ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಡಿ.30 ರಂದು 7,060 ಜನರಿಗೆ ಕೋವಿಡ್ ಪರೀಕ್ಷೆ ಮಾಡಿಸಲಾಗಿದೆ. ಈ ಪೈಕಿ, 201 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ 201 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ ಬೆಂಗಳೂರಿನಲ್ಲಿ 39 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ 833 ಜನರಲ್ಲಿ ಕೊರೋನಾ ಸೋಂಕು ಹರಡಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಶೇಕಡಾ 2.84 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
#COVID19 Media Bulletin – 30/12/2023 pic.twitter.com/L0IzHmQzoE
— K’taka Health Dept (@DHFWKA) December 30, 2023
60 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೋಮ್ ಐಸೋಲೇಷನ್‌ನಲ್ಲಿ 783 ಜನರಿದ್ದು, ಆಸ್ಪತ್ರೆಯಲ್ಲಿ 50 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 35 ಜನ ಜನರಲ್ ಬೆಡ್‌ನಲ್ಲಿದ್ದಾರೆ.
ಡಿ.30 ರಂದು 7060 ಕೋವಿಡ್ ಪರೀಕ್ಷೆ ನಡೆಸಿದ್ದು, 5549 ಆರ್‌ಟಿಪಿಸಿಆರ್ ಟೆಸ್ಟ್ ಮಾಡಿಸಲಾಗಿದೆ. ಇನ್ನು 1511 ಆರ್‌ಎಟಿ ಟೆಸ್ಟ್ ನಡೆಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮಾಲ್ ಆಫ್ ಏಷ್ಯಾ | ಡಿ.31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧ
ಸಚಿವ ಸಂಪುಟ ಉಪಸಮಿತಿ ನಿರ್ದೇಶನದಂತೆ ಕೋವಿಡ್ ಸೋಂಕು ಹರಡದಿರಲು ಹಾಗೂ ಮುಂಜಾಗೃತೆ ಕ್ರಮ ಕೈಗೊಳ್ಳಲು ನಗರದ ಪ್ರಮುಖ ವಿಕ್ಟೋರಿಯಾ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಜನರಲ್ ಆಸ್ಪತ್ರೆ, ಸಿ.ವಿ.ರಾಮನ್ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಗಳಲ್ಲಿ ಐಸೋಲೇಟೆಡ್ ಕೋವಿಡ್ ವಾರ್ಡ್ ಕಾಯ್ದಿರಿಸಲು ಸೂಚನೆ ನೀಡಲಾಗಿದೆ.
ಅಲ್ಲದೇ, ರಾಜ್ಯದ ಎಲ್ಲ ಜಿಲ್ಲೆಯ ವೈದ್ಯಕೀಯ ಕಾಲೇಜುಗಳು ಸೇರಿದಂತೆ ಜಿಲ್ಲಾ ಆಸ್ಪತ್ರೆ ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿನ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚಿಸಿದೆ.