ಫೆ. 21ರಿಂದ ಲಿಂಗತ್ವ ಅಲ್ಪಸಂಖ್ಯಾತರ ಉತ್ಸವ ‘ಒಂದೆಡೆ ರಂಗೋತ್ಸವ’

Date:

ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್‌ ಆರ್ಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಉತ್ಸವ ‘ಒಂದೆಡೆ ರಂಗೋತ್ಸವ’ವು ನಡೆಯಲಿದೆ. ಕೇಂದ್ರ ಸಂಸ್ಕೃತಿ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ಸಾಮಾಜಿಕ ಸಂಸ್ಥೆ, ರಾಜ್ಯ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ನಾಟಕ ಅಕಾಡೆಮಿ ಸಹಕಾರದಲ್ಲಿ ‘ಒಂದೆಡೆ’ ಸಂಘಟನೆಯು ಈ ಉತ್ಸವವನ್ನು ಆಯೋಜಿಸುತ್ತಿದೆ.

- Advertisement -

ಎರಡು ದಿನಗಳ ಈ ಲಿಂಗತ್ವ ಅಲ್ಪಸಂಖ್ಯಾತರ ಸಾಂಸ್ಕೃತಿಕ ಸಮ್ಮಿಲನ ಫೆಬ್ರವರಿ 21 ಅಂದರೆ ಇಂದು ಬೆಳಿಗ್ಗೆ 11.00 ಗಂಟೆಗೆ ಉದ್ಘಾಟನೆಗೊಳ್ಳಲಿದೆ. ಅದಕ್ಕೂ ಮುನ್ನವೇ ವೈಷ್ಣವಿ ನಾಟ್ಯಶಾಲಾ ತಂಡದ ಸದಸ್ಯರಿಂದ ಭರತನಾಟ್ಯ ಪ್ರದರ್ಶನಗೊಳ್ಳಲಿದೆ. ಬಳಿಕ ರಂಗಪಯಣ ತಂಡವು `ಅಕ್ಕೆ-ಕರುಣೆಗೊಂದು ಸವಾಲು’ ರಂಗ ಪ್ರಸ್ತುತಿ ನೀಡಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಇದನ್ನು ಓದಿದ್ದೀರಾ? ಮಹಿಳೆಯರ ಸುರಕ್ಷತೆಗೆ ʼಸಖಿ ಆಟೋʼ ಸೇವೆ: ಮಹಿಳಾ ಸಬಲೀಕರಣದತ್ತ ಮಹತ್ವದ ಹೆಜ್ಜೆ

ಮಧ್ಯಾಹ್ನದ ಬಳಿಕ ವೈಷ್ಣವಿ ನಾಟ್ಯಶಾಲಾ ತಂಡದ ಸದಸ್ಯರ ಭರತನಾಟ್ಯ ಪ್ರದರ್ಶನವಿರಲಿದ್ದು, ಬಳಿಕ ಕವಿಗೋಷ್ಠಿಯಲ್ಲಿ ಸಮುದಾಯದ ಸದಸ್ಯರು ಕವನ ವಾಚಿಸಲಿದ್ದಾರೆ. ನಂತರ ಸಾಧನ ಮಹಿಳಾ ಸಂಘವು ‘ಹಸಿವು ಕನಸು’ ರಂಗ ಪ್ರಸ್ತುತಿ ಪ್ರದರ್ಶಿಸಲಿದೆ. ಒಂದೆಡೆ ರಂಗ ತಂಡವು ಕರಗಾಟ ಪ್ರಸ್ತುತಪಡಿಸಲಿದೆ. ಜತೆಗೆ ಸಮುದಾಯದ ಸದಸ್ಯರ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವಿರಲಿದೆ.

ondede

ಫೆಬ್ರವರಿ 22ರಂದು ಒಂದೆಡೆ ರಂಗತಂಡ ಮತ್ತು ಉತ್ತರ ಕರ್ನಾಟಕ ಜೋಗಪ್ಪ ಸಂಘದ ಸದಸ್ಯರು ಚೌಡಕಿ ಪದ ಹಾಡಲಿದ್ದಾರೆ. ಬಳಿಕ ರೂಮಿ ಹರೀಶ್ ಅವರ ಎ ಟು ಇ’ ಏಕವ್ಯಕ್ತಿ ಪ್ರದರ್ಶನವಿರಲಿದೆ. ಊಟದ ವಿರಾಮದ ಬಳಿಕ ‘ಪರಿವರ್ತಿತ ಲಿಂಗತ್ವ’ ಸಮುದಾಯವು ‘ತಲ್ಕಿ’ ನಾಟಕ ಪ್ರದರ್ಶನ ನೀಡಲಿದೆ. ಒಂದೆಡೆ ತಂಡದಿಂದ ಸಾಂಸ್ಕೃತಿಕ ಹಾಡುಗಳ ಗಾಯನ ಇರಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...