ನಮ್ಮ ಮೆಟ್ರೋ | ನೇರಳೆ ಮಾರ್ಗದಲ್ಲಿ ಜು.10ರಿಂದ ಆ.9ರವರೆಗೆ ನಿತ್ಯ 2 ಗಂಟೆ ಸಂಚಾರ ಸ್ಥಗಿತ

Date:

  • ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲು ಸಂಚಾರ ಆರಂಭ
  • ನಮ್ಮ ಮೆಟ್ರೋ ಪ್ರಯಾಣಿಕರು ಆಗಿರುವ ಬದಲಾವಣೆ ಗಮನಿಸಿ

ನೇರಳೆ ಮಾರ್ಗದಲ್ಲಿನ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣ ಸಂಪರ್ಕವನ್ನು ಕಲ್ಪಿಸಲು ಸಿಗ್ನಲಿಂಗ್ ಹಾಗೂ ಇತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆ, ಜುಲೈ 10 ರಿಂದ ಆಗಸ್ಟ್‌ 9ರವರೆಗೆ ಬೆಳಗ್ಗೆ 5 ಗಂಟೆಯಿಂದ 7 ಗಂಟೆವರೆಗೆ ಮೆಟ್ರೋ ರೈಲು ಸೇವೆ ಸ್ಥಗಿತವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಎಂಆರ್‌ಸಿಎಲ್‌, “ಬೈಯಪ್ಪನಹಳ್ಳಿ ಮತ್ತು ಎಸ್.ವಿ ರಸ್ತೆ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ನಡುವೆಯ ರೈಲು ಸಂಚಾರ ಸ್ಥಗಿತವಾಗಲಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಸ್ವಾಮಿ ವಿವೇಕಾನಂದ ರಸ್ತೆ (ಬೈಯಪ್ಪನಹಳ್ಳಿ ನಿಲ್ದಾಣದ ಮೊದಲು ಒಂದು ನಿಲ್ದಾಣ) ಮತ್ತು ಕೆಂಗೇರಿ ನಿಲ್ದಾಣಗಳ ನಡುವಿನ ರೈಲು ಸೇವೆ ಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಸ್ಥಗಿತವಾಗಲಿದೆ. ಬೆಳಗ್ಗೆ 7 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳು ಎಂದಿನಂತೆ ರಾತ್ರಿ 11 ಗಂಟೆಯವರೆಗೆ ಇರಲಿದೆ” ಎಂದು ತಿಳಿಸಿದೆ.

“ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಈಗ ಆಗಿರುವ ಬದಲಾವಣೆಯನ್ನು ಗಮನಿಸಬೇಕು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಮುಂದಿನ ಐದು ದಿನಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

ಬಜೆಟ್ ; ನಮ್ಮ ಮೆಟ್ರೋ ವಿಸ್ತರಣೆಗೆ ₹31,328 ಕೋಟಿ ಅನುದಾನ

2023-24ನೇ ಸಾಲಿನ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ ಮಂಡಿಸಿದ್ದಾರೆ. ಬೆಂಗಳೂರಿನ ನಮ್ಮ ಮೆಟ್ರೋ ವಿಸ್ತರಣೆಗೆ ₹31,328 ಕೋಟಿ ಅನುದಾನ ನೀಡಿದ್ದು, ಎರಡು ಪ್ರತ್ಯೇಕ ಮೆಟ್ರೋ ರೈಲು ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

“ಮೆಟ್ರೋ ಮೂರನೇ ಹಂತದ ಯೋಜನೆಯಡಿ ಕೆಂಪಾಪುರದಿಂದ ಜೆಪಿ ನಗರ 4ನೇ ಹಂತದವರೆಗೆ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗಿನ ಪಶ್ಚಿಮ ಒಆರ್‌ಆರ್ ಮಾರ್ಗ ನಿರ್ಮಾಣವಾಗಲಿದೆ. ಇದಕ್ಕೆ ಅಂದಾಜು ₹16,328 ಕೋಟಿ ವೆಚ್ಚವಾಗಲಿದೆ. ಒಟ್ಟು 45 ಕಿಮೀ ಉದ್ದದ ಮೆಟ್ರೋ ರೈಲು ಯೋಜನೆಯ ವಿಸ್ತೃತ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ” ಎಂದರು.

“ಅಂದಾಜು ₹15,000 ಕೋಟಿ ವೆಚ್ಚದಲ್ಲಿ ಹೆಬ್ಬಾಳದಿಂದ ಸರ್ಜಾಪುರದವರೆಗೆ 37 ಕಿ.ಮೀ ಉದ್ದದ ಹೊಸ ಮೆಟ್ರೊ ಮಾರ್ಗ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಪ್ರಸಕ್ತ ವರ್ಷ ಬೈಯ್ಯಪ್ಪನಹಳ್ಳಿ-ಕೃಷ್ಣರಾಜಪುರ, ಕೆಂಗೇರಿ-ಚಲ್ಲಘಟ್ಟ, ನಾಗಸಂದ್-ಮಾದವಾರ ಹಾಗೂ ಆರ್‌ವಿ ರಸ್ತೆ-ಬೊಮ್ಮಸಂದ್ರದವರೆಗೆ ಒಟ್ಟು 27 ಕಿಮೀ ಉದ್ದದ ಮೆಟ್ರೊ ಮಾರ್ಗ ವಿಸ್ತರಣೆಯಾಗಲಿದೆ” ಎಂದು ತಿಳಿಸಿದರು.

“ಮುಂದಿನ ಮೂರು ವರ್ಷಗಳಲ್ಲಿ 70 ಕಿ.ಮೀ ಉದ್ದದ ಮೆಟ್ರೋ ಸಂಪರ್ಕ ಜಾಲವನ್ನು 176 ಕಿ.ಮೀಗೆ ವಿಸ್ತರಿಸುವ ಗುರಿ ಹೊಂದಲಾಗಿದೆ. ಏರ್‌ಪೋರ್ಟ್‌ ಲೈನ್ ಕಾಮಗಾರಿ 2026ರ ವೇಳೆಗೆ ಮುಗಿಯುವ ನಿರೀಕ್ಷೆಯಿದೆ. ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ನಡೆಸುವಂತೆ ನೋಡಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...