‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ವೋಟ್ ಹಾಕಲ್ಲ’; ಸಚಿವ ಮುನಿಯಪ್ಪ ಕಾರ್ಯಕ್ರಮದಲ್ಲಿ ಮಹಿಳೆ ಆಕ್ರೋಶ

Date:

ಸರ್ಕಾರದ ಯೋಜನೆಗಳು ಮತ್ತು ಸೌಲಭ್ಯಗಳು ತಮಗೆ ತಲುಪುತ್ತಿಲ್ಲ, ಅಧಿಕಾರಿಗಳು ಬಡವರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರ ಕಾರ್ಯಕ್ರಮದಲ್ಲಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಹಿಳೆ, ‘ಮುಂದಿನ ಚುನಾವಣೆಯಲ್ಲಿ ಕಾಂಗ್ರಸ್‌ ಮತ ಹಾಕುವುದಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

- Advertisement -

ವಿಜಯಪುರದಲ್ಲಿ ನಡೆದ ‘ಪ್ರಜಾಸೇವಾ ಇಲಾಖೆ’ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವ ಮುನಿಯಪ್ಪ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ತಮ್ಮ ಅಹವಾಲು ತೋಡಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಸ್ಥಳೀಯ ಸಾರ್ವಜನಿಕರು ಆಗಮಿಸಿದ್ದರು. ಈ ವೇಳೆ, ಅಧಿಕಾರಿಗಳು ಜನವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಮಹಿಳೆ ತಸ್ಲೀಮಾ ಅವರು ವೇದಿಕೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ತಾವು ತಂದಿದ್ದ ಅರ್ಜಿಯನ್ನೇ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಸಚಿವರ ಎದುರು ತಮ್ಮ ಅಳಲನ್ನು ತೋಡಿಕೊಂಡ ಅವರು, “ಜಾತಿ ಪ್ರಮಾಣಪತ್ರ ಹಾಗೂ ಪಡಿತರ ಚೀಟಿ ಸೇರಿದಂತೆ ಅಗತ್ಯ ದಾಖಲೆಗಳನ್ನು ಮಾಡಿಸಿಕೊಡುವಂತೆ ಹಲವು ತಿಂಗಳುಗಳಿಂದ ಕಚೇರಿಗಳಿಗೆ ಅಲೆಯುತ್ತಿದ್ದೇನೆ. ನನ್ನ ಬಳಿ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಹೊರತುಪಡಿಸಿ ಬೇರೆ ಯಾವುದೇ ದಾಖಲೆಗಳಿಲ್ಲ. ಇಂದು ಸಚಿವರ ಕಾರ್ಯಕ್ರಮದಲ್ಲಿ ಅರ್ಜಿ ಸಲ್ಲಿಸಲು ಬಂದಿದ್ದೇನೆ. ಆದರೆ, ಅಧಿಕಾರಿಗಳು ನನ್ನ ಅರ್ಜಿಯನ್ನೂ ಸ್ವೀಕರಿಸುತ್ತಿಲ್ಲ, ಮಾತುಗಳನ್ನೂ ಕೇಳುತ್ತಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ವೇದಿಕೆಯಲ್ಲಿ ಕೇವಲ ಮುಂಚಿತವಾಗಿ ಆಯ್ಕೆ ಮಾಡಿದ ಕೆಲವೇ ಜನರನ್ನು ಕರೆದು ಸೌಲಭ್ಯಗಳನ್ನು ನೀಡಿ ಫೋಟೋ ತೆಗೆಸಿಕೊಳ್ಳಲಾಗುತ್ತಿದೆ. ಜನರಿಗಾಗಿ ಸರ್ಕಾರಿ ಕಾರ್ಯಕ್ರಮ ಮಾಡುವುದಿದ್ದರೆ ಇಲ್ಲಿಗೆ ಬಂದಿರುವ ಪ್ರತಿಯೊಬ್ಬ ಬಡವರ ಪ್ರಮುಖ ಸಮಸ್ಯೆಗಳನ್ನೂ ಕೇಳಬೇಕು. ಆದರೆ, ಬಡವರ ಕಷ್ಟ ಆಲಿಸುವವರೇ ಇಲ್ಲದಂತಾಗಿದೆ. ಇಂತಹ ಆಡಳಿತ ನಮಗೆ ಬೇಡ, ಮುಂದಿನ ಎಲೆಕ್ಷನ್‌ನಲ್ಲಿ ನಾವು ಕಾಂಗ್ರೆಸ್‌ಗ ವೋಟ್ ಹಾಕುವುದಿಲ್ಲ,” ಎಂದು ತಸ್ಲೀಮಾ ಖಾರವಾಗಿ ಮಾತನಾಡಿದ್ದಾರೆ.  

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...