ಬೆಂಗಳೂರು | ಪರಶುರಾಮ ಥೀಮ್ ಪಾರ್ಕ್ ವಿರುದ್ಧ ಮುತಾಲಿಕ್ ಸಲ್ಲಿಸಿದ್ದ ಅರ್ಜಿ ವಜಾ

Date:

ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಎರ್ಲಪಾಡಿ ಬಳಿಯ ಗೋಮಾಳದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ಯೋಜನೆ ಕೈಬಿಡಬೇಕು. ಯೋಜನೆಯಲ್ಲಿನ ಅಕ್ರಮಗಳ ತನಿಖೆಗೆ ಸಮಿತಿ ರಚನೆ ಮಾಡಬೇಕು ಎಂದು ಕೋರಿ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

ಮುತಾಲಿಕ್ ಹಾಗೂ ಮತ್ತಿತರರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, “ಅರ್ಜಿಯಲ್ಲಿನ ಎಲ್ಲ ಅಂಶಗಳು ಅರ್ಜಿದಾರರ ಊಹೆಯಂತಿವೆ. ಇದೊಂದು ಸಾರಾಸಗಟಾಗಿ ತಳ್ಳಿಹಾಕುವಂತಹ ಅರ್ಜಿ” ಎಂದು ಅಭಿಪ್ರಾಯಪಟ್ಟಿದೆ.

“ಗೋವುಗಳನ್ನು ಸಾಕದವರು, ಗೋಮಾಳ ರಕ್ಷಣೆ ಮಾಡುವಂತೆ ಕೋರಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವೇ ಇಲ್ಲ. ಅರ್ಜಿದಾರರು ಗೋವುಗಳನ್ನು ಸಾಕಿದ್ದಾರೆಯೇ” ಎಂದು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅರ್ಜಿದಾರರನ್ನು ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಎರ್ಲಪಾಡಿಯ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣವಾಗುತ್ತಿದೆ. ಪಾರ್ಕ್ ನಿರ್ಮಾಣಕ್ಕೆ ನಿಗದಿಪಡಿಸಿರುವ ಎರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೇ ಸಂಖ್ಯೆ 329/1ರ 1.58 ಎಕರೆ ಭೂಮಿ ಗೋಮಾಳ. ಪರುಶುರಾಮನ ಪ್ರತಿಮೆಗೆ ಕಳಪೆ ಗುಣಮಟ್ಟದ ತಾಮ್ರವನ್ನು ಬಳಸಲಾಗಿದೆ. ಮೂರ್ತಿಯ ತಲೆ, ಕೈ, ಕಾಲುಗಳು ಹಾಗೂ ಕೈ ಕತ್ತಿಯನ್ನು ಪ್ರತ್ಯೇಕವಾಗಿ ತಂದು ಕೆಟ್ಟರೀತಿಯಲ್ಲಿ ಜೋಡಿಸಲಾಗಿದೆ. ಇಲ್ಲಿ ನಡೆಯುತ್ತಿರುವುದು ಅಕ್ರಮ ಕಾಮಗಾರಿ ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮಕ್ಕೆ ಮುಂದಾಗಿರಲಿಲ್ಲ. ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವುದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಬೇಕು ಎಂದು ಮುತಾಲಿಕ್ ಅರ್ಜಿಯಲ್ಲಿ ಕೋರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುದುರೆಗೆ ಮಾರಣಾಂತಿಕ ಗ್ಲಾಂಡರ್ಸ್ ರೋಗ ದೃಢ; ಡಿ.ಜೆ.ಹಳ್ಳಿ `ರೋಗಪೀಡಿತ ವಲಯ’

ಅಕಾಲಿಕ ಮಳೆಯಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಅಲ್ಲದೇ,...

ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲು ಖಚಿತ, ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್...

ತಾಪಮಾನ ಹೆಚ್ಚಳ | ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ ಪಡೆದ ರಾಜ್ಯದ ವಕೀಲರು

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ...

ಕನ್ನಡ ಸೇವೆ ಮಾಡಿದ ಅಪರೂಪದ ನಟ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ ಬಣ್ಣನೆ

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...