ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ಕರ್ನಾಟಕ ಸಂಭ್ರಮ-50ರ ಅಂಗವಾಗಿ, ಅನ್ ಬಾಕ್ಸಿಂಗ್ ಬೆಂಗಳೂರು ಇದರ ಭಾಗವಾಗಿ ಆಯೋಜಿಸಿರುವ ನಮ್ಮ ಜಾತ್ರೆ ಜನಪದ ಸಂಭ್ರಮ ಡಿಸೆಂಬರ್ 10 ಮತ್ತು 11 ರಂದು ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.
“ಈ ಮೊದಲು ಈ ಕಾರ್ಯಕ್ರಮ ಡಿಸೆಂಬರ್ 9 ಹಾಗೂ 10ರಂದು ನಿಗದಿಯಾಗಿದ್ದು, ಕನ್ನಡ ಚಲನಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ನಿಧನರಾದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
“ನಮ್ಮ ಜಾತ್ರೆ ಕಾರ್ಯಕ್ರಮದ ಭವ್ಯವಾದ ಮೆರವಣಿಗೆಯನ್ನು ಡಿಸೆಂಬರ್ 10ರಂದು ಬೆಳಿಗ್ಗೆ 9.30 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸೌಧದ ಮುಂಭಾಗದಲ್ಲಿ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಉಪಸ್ಥಿತರಿರುತ್ತಾರೆ” ಎಂದು ಹೇಳಿದ್ದಾರೆ.
ಬೆಳಿಗ್ಗೆ 11.00 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾ ಪ್ರದರ್ಶನ, ಆಹಾರ ಮೇಳ, ಗುಡಿ ಮತ್ತು ಕುಶಲ ಕಲೆಗಾರಿಕೆಗಳ ಮಾರಾಟ ಮಳಿಗೆ ಹಾಗೂ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸುವರು.