ನಮ್ಮ ಮೆಟ್ರೋ | ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ನೋಡಿ

Date:

ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್​ 17, 20, 23, 24 ಮತ್ತು 29ರಂದು ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “ಆಗಸ್ಟ್‌ 17ರಂದು ಕೆಂಗೇರಿ ಮತ್ತು ಮೈಸೂರು ರಸ್ತೆಯ ಮೆಟ್ರೋ ನಿಲ್ದಾಣಗಳ ನಡುವೆ ಯಾವುದೇ ರೈಲು ಸೇವೆ ಇರುವುದಿಲ್ಲ. ಮೈಸೂರು ರಸ್ತೆ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ಬೆಳಗ್ಗೆ 5 ರಿಂದ ರಾತ್ರಿ 11 ರವರೆಗೆ ರೈಲು ಸೇವೆಗಳು ಲಭ್ಯವಿರುತ್ತದೆ” ಎಂದು ತಿಳಿಸಿದೆ.

ಆಗಸ್ಟ್‌ 23, 24 ರಂದು ಕೆಂಗೇರಿ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಮೈಸೂರು ರಸ್ತೆ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಮಾತ್ರ ರೈಲು ‌ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7.00 ಗಂಟೆಯ ನಂತರ ಕೆಂಗೇರಿಯಿಂದ ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಎಂದಿನಂತೆ ಸೇವೆ ಲಭ್ಯವಿರುತ್ತದೆ” ಎಂದು ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆಗಸ್ಟ್‌ 23, 24 ರಂದು ಬೆಳಿಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೈಸೂರು ರಸ್ತೆ ನಿಲ್ದಾಣದಲ್ಲಿ ರೈಲುಗಳ ಸೇವೆ ಕೊನೆಗೊಳ್ಳುತ್ತದೆ. ಇತರೆ ದಿನಗಳಲ್ಲಿ ರೈಲುಗಳು ಕೆಂಗೇರಿ ನಿಲ್ದಾಣದ ವರೆಗೆ ರೈಲು ಸೇವೆ ಲಭ್ಯವಿರುತ್ತದೆ. ಬೆಳಗ್ಗೆ 7 ಗಂಟೆಯ ನಂತರ ಬೈಯಪ್ಪನಹಳ್ಳಿಯಿಂದ ಕೆಂಗೇರಿ ನಿಲ್ದಾಣದ ಮಾರ್ಗಗಳ ನಡುವೆ ಎಂದಿನಂತೆ ಸೇವೆಗಳು ಲಭ್ಯವಿರುತ್ತದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಸ್ವಾತಂತ್ರ್ಯ ದಿನ | ಬಿಬಿಎಂಪಿ ಮತ್ತು ಕೆಎಸ್‌ಆರ್‌ಟಿಸಿ ಕಚೇರಿಗಳಲ್ಲಿ ಆಚರಣೆ

“ಆಗಸ್ಟ್​ 20 ಮತ್ತು 29ರಂದು ಬೈಯಪ್ಪನಹಳ್ಳಿ ಟರ್ಮಿನಲ್ ಮತ್ತು ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ (ಕಾಡುಗೋಡಿ) ಮಾರ್ಗಗಳ ನಡುವೆ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ರೈಲು ಸೇವೆ ಲಭ್ಯವಿರುವುದಿಲ್ಲ. ಈ ಅವಧಿಯಲ್ಲಿ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಮಾತ್ರ ರೈಲು ಸೇವೆ ಲಭ್ಯವಿರುತ್ತದೆ” ಎಂದು ತಿಳಿಸಿದೆ.

ನಮ್ಮ ಮೆಟ್ರೋದ ಹಸಿರು ಮಾರ್ಗದಲ್ಲಿ ಎಂದಿನಂತೆ ರೈಲು ಸೇವೆ ಇರುತ್ತದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಆಗಿರುವ ಬದಲಾವಣೆಯನ್ನು ಗಮನಿಸಿ ಸಹಕರಿಸುವಂತೆ ಬಿಎಂಆರ್‌ಸಿಎಲ್‌ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪ್ರತಿ ಮನೆಯಿಂದ ₹100 ಘನತ್ಯಾಜ್ಯ ಶುಲ್ಕ ಸಂಗ್ರಹಕ್ಕೆ ಎಎಪಿ ವಿರೋಧ

ಪ್ರತಿವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಬಜೆಟ್‌ನಲ್ಲಿ ಕಸ ವಿಲೇವಾರಿಗೆಂದೇ ಹಣ...

ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಜೂನ್ 16ರಂದು ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆ (ಯುಪಿಎಸ್‌ಸಿ) ನಡೆಯುವ ಕಾರಣ...

ವಂಚನೆ, ಜೀವ ಬೆದರಿಕೆ ಆರೋಪ: ಕೇಂದ್ರ ಸಚಿವ ಸೋಮಣ್ಣ ಪುತ್ರನ ವಿರುದ್ಧ ಎಫ್‌ಐಆ‌ರ್

ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿಕೊಂಡ...

ನಮ್ಮ ಮೆಟ್ರೋ | ಸುರಂಗ ಕೊರೆಯುವ ಟಿಬಿಎಂ ಯಂತ್ರಗಳಿಗೆ ಅಡ್ಡ ಬಂದ ಬಂಡೆ; ಪಿಂಕ್ ಲೈನ್ ಕಾಮಗಾರಿ ವಿಳಂಬ

ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮದ್ದಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ 'ನಮ್ಮ ಮೆಟ್ರೋ' ಇನ್ನೂ...