ವಿದ್ಯಾರ್ಥಿಗಳಿಗೆ ‘ಪೋಕ್ಸೋ ಕಾಯ್ದೆ’ ಕುರಿತು ಜಾಗೃತಿ ಮೂಡಿಸಲು ‘ತೆರೆದ ಮನೆ’ ಕಾರ್ಯಕ್ರಮ

Date:

Advertisements

18 ವರ್ಷದೊಳಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು, ಕಿರುಕುಳ, ಅತ್ಯಾಚಾರಗಳಂತಹ ದುರ್ಘಟನೆಗಳು ನಡೆಯುತ್ತಿವೆ. ಇವುಗಳನ್ನು ತಡೆಗಟ್ಟಲು, ಮಕ್ಕಳಿಗೆ ರಕ್ಷಣೆ, ಭದ್ರತೆ ಹಾಗೂ ನ್ಯಾಯ ಒದಗಿಸುವುದರ ಜತೆಗೆ ಅವರ ಆಸಕ್ತಿ ಮತ್ತು ಹಿತ ಕಾಪಾಡುವ ಉದ್ದೇಶದಿಂದ ‘ಪೋಕ್ಸೋ ಕಾಯಿದೆ-2012’ಯನ್ನು ಭಾರತ ಸರ್ಕಾರ ಜಾರಿಗೆ ತಂದಿದೆ. ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಈ ಕಾಯ್ದೆಯ ಬಗ್ಗೆ ‘ತೆರೆದ ಮನೆ’ ಕಾರ್ಯಕ್ರಮದಡಿ ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪೋಕ್ಸೋ ಕಾಯಿದೆ ಬಗ್ಗೆ ‘ತೆರೆದ ಮನೆ’ ಕಾರ್ಯಕ್ರಮದಡಿ ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದೆ.

ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಪೋಕ್ಸೋ ಕಾಯಿದೆ 2012’ ಮತ್ತು ‘ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016’ ಇವುಗಳ ಕುರಿತು ಶಾಲಾ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಅರಿವು ಮೂಡಿಸಲು ಹಾಗೂ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶಿಕ್ಷಣ ಇಲಾಖೆ ತಿಳಿಸಿದೆ.

Advertisements

ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಪೋಕ್ಸೋ ಕಾಯ್ದೆ-2012, ಮಕ್ಕಳ ರಕ್ಷಣಾ ನೀತಿ-2016 ಹಾಗೂ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾರ್ಗಸೂಚಿ ಹಾಗೂ ಇಲಾಖೆಯಿಂದ ಕಾಲಕಾಲಕ್ಕೆ ನೀಡಲಾಗಿರುವ ಪೋಕ್ಸೋ ಕಾಯ್ದೆಯ ಕುರಿತಾದ ಎಲ್ಲ ಅಂಶಗಳ ಕುರಿತು ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಬಿಡುವಿನ ವೇಳೆಯಲ್ಲಿ ಸಂಧರ್ಭಾನುಸಾರ ಬೋಧನಾ ಅವಧಿಗಳಲ್ಲಿ, ನಾನಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ, ರಾಷ್ಟ್ರೀಯ ಹಬ್ಬಗಳ ಸಂಧರ್ಭಗಳಲ್ಲಿ ವಿದ್ಯಾರ್ಥಿಗಳಿಗೆ, ಪೋಷಕರ ಸಭೆಗಳಲ್ಲಿ, ತಾಯಂದಿರ ಸಭೆಗಳಲ್ಲಿ, ಸಮುದಾಯದತ್ತ ಶಾಲೆ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಹಾಗೂ ಶಾಲಾ ಆವರಣದಲ್ಲಿ, ಶಾಲಾ ಸಭಾಂಗಣದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ನೀಡಬೇಕು ಎಂದು ಹೇಳಿದೆ.

ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ‘ತೆರೆದ ಮನೆ’ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿದಂತೆ ಎಲ್ಲ ಪಾಲುದಾರರಿಗೆ, ಭಾಗಿದಾರರಿಗೆ ಜಾಗೃತಿ ಮೂಡಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಇಲಾಖೆಯ ಎಲ್ಲ ಶಾಲಾ ಉಸ್ತುವಾರಿ ಮತ್ತು ಮೇಲ್ವಿಚಾರಣಾ ಅಧಿಕಾರಿಗಳಿಗೆ ಮತ್ತು ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋಗೆ ಪೂರ್ಣಾವಧಿ ವ್ಯವಸ್ಥಾಪಕ ನಿರ್ದೇಶಕರಾಗಿ ಮಹೇಶ್ವರ ರಾವ್ ನೇಮಕ

ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಪೋಕ್ಸೋ ಕಾಯಿದೆ 2012’ ಮತ್ತು ‘ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016’ ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು, ಶಾಲೆಗಳು, ಆಡಳಿತ ಮಂಡಳಿಗಳು, ಪೋಷಕರು ಎಸ್‌ಡಿಎಂಸಿ ಹಾಗೂ ಇತರರು ಸೇರಿದಂತೆ ಎಲ್ಲ ಪಾಲುದಾರರು, ಭಾಗಿದಾರರು ಕೈಗೊಳ್ಳಬೇಕಾದ ಕ್ರಮಗಳನ್ನು ಒಳಗೊಂಡ ಪ್ರಮಾಣೀಕೃತ ಕಾರ್ಯಚರಣಾ ವಿಧಾನವನ್ನು ಮತ್ತು ಮಾರ್ಗಸೂಚಿಯನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ  ಹೊರಡಿಸಿದೆ.

ರಾಜ್ಯದಲ್ಲಿನ ಪ್ರತಿಯೊಂದು ಮಗುವು ಎಲ್ಲ ಸಂದರ್ಭಗಳಲ್ಲಿಯೂ ಎಲ್ಲ ರೀತಿಯ ಹಿಂಸೆ, ನಿರ್ಲಕ್ಷ್ಯ ಹಾಗೂ ಶೋಷಣೆಗೆ ಒಳಗಾಗಿದೆ. ಮಕ್ಕಳಿಗೆ ರಕ್ಷಣೆ ಮತ್ತು ಸುರಕ್ಷತೆ ನೀಡುವ ಸಲುವಾಗಿ ಎಲ್ಲ ಸಾಮಾಜಿಕ ವಲಯಗಳು ವಿಶೇಷವಾಗಿ ಸಮಾಜ ಕಲ್ಯಾಣ, ಶಿಕ್ಷಣ, ಆರೋಗ್ಯ, ಭದ್ರತೆ ಹಾಗೂ ಸಾಮಾಜಿಕ ನ್ಯಾಯ ಇವುಗಳನ್ನು ಮಕ್ಕಳಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹಾಗೂ ಲಿಂಗತ್ವ ನಾಗರೀಕತೆಯೂ ಸೇರಿದಂತೆ ಎಲ್ಲ ಆರ್ಥಿಕ, ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಅಥವಾ ಬೌಗೋಳಿಕ ತಾರತಮ್ಯಗಳನ್ನು ತೊಡೆದು ಹಾಕುವ ಉದ್ದೇಶಗಳಿಂದ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ 2016ನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X