ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಮನೆಗೆ ಬೆಂಕಿ ಹಚ್ಚಿದ ಘಟನೆ ವಿವೇಕ್ ನಗರದಲ್ಲಿ ನಡೆದಿದೆ. ಜು.1 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಬೆಂಕಿ ಹಚ್ಚಿದ ಆರೋಪಿಯನ್ನು ಸುಬ್ರಮಣಿ ಎಂದು ಗುರುತಿಸಲಾಗಿದೆ. ವೆಂಕಟರಮಣಿ ಎಂಬವರ ಬಳಿ ಆರೋಪಿಯ ಸಹೋದರಿ ತನ್ನ ಮಗಳ ಮದುವೆಗಾಗಿ, 5 ಲಕ್ಷ ರೂ. ಹಣ ಪಡೆದಿದ್ದಳು. ಹಣ ಪಡೆದು ಹಲವು ವರ್ಷಗಳಾದರೂ ಹಣ ವಾಪಸ್ ನೀಡಿರಲಿಲ್ಲ. ಇದರಿಂದ ವೆಂಕಟರಮಣಿ ಹಣ ವಾಪಸ್ ಕೊಡುವಂತೆ ಕೇಳಿದ್ದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ
ಹಣ ವಾಪಸ್ ಕೇಳಿದ್ದಕ್ಕೆ ಪಾರ್ವತಿ ಹಾಗೂ ಆಕೆಯ ಮಗಳು ವೆಂಕಟರಮಣಿಯವರ ಬಳಿ ಗಲಾಟೆ ಮಾಡಿದ್ದಾರೆ. ಇನ್ನೂ ಇದೇ ವಿಚಾರಕ್ಕೆ ಸಿಟ್ಟಾದ ಆರೋಪಿ, ವೆಂಕಟರಮಣಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪಾರಾಗಿದ್ದಾರೆ. ಆರೋಪಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ವೆಂಕಟರಮಣಿ ಪುತ್ರ ವಿವೇಕ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಘಟನೆಯಲ್ಲಿ ಮನೆಯ ಮುಂಭಾಗ ಮತ್ತು ಕಿಟಕಿ ಸುಟ್ಟು ಭಸ್ಮವಾಗಿದೆ. ವಿವೇಕನಗರ ಪೊಲೀಸ್ ಠಾಣೆಯಲ್ಲಿ ಸತೀಶ್ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ. ಸುಬ್ರಮಣಿ, ಪಾರ್ವತಿ, ಮಹಾಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
#Bengaluru
— DINESH SHARMA (@medineshsharma) July 4, 2025
A man attempted to set a house on fire over an alleged financial dispute. #CCTV footage captured the accused, Subramani, pouring petrol on the main door, window, and footwear stand of the house belonging to Venkataramani and her son Satish, before setting it ablaze. pic.twitter.com/lAVawhyrej
