ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಶ್ಚಿಮ ಬಂಗಾಳದಲ್ಲಿ ಇಬ್ಬರು ಶಂಕಿತರ ಬಂಧನ

Date:

ಬೆಂಗಳೂರಿನ ರಾಮೇಶ್ವರಂ ಕೆಫೆ ಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ.

- Advertisement -

ಮೂಲಗಳ ಪ್ರಕಾರ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಹಾಗೂ ಅಬ್ದುಲ್‌ ಮತೀನ್ ತಹ ಎಂಬುವವರನ್ನು ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮಾರ್ಚ್‌ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್‌ನಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಸ್ಫೋಟದಲ್ಲಿ ಹತ್ತು ಮಂದಿ ಗಾಯಗೊಂಡಿದ್ದರು. ಸ್ಫೋಟಕ್ಕೆ ಟೈಮರ್‌ ಹೊಂದಿದ್ದ ಐಇಡಿ ಬಾಂಬ್‌ ಬಳಸಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೆಲೆ ಏರಿಕೆ, ನಿರುದ್ಯೋಗವೇ ಚುನಾವಣೆ ವಿಷಯ; ಎಚ್ಚೆತ್ತ ಮತದಾರರು

ಘಟನೆಗೆ ಸಂಬಂಧಿಸಿದಂತೆ 1000ಕ್ಕೂ ಹೆಚ್ಚು ಸಿಸಿ ಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಶಂಕಿತ ಮುಸ್ಸಾವಿರ್ ಹುಸ್ಸೇನ್ ಶಾಜೀಬ್ ಎಂಬಾತನನ್ನು ಬಂಧಿಸಲಾಗಿದೆ. ಈತ ಕರ್ನಾಟಕದ ಶಿವಮೊಗ್ಗದ ತೀರ್ಥಹಳ್ಳಿಯ ನಿವಾಸಿ ಎಂದು ತನಿಖಾದಳ ದೃಢಪಡಿಸಿದೆ.

ಎನ್‌ಐಎ ದೃಢಪಡಿಸಿದಂತೆ ಬಂಧಿತ ಶಾಜೀಬ್ ಬಾಂಬ್‌ ಸ್ಫೋಟದ ಪ್ರಮುಖ ಶಂಕಿತನಾಗಿದ್ದು, ಚೆನ್ನೈನ ಮಾಲ್‌ ಒಂದರಲ್ಲಿ ಟೋಪಿಯನ್ನು ಖರೀದಿಸಿದ್ದ. ಈ ವರ್ಷದ ಜನವರಿಯಿಂದಲೇ ಒಂದು ತಿಂಗಳಿಗೂ ಹೆಚ್ಚು ದಿನ ಚೆನ್ನೈನಲ್ಲಿ ವಾಸವಾಗಿದ್ದ ಎಂದು ತನಿಖಾದಳ ತಿಳಿಸಿದೆ.

ಮತ್ತೋರ್ವ ಬಂಧಿತ ಅಬ್ದುಲ್‌ ಮತೀನ್ ತಹ ಕೂಡ ತೀರ್ಥಹಳ್ಳಿಯವನಾಗಿದ್ದು, ತಮಿಳುನಾಡಿನ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಎಂದು ತನಿಖಾ ದಳ ಮಾಹಿತಿ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...