ಮೆಟ್ರೋದಲ್ಲಿ ಕುಸಿದು ಬಿದ್ದು ವೃದ್ಧ ಸಾವು; ಬಿಎಂಆರ್‌ಸಿಎಲ್‌ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

Date:

ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿರುವಾಗ ವೃದ್ಧರೊಬ್ಬರು ಕುಸಿದು ಬಿದ್ದು ಕೆಲವು ಗಂಟೆಗಳ ನಂತರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಅಧಿಕಾರಿಗಳ ವಿರುದ್ಧ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಪೊಲೀಸ್‌ ಇನ್ಸ್‌ಪೆಕ್ಟರ್ ಆಗಿರುವ ಮುತ್ತುರಾಜ್ ಟಿ ಅವರ ತಂದೆ ತಿಮ್ಮೇಗೌಡ(67) ಮೃತಮಟ್ಟ ವ್ಯಕ್ತಿ.

ತಿಮ್ಮೇಗೌಡ ಅವರು ಮೂಲತಃ ಚಾಮರಾಜನಗರ ಜಿಲ್ಲೆಯ ಕಂಡಯ್ಯನಪಾಳ್ಯ ಗ್ರಾಮದವರು. ಇವರು ಮೆಟ್ರೋದಲ್ಲಿ ಸಂಚರಿಸುತ್ತಿರುವ ವೇಳೆ ಕುಸಿದು ಬಿದ್ದಾಗ ಸಕಾಲದಲ್ಲಿ ಬಿಎಂಆರ್‌ಸಿಎಲ್‌ ಸಿಬ್ಬಂದಿ ಬಂದು ಸಹಾಯ ಮಾಡಲಿಲ್ಲ. ವೈದ್ಯಕೀಯ ನೆರವು ಹಾಗೂ 108 ಆಂಬ್ಯುಲೆನ್ಸ್‌ ಸೇವೆ ನೀಡಲಿಲ್ಲ. ನಿಗಮದ ಸಿಬ್ಬಂದಿ ನಿರ್ಲಕ್ಷ್ಯದಿಂದ ಈ ಸಾವಾಗಿದೆ ಎಂದು ಮೃತಪಟ್ಟ ವ್ಯಕ್ತಿಯ ಮಗ ಮುತ್ತುರಾಜ್ ಟಿ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ತಿಮ್ಮೇಗೌಡ ಅವರು ಚಾಮರಾಜನಗರದಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜುಲೈ 20ರಂದು ರಾತ್ರಿ 9 ಗಂಟೆಗೆ ತಮ್ಮ ತವರು ಊರಿಗೆ ಬಸ್‌ ಮೂಲಕ ವಾಪಾಸ್ ತೆರಳಲು ಯೋಜಿಸಿದ್ದರು. ಅದರಂತೆಯೇ, ಅವರು ಕೆಂಗೇರಿಗೆ ತೆರಳಲು ಬೈಯಪ್ಪನಹಳ್ಳಿಯಲ್ಲಿ ಮೆಟ್ರೋ ಹತ್ತಿದ್ದರು. ಎಸ್‌ವಿ ರಸ್ತೆ ನಿಲ್ದಾಣದಿಂದ ಮೆಟ್ರೊ ರೈಲು ಹೊರಡುವಷ್ಟರಲ್ಲಿಯೇ ತಿಮ್ಮೇಗೌಡ ಅವರು ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಸಹ ಪ್ರಯಾಣಿಕರು ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ಇಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದಲ್ಲಿ ತಿಮ್ಮೇಗೌಡ 15-20 ನಿಮಿಷಗಳ ಕಾಲ ಪ್ಲಾಟ್‌ಫಾರ್ಮ್ ಮೇಲೆ ಮಲಗಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರು ತಿಮ್ಮೇಗೌಡ ಅವರನ್ನು ಆಟೋ ರಿಕ್ಷಾದ ಮೂಲಕ 11.15 ಕ್ಕೆ ಇನ್‌ಫೆಂಟ್ರಿ ರಸ್ತೆಯಲ್ಲಿರುವ ಸ್ವರ್ಶ ಆಸ್ಪತ್ರೆಗೆ ದಾಖಲಿಸಿದರು. ಮರುದಿನ ಬೆಳಗ್ಗೆ 11.57ಕ್ಕೆ ತಿಮ್ಮೇಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು” ಎಂದು ದೂರಿನಲ್ಲಿ ತಿಳಿಸಲಾಗಿದೆ.

“ತಿಮ್ಮೆಗೌಡ ಅವರು ಕುಸಿದು ಬಿದ್ದಾಗಲೂ ಬಿಎಂಆರ್‌ಸಿಎಲ್‌ ಸಿಬ್ಬಂದಿ ಸಹಾಯಕ್ಕೆ ಬಂದಿಲ್ಲ. ಯಾವುದೇ ರೀತಿಯ ವೈದ್ಯಕೀಯ ನೆರವು ನೀಡಿಲ್ಲ. ಮೆಟ್ರೊ ನಿಲ್ದಾಣದಲ್ಲಿ ಬಿದ್ದ ವ್ಯಕ್ತಿಯನ್ನು ಹೊರಗೆ ಕರೆ ತಂದು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಲಿಲ್ಲ. ಮೆಟ್ರೋ ನಿಲ್ದಾಣದಲ್ಲಿಯೇ 15 ರಿಂದ 20 ನಿಮಿಷಗಳ ಕಾಲ ಮಲಗಿದ್ದರು. ಆಂಬ್ಯುಲೆನ್ಸ್‌ ಕರೆಸುವ ಪ್ರಯತ್ನ ಮಾಡಲಿಲ್ಲ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ...

ಬಿಬಿಎಂಪಿ | ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರ ಹೆಸರು ಪ್ರಕಟ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಸುಸ್ತಿದಾರರ ಪಟ್ಟಿಯನ್ನು ಬೃಹತ್ ಬೆಂಗಳೂರು ಮಹಾನಗರ...

ಅನ್ನ, ಆರೋಗ್ಯ, ಆಶ್ರಯ, ಅಕ್ಷರವೇ ನಮ್ಮ ಸರ್ಕಾರದ ಮೂಲಮಂತ್ರ: ಸಿಎಂ ಸಿದ್ಧರಾಮಯ್ಯ

“ಅನ್ನ, ಆರೋಗ್ಯ, ಆಶ್ರಯ, ಅಕ್ಷರ ಇದೇ ನಮ್ಮ ಸರ್ಕಾರದ ಮೂಲಮಂತ್ರವಾಗಿದ್ದು, ಬಡವರ...

ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ...