ವಾಹನ ತೊಳೆಯುವವರ ವಿರುದ್ಧ ಜಲಮಂಡಳಿ ಬಿಸಿ, 12 ಪ್ರಕರಣ ದಾಖಲು, ₹5.60 ಲಕ್ಷ ದಂಡ ವಸೂಲಿ

Date:

ಬೆಂಗಳೂರು ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ಜಲಮಂಡಳಿ ನಿಷೇಧಿಸಿದ್ದು ನಿಯಮ ಉಲ್ಲಂಘಿಸಿದವರಿಗೆ 5 ಸಾವಿರ ದಂಡ ವಿಧಿಸುತ್ತಿದೆ. ಜಲಮಂಡಳಿ ಸಿಬ್ಬಂದಿ ಕಳೆದ 7 ದಿನಗಳಲ್ಲಿ ಕುಡಿಯುವ ನೀರನ್ನು ಪೋಲು ಮಾಡಿದವರ ವಿರುದ್ಧ ತಪಾಸಣೆ ನಡೆಸಿ ದೂರುಗಳನ್ನು ದಾಖಲಿಸಿದ್ದು, ದಂಡ ವಸೂಲಿ ಮಾಡಿ ಕ್ರಮ ಕೈಗೊಂಡಿರುವ ಬಗ್ಗೆ ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾದ್ ಮನೋಹರ್‌ ಮಾಹಿತಿ ನೀಡಿದ್ದಾರೆ.

- Advertisement -

ಕುಡಿಯುವ ನೀರನ್ನು ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ‘ದಂಡ’ದ ಅಭಿಯಾನ ನಡೆಸುತ್ತಿರುವ ಜಲಮಂಡಳಿಗೆ ಒಂದು ವಾರದಲ್ಲಿ 112 ಪ್ರಕರಣಗಳನ್ನು ದಾಖಲಾಗಿದ್ದು, ₹5.60 ಲಕ್ಷ ದಂಡ ವಸೂಲಿಯಾಗಿದೆ. ಫೆ.23ರವರೆಗೆ 112 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಇದರಲ್ಲಿ ದಕ್ಷಿಣ ವಲಯದಲ್ಲಿ ಹೆಚ್ಚು ಪ್ರಕರಣಗಳು (33) ದಾಖಲಾಗಿವೆ. ಉತ್ತರ ವಲಯದಲ್ಲಿ 23, ಪಶ್ಚಿಮ ವಲಯದಲ್ಲಿ 28, ಪೂರ್ವ ವಲಯದಲ್ಲಿ 28 ಪ್ರಕರಣಗಳು ದಾಖಲಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬೇಸಿಗೆ ಅವಧಿಯಲ್ಲಿ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಐಐಎಸ್‌ಸಿ ವಿಜ್ಞಾನಿಗಳು ವರದಿ ಸಲ್ಲಿಸಿದ್ದು, ಬೆಂಗಳೂರು ನಗರದಲ್ಲಿ ಕುಡಿಯುವ ನೀರನ್ನು ವಾಹನಗಳ ಸ್ವಚ್ಚತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲ್‌ಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಬಳಸಲು ಬೆಂಗಳೂರು ನೀರುಸರಬರಾಜು ಮತ್ತು ಒಳಚರಂಡಿಕಾಯ್ದೆ-1964ರ ಕಲಂ 33 ಮತ್ತು 34ರ ಅನುಸಾರ ನೀಷೇಧಿಸಲಾಗಿದೆ.

ಈ ನಿಷೇಧ ಆದೇಶವನ್ನು ಉಲ್ಲಂಘನೆ ಮಾಡಿದಲ್ಲಿ, ಉಲ್ಲಂಘನೆ ಮಾಡುವವರ ವಿರುದ್ದ ಜಲಮಂಡಳಿಯ ಕಾಯ್ದೆ 1964 ರ ಕಲಂ 109 ರಂತೆ ₹5 ಸಾವಿರ ದಂಡ ವಿಧಿಸಲಾಗುವುದು. ಮರುಕಳಿಸಿದಲ್ಲಿ ದಂಡದ ಮೊತ್ತ ₹5 ಸಾವಿರ ಜತೆಗೆ ಹೆಚ್ಚುವರಿಯಾಗಿ ₹500 ಪ್ರತಿ ದಿನದಂತೆ ದಂಡ ಹಾಕಲಾಗುವುದು ಎಂದು ತಿಳಿಸಲಾಗಿದೆ.

ನಗರದ ಕೆಲವು ವಾರ್ಡ್‌ಗಳಲ್ಲಿ ಅಂತರ್ಜಲದ ಮಟ್ಟ ಕುಸಿಯಬಹುದು ಎಂದು ಐಐಎಸ್‌ಸಿ ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಈ ಕಾರಣದಿಂದ ಇಂಥ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾರ್ವಜನಿಕರು ಕುಡಿಯುವ ನೀರನ್ನು ಅನಗತ್ಯ ಪೋಲು ಮಾಡುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ‘ದಂಡ ಅಭಿಯಾನ’ವನ್ನು ಇನ್ನಷ್ಟು ವ್ಯಾಪಕಗೊಳಿಸಲಾಗುವುದು’ ಎಂದು ಜಲಮಂಡಳಿ ಎಚ್ಚರಿಸಿದೆ.

ಬೆಂಗಳೂರು ಮಹಾನಗರಕ್ಕೆ ಸುಮಾರು 100 ಕಿಲೋಮೀಟರ್‌ಗಳ ದೂರದಿಂದ ಕುಡಿಯುವ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಅಂತರ್ಜಲ ಕುಸಿತದಿಂದ ನೀರಿನ ಕೊರತೆ ಹೆಚ್ಚಾಗಬಹುದು ಎನ್ನುವ ಎಚ್ಚರಿಕೆಯಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಅಮೂಲ್ಯವಾಗಿರುವ ಶುದ್ಧ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಮಾಡುವುದನ್ನು ನಿಲ್ಲಿಸಬೇಕು. ಈ ಮೂಲಕ ಅಗತ್ಯವಿರುವ ಜನರಿಗೆ ಹಾಗೂ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಜಲ ಮಂಡಳಿಯ ಜೊತೆ ಕೈಜೋಡಿಸಬೇಕು ಎಂದು ಬಿಡಬ್ಲ್ಯುಎಸ್ಎಸ್​ಬಿ ಮನವಿ ಮಾಡಿದೆ.

ಸಾರ್ವಜನಿಕರಿಗೆ ಮಂಡಳಿ ನೀಡಿದ ಆದೇಶಗಳನ್ನು ಯಾರಾದರೂ ಉಲ್ಲಂಘನೆ ಮಾಡುವುದು ಕಂಡುಬಂದರೆ, ಕೂಡಲೇ ಮಂಡಳಿಯ ಕಾಲ್ ಸೆಂಟರ್ ಸಂಖ್ಯೆ 1916 ಗೆ ತಿಳಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಚಿಕ್ಕಮಗಳೂರು | ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆ ಟಿಪ್ಪಣಿ ಸಹಜ: ನ್ಯಾಯಕ್ಕಾಗಿ ಹೋರಾಡಬೇಕು; ಕೋಟ ಶ್ರೀನಿವಾಸ್ ಪೂಜಾರಿ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...