ಹೊಸ ವರ್ಷಾಚರಣೆ | ₹21 ಕೋಟಿ ಮೌಲ್ಯದ ಮಾದಕ ದ್ರವ್ಯ ಪ್ರಕರಣ: ಸಿನಿ ತಾರೆಯರ ಮೇಲೆ ಗುಮಾನಿ

Date:

ಬೆಂಗಳೂರಿನ ರಾಮಮೂರ್ತಿ ನಗರದ ಮನೆಯೊಂದರಲ್ಲಿ ಇತ್ತೀಚೆಗೆ ಜಪ್ತಿ ಮಾಡಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಪ್ರಕರಣದಲ್ಲಿ ಸಿನಿ ತಾರೆಯರು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರದ ವ್ಯಕ್ತಿಗಳ ಹೆಸರು ಕೇಳಿಬಂದಿದೆ. ಕಳೆದ ಎರಡು ವರ್ಷಗಳ ಹಿಂದೆ ಡ್ರಗ್ಸ್‌ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಹೆಸರು ಕೇಳಿಬಂದಿತ್ತು.

- Advertisement -

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಪಾರ್ಟಿಗಳಿಗೆ ಪೂರೈಸಲೆಂದು ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿತ್ತು. ನಗರದ ಮನೆಯೊಂದರಲ್ಲಿ ಡ್ರಗ್ಸ್ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ವಿಚಾರ ತಿಳಿದ ಸಿಸಿಬಿ ಪೊಲೀಸರು ಇತ್ತೀಚೆಗೆ ₹21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿದ್ದರು. ನೈಜೀರಿಯಾದ ಪ್ರಜೆ ಲಿಯೋನಾರ್ಡ್ ಒಕ್ವುಡಿಲಿ (44) ಎಂಬಾತನನ್ನು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ಕೆಲ ಸಿನಿಮಾ ನಟ–ನಟಿಯರು, ಕೆಲ ವ್ಯಾಪಾರಿಗಳು, ಉದ್ಯಮಿಗಳು ಹಾಗೂ ನಾನಾ ಕ್ಷೇತ್ರಗಳ ಕೆಲ ವ್ಯಕ್ತಿಗಳು ಈತನಿಂದ ಡ್ರಗ್ಸ್ ಖರೀದಿಸುತ್ತಿದ್ದರು ಎಂಬ ಮಾಹಿತಿ ಇದೆ. ಆದರೆ, ಅದಕ್ಕೆ ಸಂಬಂಧಪಟ್ಟ ಪುರಾವೆಗಳು ಲಭ್ಯವಾಗಿಲ್ಲ. ಪ್ರಮುಖ ಪೆಡ್ಲರ್ ಆಗಿದ್ದ ಲಿಯೋನಾರ್ಡ್, ನಗರದಲ್ಲಿರುವ ಉಪ ಪೆಡ್ಲರ್‌ಗಳ ಮೂಲಕ ಡ್ರಗ್ಸ್ ಮಾರುತ್ತಿದ್ದನು ಎಂದು ಪೊಲೀಸ್ ಮೂಲಗಳು ಹೇಳಿವೆ.

ಆರೋಪಿ ಲಿಯೋನಾರ್ಡ್, ಎಲ್ಲಿಂದ ಡ್ರಗ್ಸ್ ತಂದಿದ್ದನು? ಯಾರಿಗೆ ಮಾರಾಟ ಮಾಡುತ್ತಿದ್ದನು? ಎಷ್ಟು ಪ್ರಮಾಣದಲ್ಲಿ ವಹಿವಾಟು ನಡೆಸಿದ್ದನು? ಎಂಬಿತ್ಯಾದಿ ಸಂಗತಿಗಳ ಬಗ್ಗೆ ಸದ್ಯಕ್ಕೆ ತನಿಖೆ ನಡೆಸಲಾಗುತ್ತಿದೆ. ಈ ಡ್ರಗ್ಸ್ ಜಾಲದಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಂಡು, ತನಿಖೆ ಮುಂದುವರಿಸಲಾಗುವುದು. ಅಗತ್ಯವಿದ್ದರೆ ನೋಟಿಸ್ ನೀಡಿ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಐಟಿ ದಾಳಿ | ಜುವೆಲ್ಲರಿ ಶಾಪ್ ಮಾಲೀಕರ ಮನೆಯಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು

ಹೊಸ ವರ್ಷಾಚರಣೆಯಂದು ಡ್ರಗ್ಸ್ ಮಾರಾಟ ಹೆಚ್ಚಾಗುವ ಮಾಹಿತಿ ತಿಳಿದಿರುವ ಪೊಲೀಸರು, ಹಳೆ ಪ್ರಕರಣದ ಆರೋಪಿಗಳನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಳ್ಳುತ್ತಿದ್ದಾರೆ.

ಡ್ರಗ್ಸ್ ಸಾಗಣೆ, ಮಾರಾಟ ಹಾಗೂ ಸೇವನೆಗೆ ಸಂಬಂಧಪಟ್ಟ ಅಪರಾಧಗಳನ್ನು ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣದಲ್ಲಿ ಜೈಲಿಗೆ ಹೋಗಿದ್ದ ಸುಮಾರು 180 ಮಂದಿ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಅವರೆಲ್ಲರನ್ನೂ ವಶಕ್ಕೆ ಪಡೆದು ಮುಚ್ಚಳಿಕೆ ಬರೆಸಿಕೊಂಡು ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...