ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿಗಳೇ ರಾಜಧಾನಿ ಅವಸ್ಥೆ ಕಡೆ ಗಮನ ಹರಿಸಿ: ಆರ್‌ ಅಶೋಕ್

Date:

ಬೆಂಗಳೂರು ನಗರದಲ್ಲಿ ಭಾನುವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದ ರಾಜಕಾಲುವೆಗಳು ತುಂಬಿ ಹರಿದ ಪರಿಣಾಮ ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಈ ಸಂದರ್ಭದಲ್ಲಿ ಕಿಚಾಯಿಸಿದ್ದಾರೆ.

- Advertisement -

“ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಕನ್ನಡಿಗರಿಗೆ ಬೀಚ್ ಬೆಂಗಳೂರು ನೀಡಿರುವ ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ತಮ್ಮ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹಾಲು ಒಕ್ಕೂಟ ಚುನಾವಣೆ ಉಸಾಬರಿ ಮುಗಿದಿದ್ದರೆ ದಯವಿಟ್ಟು ಸ್ವಲ್ಪ ಬೆಂಗಳೂರಿನ ಅವಸ್ಥೆ ಕಡೆ ಗಮನ ಹರಿಸಿ” ಎಂದು ಅಶೋಕ್‌ ಲೇವಡಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಮಳೆಯಿಂದಾಗಿ ಶಾಂತಿನಗರದಲ್ಲಿರುವ ಸಿಸಿಬಿ ಕಚೇರಿಗೂ ನೀರು ನುಗ್ಗಿದೆ. ಕಚೇರಿಯ ಕೆಳ ಮಹಡಿಯಲ್ಲಿ ಮಂಡಿ ಆಳದಷ್ಟು ನೀರು ನಿಂತಿದ್ದು, ಬೆಳಗ್ಗೆಯವರೆಗೂ ನೀರಿನ ಮಟ್ಟ ಕಡಿಮೆಯಾಗಿಲ್ಲ. ನೀರು ನುಗ್ಗಿರುವುದರಿಂದ ಕೆಲ ಕಡತಗಳು ಹಾನಿಗೊಳಗಾಗಿವೆ ಎನ್ನಲಾಗುತ್ತಿದ್ದು, ತನಿಖಾ ಕಾರ್ಯಾಚರಣೆಗೆ ತೊಂದರೆಯಾಗಿದೆ.

ಚಾಮರಾಜಪೇಟೆಯಲ್ಲಿ ಸಿಸಿಬಿ ಕಚೇರಿಯ ಹಳೆ ಕಟ್ಟದ ಶಿಥಿಲಾವಸ್ಥೆ ತಲುಪಿದ್ದರಿಂದ ಶಾಂತಿನಗರದಲ್ಲಿರುವ ಕಟ್ಟಡಕ್ಕೆ ಕಚೇರಿಯನ್ನು ಸ್ಥಳಾಂತರಿಸಲಾಗಿತ್ತು. ಲಕ್ಷಾಂತರ ರೂಪಾಯಿ ಬಾಡಿಗೆ ನೀಡಿದರೂ ಸಹ ಮಳೆ ಸಂದರ್ಭದಲ್ಲಿ ಸೂಕ್ತ ನಿರ್ವಹಣೆ ಸೌಲಭ್ಯವಿರದಿರುವುದು ಕಚೇರಿ ಸಿಬ್ಬಂದಿಗೆ ಸಂಕಷ್ಟ ತಂದೊಡ್ಡಿದೆ.

ಮಳೆಯಿಂದ ವಸತಿ ಪ್ರದೇಶಗಳಲ್ಲಿ ಹೆಚ್ಚಿನ ನೀರು ನುಗ್ಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹೊರಮಾವು ಸುತ್ತಮುತ್ತ ಧಾರಾಕಾರ ವರ್ಷಧಾರೆಯಿಂದ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಪರದಾಡುವಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...