ನಮ್ಮ ಮೆಟ್ರೋ | ಡಿಸೆಂಬರ್‌ನಲ್ಲಿ ಬರೋಬ್ಬರಿ 2 ಕೋಟಿ ಜನ ಸಂಚಾರ: ₹55 ಕೋಟಿ ಆದಾಯ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉಂಟಾಗುವ ವಾಹನ ಸಂಚಾರ ದಟ್ಟಣೆಗೆ ‘ನಮ್ಮ ಮೆಟ್ರೋ’ ಮದ್ದಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರತಿ ನಿತ್ಯ 6.88 ಲಕ್ಷ ಮಂದಿ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಾರೆ. ಡಿಸೆಂಬರ್‌ ತಿಂಗಳಿನಲ್ಲಿ ನಮ್ಮ ಮೆಟ್ರೋವನ್ನು ಬರೋಬ್ಬರಿ 2 ಕೋಟಿ ಜನ ಬಳಕೆ ಮಾಡಿದ್ದು, ಬರೋಬ್ಬರಿ ₹55 ಕೋಟಿ ಆದಾಯ ಸಂಗ್ರಹವಾಗಿದೆ.

ಹೊಸ ವರ್ಷದ ಹಿನ್ನೆಲೆ, ಅಂದರೆ, ಡಿ.31ರಂದು ಒಂದೇ ದಿನ ಬರೋಬ್ಬರಿ 6,26,202 ಜನ ಸಂಚಾರ ಮಾಡಿದ್ದು, ಬರೊಬ್ಬರಿ ₹1,64,74,918 ಆದಾಯ ಬಂದಿದೆ.

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಬಳಕೆಯ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಡಿಸೆಂಬರ್‌ನ ಒಟ್ಟು ಪ್ರಯಾಣಿಕರ ಸಂಖ್ಯೆ 2,13,34,076 ಕೋಟಿ ಇದೆ. ದಿನದ ಸರಾಸರಿ ಪ್ರಯಾಣಿಕರ ಸಂಖ್ಯೆ 6,88,196 ಇದೆ.

Advertisements

ಸಾಮಾನ್ಯವಾಗಿ ಭಾನುವಾರ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆ ಇರುತ್ತದೆ. ಆದರೆ, ಹೊಸ ವರ್ಷದ ಹಿನ್ನೆಲೆ, ಅಂದಿನ ದಿನ ಲಕ್ಷಾಂತರ ಜನ ಸಂಚಾರ ಮಾಡಿದ್ದಾರೆ. ಅಲ್ಲದೇ, ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೊಸ ವರ್ಷದ ಹಿನ್ನೆಲೆ, ರಾತ್ರಿ 2:15ರವರೆಗೆ ಮೆಟ್ರೋ ಸೇವೆ ಒದಗಿಸಿತ್ತು.

ಈ ಸುದ್ದಿ ಓದಿದ್ದೀರಾ? ಬ್ಯಾಂಕ್ ಕಿರುಕುಳ | ಸಚಿವ ಜಮೀರ್ ನ್ಯಾಯ ಕೊಡಿಸಲಿಲ್ಲವೆಂದು ವಿಧಾನಸೌಧದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ರೀಲ್ಸ್‌ ಮಾಡಿ ಹುಚ್ಚಾಟ ಮೇರೆದವನಿಗೆ ದಂಡ

ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಕಳೆದ ಕೆಲವು ದಿನಗಳ ಹಿಂದೆ ಮೆಟ್ರೋದಲ್ಲಿ ಪ್ರಯಾಣ ಮಾಡುವಾಗ ‘ಅಮ್ಮ’ ಎಂದು ಕಿರುಚಿ ರೀಲ್ಸ್‌ ಮಾಡಿ ಹುಚ್ಚಾಟ ಮೆರೆದಿದ್ದ ವ್ಯಕ್ತಿಯಿಂದ ಭದ್ರತಾ ವಿಭಾಗದ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

ನಮ್ಮ ಮೆಟ್ರೋದಲ್ಲಿ ನ್ಯೂಸೆನ್ಸ್ (59) 1 ಉಂಟುಮಾಡಿದ ಆರೋಪದಡಿ ಯೂಟ್ಯೂಬರ್ ಸಂತೋಷ್ ಕುಮಾರ್ ಎಂಬುವವರ ವಿರುದ್ಧ ಪ್ರಕರಣ ದಾಖಲು ಮಾಡಿ ₹500 ದಂಡ ವಿಧಿಸಿ ಎಚ್ಚರಿಕೆ ನೀಡಿದ್ದಾರೆ.

ಸಂತೋಷ್ ಕುಮಾರ್ ಈತ ಬಂಡೆಪಾಳ್ಯದ ಗೆದ್ದನಹಳ್ಳಿಯ ನಿವಾಸಿ. ಈತನು ಯೂಟ್ಯೂಬರ್‌ ಡಿಸೆಂಬರ್ 24ರಂದು ಚಲಿಸುವ ಮೆಟ್ರೋದಲ್ಲಿ ರೀಲ್ಸ್‌ ಮಾಡಿ ಸಹ ಪ್ರಯಾಣಿಕರಿಗೆ ತೊಂದರೆ ಕೊಟ್ಟಿದ್ದನು. ಅಲ್ಲದೇ, ಕಿರುಚಾಡಿ ಹುಚ್ಚಾಟ ಮೆರೆದಿದ್ದನು. ಈತನ ಹುಚ್ಚಾಟಕ್ಕೆ ಸಹ ಪ್ರಯಾಣಿಕರು ಕೆಲಕಾಲ ಗಾಬರಿಗೊಂಡರು.

ರೀಲ್ಸ್‌ ಮಾಡಿ ಇನ್‌ಸ್ಟಾಗ್ರಾಮ್‌ನ ಯಶ್ ಗೌಡ ಎಂಬ ಅಕೌಂಟ್ ಮೂಲಕ ಅಪ್‌ಲೋಡ್ ಮಾಡಲಾಗಿತ್ತು. ಈ ವಿಡಿಯೋ ಹಿನ್ನೆಲೆ, ಸಂತೋಷ್‌ಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X