ಬೆಂಗಳೂರು ನಗರದಲ್ಲಿ ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ರಾಜಕಾಲುವೆಗಳು ತುಂಬಿ ಹರಿದ ಪರಿಣಾಮ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಈ ಸಂದರ್ಭದಲ್ಲಿ ಕಿಚಾಯಿಸಿದ್ದಾರೆ.
“ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಕನ್ನಡಿಗರಿಗೆ ಬೀಚ್ ಬೆಂಗಳೂರು ನೀಡಿರುವ ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ತಮ್ಮ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹಾಲು ಒಕ್ಕೂಟ ಚುನಾವಣೆ ಉಸಾಬರಿ ಮುಗಿದಿದ್ದರೆ ದಯವಿಟ್ಟು ಸ್ವಲ್ಪ ಬೆಂಗಳೂರಿನ ಅವಸ್ಥೆ ಕಡೆ ಗಮನ ಹರಿಸಿ” ಎಂದು ಅಶೋಕ್ ಲೇವಡಿ ಮಾಡಿದ್ದಾರೆ.
ಮಳೆಯಿಂದಾಗಿ ಶಾಂತಿನಗರದಲ್ಲಿರುವ ಸಿಸಿಬಿ ಕಚೇರಿಗೂ ನೀರು ನುಗ್ಗಿದೆ. ಕಚೇರಿಯ ಕೆಳ ಮಹಡಿಯಲ್ಲಿ ಮಂಡಿ ಆಳದಷ್ಟು ನೀರು ನಿಂತಿದ್ದು, ಬೆಳಗ್ಗೆಯವರೆಗೂ ನೀರಿನ ಮಟ್ಟ ಕಡಿಮೆಯಾಗಿಲ್ಲ. ನೀರು ನುಗ್ಗಿರುವುದರಿಂದ ಕೆಲ ಕಡತಗಳು ಹಾನಿಗೊಳಗಾಗಿವೆ ಎನ್ನಲಾಗುತ್ತಿದ್ದು, ತನಿಖಾ ಕಾರ್ಯಾಚರಣೆಗೆ ತೊಂದರೆಯಾಗಿದೆ.
ಚಾಮರಾಜಪೇಟೆಯಲ್ಲಿ ಸಿಸಿಬಿ ಕಚೇರಿಯ ಹಳೆ ಕಟ್ಟದ ಶಿಥಿಲಾವಸ್ಥೆ ತಲುಪಿದ್ದರಿಂದ ಶಾಂತಿನಗರದಲ್ಲಿರುವ ಕಟ್ಟಡಕ್ಕೆ ಕಚೇರಿಯನ್ನು ಸ್ಥಳಾಂತರಿಸಲಾಗಿತ್ತು. ಲಕ್ಷಾಂತರ ರೂಪಾಯಿ ಬಾಡಿಗೆ ನೀಡಿದರೂ ಸಹ ಮಳೆ ಸಂದರ್ಭದಲ್ಲಿ ಸೂಕ್ತ ನಿರ್ವಹಣೆ ಸೌಲಭ್ಯವಿರದಿರುವುದು ಕಚೇರಿ ಸಿಬ್ಬಂದಿಗೆ ಸಂಕಷ್ಟ ತಂದೊಡ್ಡಿದೆ.
ಮಳೆಯಿಂದ ವಸತಿ ಪ್ರದೇಶಗಳಲ್ಲಿ ಹೆಚ್ಚಿನ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೊರಮಾವು ಸುತ್ತಮುತ್ತ ಧಾರಾಕಾರ ವರ್ಷಧಾರೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.
What @INCKarnataka promised: Brand Bengaluru
— R. Ashoka (@RAshokaBJP) May 19, 2025
What @INCKarnataka delivered:
Beach Bengaluru
Part-time Bengaluru Development Minister DCM @DKShivakumar avare, if you are done with your brother @DKSureshINC's Milk Union Elections, kindly give some time to Bengaluru.
ಬ್ರ್ಯಾಂಡ್… pic.twitter.com/V8PQoEPrbn