ಪೆರಿಫೆರಲ್ ರಿಂಗ್ ರೋಡ್ | 2014ರ ಕಾಯ್ದೆ ಪ್ರಕಾರ ಪರಿಹಾರ ನೀಡಿ, ಇಲ್ಲ ಯೋಜನೆ ಕೈಬಿಡಿ ಎಂದ ರೈತರು

Date:

18 ವರ್ಷಗಳ ಹಿಂದೆ ಪೆರಿಫೆರಲ್ ರಿಂಗ್ ರೋಡ್ (ಪಿಆರ್‌ಆರ್) ಯೋಜನೆಗೆ ಸ್ವಾಧೀನ ಮಾಡಿಕೊಳ್ಳಲಾಗಿದ್ದ ಭೂಮಿಗೆ 2014ರ ಕಾಯ್ದೆ ಪ್ರಕಾರ ಪರಿಹಾರ ನೀಡಬೇಕೆಂದು ಭೂಮಿ ಕಳೆದುಕೊಂಡಿರುವ ರೈತರು ಒತ್ತಾಯಿಸಿದ್ದಾರೆ. ಪರಿಹಾರ ಕೊಡಲು ಸಾಧ್ಯವಾಗದಿದ್ದರೆ ಯೋಜನೆಯನ್ನೇ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

- Advertisement -

74 ಕಿಲೋಮೀಟರ್ ರಸ್ತೆ ಕಾಮಗಾರಿ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆ, ಸೋಮವಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕಚೇರಿ ಎದುರು ಪಿಆರ್‌ಆರ್ ರೈತ ಹಾಗೂ ನಿವೇಶನದಾರರ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“2006ರಲ್ಲಿ ಬಿಡಿಎ 1,818 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು. ಒಂದು ವರ್ಷದ ಬಳಿಕ ಅಂತಿಮ ಅಧಿಸೂಚನೆ ಬಂದಿತ್ತು. ಕಳೆದ 18 ವರ್ಷಗಳಿಂದ, ಭೂಮಿ ಕಳೆದುಕೊಂಡವರಿಗೆ ಪರಿಹಾರ ನೀಡಲು ಹಣದ ಕೊರತೆಯಿಂದಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಔಪಚಾರಿಕ ಕ್ರಮಗಳನ್ನು ಬಿಡಿಎ ಮುಂದುವರಿಸಿಲ್ಲ” ಎಂದು ರೈತ ಹೋರಾಟಗಾರರು ತಿಳಿಸಿದ್ದಾರೆ.

“2022ರಲ್ಲಿ, ಪಿಆರ್‌ಆರ್‌ ಅನ್ನು ನೈಸ್‌ ರಸ್ತೆಯೊಂದಿಗೆ ತಳಕು ಹಾಕಲು ಮತ್ತು ಟೋಲ್ ಪ್ಲಾಜಾಗಳನ್ನು ನಿರ್ಮಿಸಲು 750 ಎಕರೆ ಹೆಚ್ಚುವರಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಿಡಿಎ ಪ್ರಾಥಮಿಕ ಅಧಿಸೂಚನೆಯನ್ನು ಹೊರಡಿಸಿತು. ಅಧಿಸೂಚಿತ ಭೂಮಿಯಲ್ಲಿ ಸ್ವಾಧೀನ ವಿಳಂಬದಿಂದ ಸಾವಿರಾರು ಮನೆಗಳು ಮತ್ತು ಬಡಾವಣೆಗಳು ತಲೆ ಎತ್ತಿವೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮುಂದಿನ ಐದು ದಿನ ಸಾಧಾರಣ ಮಳೆ ಸಾಧ್ಯತೆ : ಹವಾಮಾನ ಇಲಾಖೆ

“ಅಧಿಸೂಚಿತ ಭೂಮಿ ಆರು ಕೆರೆ ಮತ್ತು ಪೆಟ್ರೋನೆಟ್ ಗ್ಯಾಸ್ ಪೈಪ್‌ಲೈನ್ ಮೂಲಕ ಹಾದುಹೋಗುತ್ತದೆ. ಅಧಿಸೂಚಿತ ಪ್ರದೇಶದಲ್ಲಿ ಒಂದು ಎಕರೆ ಜಮೀನಿನ ಮಾರುಕಟ್ಟೆ ದರವು 10 ರಿಂದ 14 ಕೋಟಿ ರೂಪಾಯಿ ಇದೆ” ಎಂದು ರೈತರೊಬ್ಬರು ಹೇಳಿದರು.

ಹಳೆಯ ಕಾಯಿದೆಯಂತೆ ಪರಿಹಾರ ನೀಡಲು ಸರ್ಕಾರಕ್ಕೆ ಹಣವಿಲ್ಲದಿದ್ದರೆ ಪಿಆರ್‌ಆರ್ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...