ನಮ್ಮ ಮೆಟ್ರೋ | 2ನೇ ಹಂತದ ನಿರ್ಮಾಣಕ್ಕೆ ₹3,045 ಕೋಟಿ ನೆರವು ನೀಡಲು ಆರ್‌ಇಸಿ ಒಪ್ಪಿಗೆ

Date:

  • ಬಿಎಂಆರ್‌ಸಿಎಲ್‌ ಪ್ರಸ್ತಾವನೆಯನ್ನು ಅನುಮೋದಿಸಿದ ಮಂಡಳಿ
  • ಮೆಟ್ರೋ ಮಾರ್ಗಗಳ ಸ್ಥಾಪನೆ ಮತ್ತು ಅಭಿವೃದ್ಧಿಗೆ ಆರ್ಥಿಕ ನೆರವು

ಕೇಂದ್ರದ ಇಂಧನ ಸಚಿವಾಲಯದ ಅಧೀನದಲ್ಲಿನ ಸಾರ್ವಜನಿಕರ ವಲಯದ ಗ್ರಾಮೀಣ ವಿದ್ಯುದೀಕರಣ ನಿಗಮ (ಆರ್‌ಇಸಿ) ನಮ್ಮ ಮೆಟ್ರೋ ಯೋಜನೆಯ ಹಂತ-2ರ ಮೆಟ್ರೋ ಮಾರ್ಗಗಳ ನಿರ್ಮಾಣ ಮತ್ತು ಅಭಿವೃದ್ಧಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ₹3,045 ಕೋಟಿ ಆರ್ಥಿಕ ನೆರವು ನೀಡಲು ಒಪ್ಪಿಗೆ ಸೂಚಿಸಿದೆ.

- Advertisement -

ಜೂನ್ 24ರಂದು ಬೆಂಗಳೂರಿನಲ್ಲಿ ನಡೆದ ಆರ್‌ಇಸಿಯ ಮಂಡಳಿ ಸಭೆಯಲ್ಲಿ ಸಹಾಯ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಬಿಎಂಆರ್‌ಸಿಎಲ್‌ನ ಪ್ರಸ್ತಾವನೆಯನ್ನು ಮಂಡಳಿಯು ಅನುಮೋದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಮ್ಮ ಮೆಟ್ರೋದ ಹಂತ-2ರ ಯೋಜನೆಯು ಹಂತ-1ರ ಎರಡು ಕಾರಿಡಾರ್‌ಗಳ ವಿಸ್ತರಣೆಯನ್ನು ಒಳಗೊಂಡಿದೆ. ಯೋಜನೆಯಡಿ ಪೂರ್ವ-ಪಶ್ಚಿಮ ಕಾರಿಡಾರ್ ಮತ್ತು ಉತ್ತರ-ದಕ್ಷಿಣ ಕಾರಿಡಾರ್ ಹಾಗೂ ಎರಡು ಹೊಸ ಮಾರ್ಗಗಳ ನಿರ್ಮಾಣವಾಗಲಿದೆ. ಒಂದು ಮಾರ್ಗವು ಆರ್‌.ವಿ ಬೊಮ್ಮಸಂದ್ರಕ್ಕೆ ಹಾಗೂ ಇನ್ನೊಂದು ಮಾರ್ಗವು ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ನಿರ್ಮಾಣವಾಗಲಿದೆ.

ಈ ಸುದ್ದಿ ಓದಿದ್ದೀರಾ? ಬಕ್ರೀದ್ ಹಬ್ಬ | ಈದ್ಗಾ ಮೈದಾನದಲ್ಲಿ ಭರ್ಜರಿ ವ್ಯಾಪಾರ

“ಹಂತ-2ರ ಯೋಜನೆಯು ಸಂಪರ್ಕವನ್ನು ವರ್ಧಿಸುತ್ತದೆ ಮತ್ತು ಜನನಿಬಿಡ ನಗರದಲ್ಲಿ ದಟ್ಟಣೆಯನ್ನು ಸುಲಭಗೊಳಿಸುತ್ತದೆ. ಹಂತ-2 (72.09 .ಮೀ) ಪೂರ್ಣಗೊಂಡಾಗ, ನಮ್ಮ ಮೆಟ್ರೋ ಜಾಲವು 101 ನಿಲ್ದಾಣಗಳೊಂದಿಗೆ 114.39 ಕಿಮೀ ಸಂಚಾರವನ್ನು ಹೊಂದಿರುತ್ತದೆ”ಎಂದು ನಿಗಮ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...