ನಮ್ಮ ಮೆಟ್ರೋ | 100 ದಿನದಲ್ಲಿ 718 ಮೀಟರ್ ಸುರಂಗ ಕೊರೆದು ಹೊರಬಂದ ‘ಟಿಬಿಎಂ ರುದ್ರ’

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮದ್ದಾಗಿ ಕಾರ್ಯ ನಿರ್ವಹಿಸುತ್ತಿದೆ. ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ಭಾಗವಾಗಿ ಇದೀಗ 718 ಮೀಟರ್ ಸುರಂಗ ಮಾರ್ಗ ಕೊರೆದು ರುದ್ರ ಹೆಸರಿನ ಸುರಂಗ ಕೊರೆಯುವ ಯಂತ್ರ ಯಶಸ್ವಿಯಾಗಿ ಹೊರಬಂದಿದೆ.

- Advertisement -

ನಮ್ಮ ಮೆಟ್ರೋ ಎರಡನೇ ಹಂತದ ಕಾಮಗಾರಿ ನಡೆಯುತ್ತಿದೆ. ರುದ್ರ ಎಂಬ ಹೆಸರಿನ ಟಿಬಿಎಂ ಲಕ್ಕಸಂದ್ರ ನಿಲ್ದಾಣದಿಂದ ಜು.14 ರಂದು ಸುರಂಗ ಕೊರೆಯುವ ಕಾಮಗಾರಿ ಆರಂಭಿಸಿತ್ತು. ಲಕ್ಕಸಂದ್ರ ನಿಲ್ದಾಣದಿಂದ ಲ್ಯಾಂಗ್‌ಫೋರ್ಡ್‌ಟೌನ್ ನಿಲ್ದಾಣದವರೆಗೆ ಬರೋಬ್ಬರಿ 718 ಮೀಟರ್ ಸುರಂಗ ಕೊರೆದು ಯಶಸ್ವಿಯಾಗಿ ಅ.26 ರಂದು ಹೊರಬಂದಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರುದ್ರ ಟಿಬಿಎಂ ಬರೋಬ್ಬರಿ 100 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಸಂಪೂರ್ಣವಾಗಿ ಸುರಂಗ ಕೊರೆದು ಹೊರಬಂದಿದೆ. ಲಕ್ಕಸಂದ್ರದಿಂದ ಲ್ಯಾಂಗ್ ಫೋರ್ಡ್ ವರೆಗೆ ಎರಡನೇ ಹಂತದ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ನಡೆಯುತ್ತಿದೆ. ಎರಡನೇ ಹಂತದ ಕಾಮಗಾರಿಯಲ್ಲಿ ಇದು ಏಳನೇ ಟಿಬಿಎಂ ಕಾರ್ಯಾಚರಣೆಯಾಗಿದೆ ಎಂದು ಮಾಹಿತಿ ನೀಡಿದೆ.

ವಮಿಕಾ ಹೆಸರಿನ ಸುರಂಗ ಕೊರೆಯುವ ಯಂತ್ರ ಕಳೆದ ತಿಂಗಳು ಆಗಸ್ಟ್‌ನಲ್ಲಿ ಕಾಳೇನ ಅಗ್ರಹಾರ–ನಾಗವಾರ ಗುಲಾಬಿ ಮಾರ್ಗದಲ್ಲಿ 721 ಮೀಟರ್‌ ಮೆಟ್ರೋ ಸುರಂಗ ಕೊರೆದು ಹೊರ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈಡ್ ಕ್ಯಾನ್ಸಲ್ ಆಗದ ರ‍್ಯಾಪಿಡೋದಿಂದ ‘ಆಟೋ ಪ್ಲಸ್’ ಹೊಸ ಸೇವೆ ಆರಂಭ

ಈ ಹಿಂದೆ ಟಿಬಿಎಂ ಯಂತ್ರವು ಸೌತ್ ರ‍್ಯಾಂಪ್ ಮತ್ತು ಡೈರಿ ಸರ್ಕಲ್ ನಿಲ್ದಾಣದ ಮಧ್ಯೆ ಒಟ್ಟು 613.2 ಮೀಟರ್ ಸುರಂಗ ಕೊರೆದಿತ್ತು. ನಂತರ ಡೇರಿ ವೃತ್ತದ ನಿಲ್ದಾಣದಿಂದ ಲಕ್ಕಸಂದ್ರ ಮೆಟ್ರೋ ನಿಲ್ದಾಣದ ಮಧ್ಯದವರೆಗಿನ 746.2 ಮೀಟರ್‌ ಉದ್ದದ ಸುರಂಗ ಕೊರೆದು ಟಿಬಿಎಂ ಯಶಸ್ವಿಯಾಗಿ ಹೊರಬಂದಿತ್ತು ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...