ ವರ್ಸೋವಾ ಲೇಔಟ್‌ನ ಪರಿಸ್ಥಿತಿಯಂತೂ ಹೇಳತೀರದು. ಈ ಬಡಾವಣೆ ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದು, ಅಲ್ಲಿನ ನಿವಾಸಿಗಳು ತಾವೇ ಬೀದಿಗಿಳಿದು ಚರಂಡಿಗಳನ್ನು ಸ್ವಚ್ಛಗೊಳಿಸಿದ್ದಾರೆ. ಆದರೂ, ಅಲ್ಲಿನ ಸಮಸ್ಯೆ ಸಂಪೂರ್ಣವಾಗಿ ಬಗೆಹರಿದಿಲ್ಲ.

- Advertisement -

ಈಗ ಮಳೆಗಾಲ ಆರಂಭವಾಗಿದೆ. ಬಡಾವಣೆಯಲ್ಲಿ ಸೂಕ್ತ ಚರಂಡಿ ವ್ಯವಸ್ಥೆಯೇ ಇಲ್ಲದೆ, ನಿವಾಸಿಗಳು ಪರದಾಡುತ್ತಿದ್ದಾರೆ. ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ. ರಸ್ತೆಗಳೂ ಗುಂಡಿಬಿದ್ದಿದ್ದು ಅಪಾಯವನ್ನು ಹೆಚ್ಚಿಸುವ ಆತಂಕವಿದೆ. ಹೀಗಾಗಿ, ಅಲ್ಲಿನ ಜನರು ತಮ್ಮ ಸ್ವಂತ ಹಣವನ್ನು ಖರ್ಚು ಮಾಡಿ ರಸ್ತೆ ಮತ್ತು ಚರಂಡಿಗಳನ್ನು ರಿಪೇರಿ ಮಾಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

“ಪ್ರತಿ ಬಾರಿ ಮಳೆಗಾಲದಲ್ಲೂ ಲೇಔಟ್‌ನ ರಸ್ತೆಗಳು ಜಲಾವೃತವಾಗುತ್ತವೆ. ಮನೆಗಳಿಗೂ ನೀರು ನುಗ್ಗುತ್ತದೆ. ಬಿಬಿಎಂಪಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ನಾವೇ ರಿಪೇರಿ ಕೆಲಸ ಮಾಡಿಸುತ್ತಿದ್ದೇವೆ. ಬಡಾವಣೆಗೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸಿದ್ದೇವೆ” ಎಂದು ಅಲ್ಲಿನ ನಿವಾಸಿ ಶಿವಾ ರೆಡ್ಡಿ ಹೇಳಿರುವುದಾಗಿ ‘ಟಿಒಐ’ ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

“ನಮ್ಮ ಬಡಾವಣೆಯ ರಸ್ತೆಗಳು ಕಿತ್ತುನಿಂತಿವೆ. ಸಮಸ್ಯೆ ಬಗ್ಗೆ ಮನವಿ ಮಾಡಿದಾಗ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್‌ಗಳು ಬಂದು ಪರಿಶೀಲನೆ ಮಾಡುತ್ತಾರೆ. ಸರ್ಕಾರ ಅನುದಾನ ಬಿಡುಗಡೆ ಮಾಡಿದ ಕೂಡಲೇ ಕಾಮಗಾರಿ ಆರಂಭಿಸುತ್ತೇವೆ ಎಂದು ಹೇಳುತ್ತಾರೆ. ಆದರೆ, ಇದುವರೆಗೂ ಯಾವುದೇ ಕಾಮಗಾರಿ ಆರಂಭವಾಗಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ರಸ್ತೆ ಮತ್ತು ಚರಂಡಿ ರಿಪೇರಿಗಾಗಿ ಅಲ್ಲಿನ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ₹3 ಲಕ್ಷ ಖರ್ಚು ಮಾಡಿದೆ. ಅಲ್ಲದೆ, ಸ್ಥಳೀಯರಿಂದ ಮೂರು ಲಕ್ಷ ರೂ. ಸಂಗ್ರಹಿಸಿ ದುರಸ್ತಿ ಕೆಲಸಗಳಿಗೆ ಬಳಸಿದೆ” ಎಂದು ನಿವಾಸಿಗಳು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...