ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

Date:

ಸಾಲು ಸಾಲು ರಜೆಗಳನ್ನು ಮುಗಿಸಿ ರಾಜಧಾನಿ ಬೆಂಗಳೂರಿಗೆ ವಲಸೆ ಕಾರ್ಮಿಕರು ಮರಳಿ ಬರುತ್ತಿದ್ದು, ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

- Advertisement -

ಸಾಲು ಸಾಲು ರಜೆಗಳ ಬಳಿಕ ತಮ್ಮ ಊರುಗಳಿಂದ ಜನರು ವಾಪಸಾಗುತ್ತಿದ್ದಾರೆ. ಹಾಗಾಗಿ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಡಬಲ್ ರೋಡ್, ಕೆ.ಆರ್‌.ಸರ್ಕಲ್, ಕಬ್ಬನ್ ಪಾರ್ಕ್​ ಬಳಿ ಟ್ರಾಫಿಕ್​ ಜಾಮ್ ಉಂಟಾಗಿದೆ. ಈ ಮಧ್ಯೆ, ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾದ ಹಿನ್ನೆಲೆ, ಜನರು ಹೈರಾಣಾಗಿದ್ದಾರೆ. ಊರಿಂದ ವಾಪಾಸ್ ಆದ ಜನರು, ನೌಕರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಬಿಎಂಟಿಸಿ ಬಸ್‌, ಆಟೋ, ಓಲಾ, ಉಬರ್ ಮೊರೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಸದ್ಯ ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ವಾಹನ ಸವಾರರು ಬೇಸರ ವ್ಯಕ್ತಪಡಿಸಿದ್ದಾರೆ. ಗಂಟೆಗಟ್ಟಲೇ ಟ್ರಾಫಿಕ್‌ನಲ್ಲಿ ಸಿಲುಕುವುದರಿಂದ ಶಾಲಾ ಮಕ್ಕಳು ನಿಗದಿತ ಸಮಯಕ್ಕೆ ಶಾಲೆಗೆ ತೆರಳಲು ಸಾಧ್ಯವಾಗುತ್ತಿಲ್ಲ. ಅಲ್ಲದೇ, ಮನೆಗೆ ಸೇರುವುದು ರಾತ್ರಿಯಾಗುತ್ತಿದೆ. ಇನ್ನು ಸುಸ್ತಾಗಿ ಕೆಲಸ ಮುಗಿಸಿ ಮನೆ ಸೇರೋಣ ಎನ್ನುವ ನೌಕರರು ಟ್ರಾಫಿಕ್‌ನಲ್ಲಿಯೇ ಹೆಚ್ಚು ಸಮಯ ಕಳೆಯುವಂತಹ ಪರಿಸ್ಥಿತಿ ಎದುರಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಕಳೆದ ನಾಲ್ಕು ದಿನಗಳ ಹಿಂದೆ ರಾಜಧಾನಿ ಬೆಂಗಳೂರಿನ ಹೊರ ವರ್ತುಲ ರಸ್ತೆಯಲ್ಲಿ 3 ಗಂಟೆಗೂ ಹೆಚ್ಚು ಕಾಲ ವಾಹನ ಸವಾರರು ಟ್ರಾಫಿಕ್‌ನಲ್ಲಿ ಸಿಲುಕಿದ್ದರು. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...