ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

Date:

Advertisements

2023 ಕಳೆದು 2024ರ ಹೊಸ ವರ್ಷಕ್ಕೆ ಕಾಲಿಡಲು ಇನ್ನೇನು ಒಂದೇ ದಿನ ಬಾಕಿ ಉಳಿದಿದೆ. ಈಗಾಗಲೇ, ಬೆಂಗಳೂರಿನ ಜನ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ನಗರದ ಬ್ರೀಗೇಡ್ ರೋಡ್, ಎಂಜಿ ರೋಡ್ ಸೇರಿದಂತೆ ಹಲವೆಡೆ ಸಂಭ್ರಮಾಚರಣೆ ಮಾಡಲು ಜನ ಮುಂದಾಗಿದ್ದಾರೆ. ಈ ಹಿನ್ನೆಲೆ, ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಹಾಗೂ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ. ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾರ್ವಜನಿಕ ಸಾರಿಗೆಗಳು ತಮ್ಮ ಪ್ರಯಾಣದ ಅವಧಿಯನ್ನು ರಾತ್ರಿ 2ರವರೆಗೂ ವಿಸ್ತರಿಸಿವೆ.

ಹೌದು, ಪ್ರಯಾಣಿಕರ ಅನುಕೂಲಕ್ಕಾಗಿ ಡಿ.31ರ ಮಧ್ಯರಾತ್ರಿ 2 ಗಂಟೆವರೆಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಸಂಚಾರ ಸೇವೆ ಇರಲಿದೆ. ಜತೆಗೆ, ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ ಸಹ ಕಾರ್ಯಾಚರಣೆ ನಡೆಸಲಿದೆ. ಹೊಸ ವರ್ಷಾಚರಣೆಗೆ ಬರುವ ಸಾರ್ವಜನಿಕರಿಗಾಗಿ ಬಿಎಂಟಿಸಿ ಹೆಚ್ಚುವರಿ ಬಸ್​ಗಳ ನಿಯೋಜನೆ ಮಾಡಿದೆ. ಡಿ.31 ರ ರಾತ್ರಿ 11 ಗಂಟೆಯಿಂದ ತಡರಾತ್ರಿ 2 ಗಂಟೆಯವರೆಗೆ ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ.

ಎಂ.ಜಿ.ರಸ್ತೆ, ಬ್ರಿಗೇಡ್‌ ರಸ್ತೆಯಿಂದ ಕಾಡುಗೋಡಿ, ಸರ್ಜಾಪುರ, ಎಲೆಕ್ಟ್ರಾನಿಕ್‌ ಸಿಟಿ, ಬನ್ನೇರುಘಟ್ಟ ಜೈವಿಕ ಉದ್ಯಾನ, ಕೆಂಗೇರಿ, ಕೆಎಚ್‌ಬಿ ಕ್ವಾರ್ಟರ್ಸ್‌, ಜನಪ್ರಿಯ ಟೌನ್‌ಶಿಪ್‌, ನೆಲಮಂಗಲ, ಯಲಹಂಕ 5ನೇ ಹಂತ, ಆರ್‌.ಕೆ.ಹೆಗಡೆನಗರ, ಬಾಗಲೂರು, ಹೊಸಕೋಟೆಗೆ ಬಸ್‌ ಸೇವೆ ಕಲ್ಪಿಸಲಾಗಿದೆ.

Advertisements

ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಗೆ ಹೊಸ ವರ್ಷಾಚರಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ, ಆ ಮಾರ್ಗದಲ್ಲಿ ಹೆಚ್ಚುವರಿ ಬಸ್​ಗಳನ್ನು ನಿಯೋಜಿಸಲಾಗಿದೆ. ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಬಸ್ ಸಂಚಾರಕ್ಕೆ ನಿಗಮದಿಂದ ಸಿದ್ಧತೆ ನಡೆದಿದೆ.

ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ಹಲವೆಡೆ ಬಸ್‌ ವ್ಯವಸ್ಥೆ ಮಾಡಲಾಗಿದೆ. ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ಕಾಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಬನ್ನೇರುಘಟ್ಟ, ಕೆಂಗೇರಿ, ನೆಲಮಂಗಲ, ಮಾಗಡಿ ರಸ್ತೆ, ಹೆಣ್ಣೂರು ಸೇರಿದಂತೆ ಹಲವು ಪ್ರದೇಶಗಳಿಗೆ ಬಿಎಂಟಿಸಿ ಬಸ್ ವ್ಯವಸ್ಥೆ ಇರಲಿದೆ.

ಜನದಟ್ಟಣೆ ಹೆಚ್ಚಾಗಿರುವ ಯಲಹಂಕ, ಇಂದಿರಾನಗರ, ಕೋರಮಂಗಲ, ಬನಶಂಕರಿ, ಶಾಂತಿನಗರ, ಗೊರಗುಂಟೆ ಪಾಳ್ಯ ಸುತ್ತಮುತ್ತ ಬಸ್‌ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್ ಕಾರ್ಯಾಚರಣೆ ನಡೆಸಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹೊಸ ವರ್ಷದ ಸಂಭ್ರಮ | ತಡರಾತ್ರಿ 2:15 ರವರೆಗೂ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

ತಡರಾತ್ರಿ 2:15 ರವರೆಗೂ ನಮ್ಮ ಮೆಟ್ರೋ ರೈಲು ಸೇವೆ ವಿಸ್ತರಣೆ

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಪ್ರಯಾಣಿಕರ ಅನುಕೂಲಕ್ಕಾಗಿ ನೇರಳೆ ಮತ್ತು ಹಸಿರು ಮಾರ್ಗದ ರೈಲುಗಳನ್ನು 2023ರ ಡಿಸೆಂಬರ್ 31ರಂದು ತಡರಾತ್ರಿ 1:30 ರವರೆಗೆ ಸಂಚರಿಸಲಿವೆ ಎಂದು ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಆರ್‌ಸಿಎಲ್‌, “ಹೊಸ ವರ್ಷ 2024ರ ಮುನ್ನಾದಿನದಂದು ನಿಗಮವು ಮೆಟ್ರೋ ರೈಲು ಸೇವೆಗಳನ್ನು ನೇರಳೆ ಮತ್ತು ಹಸಿರು ಮಾರ್ಗದಲ್ಲಿ ವಿಸ್ತರಿಸುತ್ತಿದೆ. ಕೊನೆಯ ರೈಲು ಸೇವೆ ಎಲ್ಲ ಟರ್ಮಿನಲ್ ನಿಲ್ದಾಣಗಳಿಂದ ಡಿಸೆಂಬರ್ 31ರ ಮಧ್ಯರಾತ್ರಿ 01:30 ಗಂಟೆಗೆ ಓಡಾಡಲಿವೆ. ಈ ವಿಸ್ತ್ರತ ಅವಧಿಯಲ್ಲಿ ರೈಲು ಸೇವೆಗಳು 15 ನಿಮಿಷಗಳ ಅಂತರದಲ್ಲಿ ಸಂಚರಿಸುತ್ತವೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ- ಮೆಜೆಸ್ಟಿಕ್‌ನಿಂದ ರಾತ್ರಿ 2:15 ಗಂಟೆಗೆ ಎಲ್ಲ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಹೊರಡುತ್ತವೆ” ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X