ಸ್ಯಾಂಕಿ ಕೆರೆಯಲ್ಲಿ ಹಮ್ಮಿಕೊಳ್ಳುವ ‘ಕಾವೇರಿ ಆರತಿ’ ಕಾರ್ಯಕ್ರಮ ನಿಲ್ಲಿಸಲು ಹೈಕೋರ್ಟ್‌ಗೆ ಅರ್ಜಿ

Date:

ಬೆಂಗಳೂರಿನ ಮಲ್ಲೇಶ್ವರದ ಬಳಿಯಿರುವ ಸ್ಯಾಂಕಿ ಕೆರೆಯಲ್ಲಿ ಮಾರ್ಚ್‌ 21ರಂದು ರಾತ್ರಿ ಹಮ್ಮಿಕೊಳ್ಳಲಾಗುವ ‘ಕಾವೇರಿ ಆರತಿ’ ಕಾರ್ಯಕ್ರಮನ್ನು ನಿಲ್ಲಿಸುವಂತೆ ಅರ್ಜಿದಾರರೊಬ್ಬರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಸ್ಯಾಂಕಿ ಕೆರೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳುವುದರಿಂದ ಪಕ್ಷಿಗಳ ಬದುಕಿಗೆ ಮಾರಕವಾಗುತ್ತದೆ ಹಾಗೂ ಕೆರೆಯು ಬಫರ್‌ ವಲಯದಲ್ಲಿರುವ ಕಾರಣ ತಾತ್ಕಾಲಿಕ ಹಾಗೂ ಶಾಶ್ವತ ರಚನೆಗಳನ್ನು ನಿರ್ಮಿಸುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಂಗಳವಾರ (ಮಾ.18) ತುರ್ತಾಗಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಂ ಐ ಅರುಣ್‌ ಅವರ ವಿಭಾಗೀಯ ಪೀಠ ಮಧ್ಯಂತರ ಅರ್ಜಿಯನ್ನು ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರನ್ನು ಕೇಳಿದ್ದು, ಹೀಗಾಗಿ ಪೀಠವು ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ ಅರ್ಜಿದಾರ ಗೀತಾ ಮಿಶ್ರಾ ಅವರ ಪರವಾಗಿ ವಕೀಲರಾದ ಜಿ ಆರ್‌ ಮೋಹನ್‌ ಅವರು ಹಾಜರಾಗಿ ಕೆರೆಯ ಒಳಗಡೆ ಹಮ್ಮಿಕೊಳ್ಳುವ ಕಾವೇರಿ ಆರತಿ ಕಾರ್ಯಕ್ರಮವು 2019ರ ಜಲ ಸಂಪನ್ಮೂಲಗಳ ಸಂರಕ್ಷಣೆ ಕಾಯ್ದೆಯನ್ನು ಉಲ್ಲಂಘಿಸಲಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ ಕೈಯಲ್ಲಿ ಶಿಕ್ಷಣ, ಖರ್ಗೆಯವರ ಸಿಟ್ಟು ಮತ್ತು ಬಡವರ ಮಕ್ಕಳು

ತಾತ್ಕಾಲಿಕ ಕಟ್ಟಡಗಳನ್ನು ನಿರ್ಮಿಸುವುದು ಬಫರ್‌ ವಲಯದ ಕಾನೂನಿಗೆ ವಿರುದ್ಧವಾಗಿದೆ ಹಾಗೂ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಕೆರೆಯಲ್ಲಿನ ಹಕ್ಕಿಗಳ ರಾತ್ರಿ ಜೀವನಕ್ಕೆ ಮಾರಕವಾಗಲಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಕಾರ್ಯಕ್ರಮವು ಕರ್ನಾಟಕ ಕೆರೆ ಸಂರಕ್ಷಣಾ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಲಿದೆ. ಮನರಂಜನಾ ಚಟುವಟಿಕೆಗಳನ್ನು ಯೋಜಿಸಿ ಜಾಹೀರಾತು ನೀಡುವುದರಿಂದ ಸ್ಯಾಂಕಿ ಕೆರೆಯಲ್ಲಿ ವಾಸಿಸುವ ಪಕ್ಷಿಗಳಿಗೆ ಅಪಾರ ತೊಂದರೆಯಾಗುತ್ತದೆ. ಬಫರ್ ವಲಯದೊಳಗಿನ ಚಟುವಟಿಕೆಗಳನ್ನು ನಿಲ್ಲಿಸಲು ಬಿಡಬ್ಲ್ಯೂಎಸ್ಎಸ್‌ಬಿ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದಾರೆ.

ಮಾರ್ಚ್‌ 21ರಂದು ಕಾವೇರಿ ನದಿಗೆ ಗೌರವ ಸಲ್ಲಿಸುವ ಕ್ರಮವಾಗಿ ಸ್ಯಾಂಕಿ ಟ್ಯಾಂಕ್‌ ಕೆರೆಯಲ್ಲಿ ಪೂಜೆಗೆ ಪೂರ್ವ ತಯಾರಿ ನಡೆದಿದೆ. ಅದಲ್ಲದೆ ಈ ಕಾರ್ಯಕ್ರಮವೂ ಗಿನ್ನಿಸ್‌ ದಾಖಲೆ ಮಾಡುವ ನಿಟ್ಟಿನಲ್ಲಿ ಜಲಮಂಡಲಿ ಎಲ್ಲ ಸಿದ್ಧತೆ ಮಾಡಿಕೊಳ್ಳಲು ಮುಂದಾಗಿದೆ. ಕಾವೇರಿ ಆರತಿ ಮಾಡುವ ಬಗ್ಗೆ ಇತ್ತೀಚೆಗೆ ವಾರಾಣಸಿಗೆ ತೆರಳಿ ಸಚಿವ ಚಲುವರಾಯಸ್ವಾಮಿ ತಂಡ ಅಧ್ಯಯನ ಮಾಡಿದ್ದರು. ಈ ವಿಶೇಷ ಸಂಭ್ರಮಕ್ಕೆ ಉತ್ತರ ಪ್ರದೇಶದಿಂದ ವಿಮಾನದಲ್ಲಿ ಪುರೋಹಿತರನ್ನು ಕರೆತರಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಜಲಮಂಡಲಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತವರ ಕುಟುಂಬ ಸೇರಿ ಹತ್ತು ಸಾವಿರ ಜನರು ಭಾಗಿಯಾಗುವ ನಿರೀಕ್ಷೆಯಿದೆ.

ಕಾವೇರಿ ಆರತಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆ ಇದೆ. ಆರತಿ ಬೆಳಗುವ ದೃಶ್ಯಾವಳಿಗಳನ್ನು ಎಲ್‌ಇಡಿ ಟಿವಿಗಳಲ್ಲಿ ವೀಕ್ಷಿಸುವ ಅವಕಾಶ ಇರಲಿದೆ. ಜೊತೆಗೆ ಕೆರೆಯ ಸುತ್ತಮುತ್ತ ಲೈಟಿಂಗ್ಸ್‌ ವ್ಯವಸ್ಥೆ, ಲೈವ್‌ ಆರ್ಕೆಸ್ಟ್ರಾ ಇರಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮಾಹಿತಿ ನೀಡಿದ್ದರು.

ಸ್ಯಾಂಕಿ ಕೆರೆ ಬೆಂಗಳೂರಿನಲ್ಲಿ ಅತಿ ಸ್ವಚ್ಛವಾಗಿರುವಂತದ್ದು, ಇಲ್ಲಿ ಜನರು ಸೇರುವುದಕ್ಕೂ ಸೂಕ್ತ ವ್ಯವಸ್ಥೆ ಇರುವ ಕಾರಣ ಇದೆ ಪ್ರದೇಶ ಆಯ್ಕೆ ಮಾಡಿಕೊಂಡೆವು. ಗಾಳಿ ಆಂಜನೇಯ ದೇವಸ್ಥಾನ, ಸಹ ಪಟ್ಟಿಯಲ್ಲಿತ್ತು. ಆದರೆ, ದೇಗುಲದ ಸಮೀಪ ಚರಂಡಿ ಇದ್ದ ಕಾರಣ ಕೈಬಿಡಲಾಯಿತು. ಆದರೆ, ಸ್ಯಾಂಕಿ ಕೆರೆಯಲ್ಲೇ ಕಾವೇರಿ ಆರತಿ ಮಾಡಲು ಕಾರಣವೆಂದರೆ, ಕಾವೇರಿಯ ಉಪನದಿ ವೃಷಭಾವತಿ, ಅದರ ಉಗಮ ಸ್ಥಾನ ಸ್ಯಾಂಕಿ ಕೆರೆ ಹಿನ್ನೆಲೆ, ಇಲ್ಲಿಯೆ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಯಿತು. ಸ್ಯಾಂಕಿ ಕೆರೆ ಸಮೀಪ ಜಲಗಂಗಮ್ಮ ದೇವಸ್ಥಾನವನ್ನು ಇತಿಹಾಸದಲ್ಲಿ ನಿರ್ಮಿಸಲಾಗಿತ್ತು. ಇದು ವೃಷಭಾವತಿ ಉಗಮದ ಸಂಕೇತ. ಕೆಲವರು ಬಸವನಗುಡಿಯ ನಂದಿ ಪಾದದಿಂದ ನೀರು ಉದ್ಭವಿಸಿತು ಎಂಬ ವಾದವು ಇದೆ ಎಂದು ಜಲಮಂಡಲಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....