ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಜನವರಿ 10ರಂದು 201 ಜನರಿಗೆ ಸೋಂಕು ತಗುಲಿದ್ದು, ಮೈಸೂರು ಜಿಲ್ಲೆಯಲ್ಲಿ ಒಬ್ಬರು ಮೃತರಾಗಿದ್ದಾರೆ.
ರಾಜ್ಯದಲ್ಲಿ ಬುಧವಾರ 7,315 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 974 ಜನರಲ್ಲಿ ಕೊರೋನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 2.74 ರಷ್ಟು ಇದೆ. ಬೆಂಗಳೂರಿನಲ್ಲಿ 121 ಜನರಿಗೆ ಪಾಸಿಟಿವ್ ವರದಿ ಬಂದಿದ್ದು, ರಾಜ್ಯದಲ್ಲಿ 257 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ಡಿಸೆಂಬರ್‌ನಲ್ಲಿ ಬರೋಬ್ಬರಿ 2 ಕೋಟಿ ಜನ ಸಂಚಾರ: ₹55 ಕೋಟಿ ಆದಾಯ
ಜಿಲ್ಲಾವಾರು ಕೊರೋನಾ ಸೋಂಕು ದೃಡ
ಗದಗ 3, ರಾಯಚೂರು 2, ತುಮಕೂರು 14, ಮೈಸೂರು, 10, ಚಾಮರಾಜನಗರ 8, ಬೆಂಗಳೂರು ಗ್ರಾಮಾಂತರ ಜಿಲ್ಲೆ 7, ಬಳ್ಳಾರಿ, ಬೆಳಗಾವಿ ಹಾಗೂ ಹಾಸನದಲ್ಲಿ ತಲಾ 6, ಕೊಪ್ಪಳ 4, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಧಾರವಾಡ 3, ಬಾಗಲಕೋಟೆ, ಮಂಡ್ಯ, ಚಿತ್ರದುರ್ಗ, ದಕ್ಷಿಣ ಕನ್ನಡ, ವಿಜಯನಗರ ಜಿಲ್ಲೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ.