ಬೆಂಗಳೂರಲ್ಲಿ ಮಳೆಯ ಅವಾಂತರ ತಪ್ಪಿಸಲು ವರ್ಕ್ ಫ್ರಮ್‌ ಹೋಮ್‌ ನೀಡುವಂತೆ ಕಂಪನಿಗಳಿಗೆ ಪೊಲೀಸರ ಮನವಿ

Date:

ದೀರ್ಘ ವಾರಾಂತ್ಯ ಮತ್ತು ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮಳೆಯ ಅವಾಂತರ ಮತ್ತು ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಬೆಂಗಳೂರಿನ ಔಟರ್ ​​ರಿಂಗ್ ರಸ್ತೆಯ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಮ್‌ ಹೋಮ್‌ ಅವಕಾಶ ಕೊಡಬೇಕು ಎಂದು ಸಂಚಾರಿ ಪೊಲೀಸರು ವಿನಂತಿಸಿದ್ದಾರೆ.

- Advertisement -

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕಂಪನಿಗಳಿಗೆ ರಜೆ ಇದೆ. ಶುಕ್ರವಾರ ಒಂದು ದಿನ ರಜೆ ಮಾಡಿದರೂ ನಾಲ್ಕು ದಿನ ರಜೆ ಸಿಗಲಿದೆ. ಹೀಗಾಗಿ ಆ.14ರಂದು ಕಚೇರಿಯಿಂದ ಮನೆಗೆ ತೆರಳುವವರು, ನಂತರ ಊರಿಗೆ ತೆರಳುವವರ ಸಂಖ್ಯೆಯಲ್ಲಿ ಹೆಚ್ಚಳವಾಗಲಿದೆ. ಪರಿಣಾಮವಾಗಿ ಸಂಚಾರ ದಟ್ಟಣೆ ನಿರೀಕ್ಷಿಸಲಾಗಿದೆ. ಇದರ ಜೊತೆಗೆ ಮಳೆಯೂ ಇರುವುದರಿಂದ ಮಳೆಯ ಅವಾಂತರ ತಪ್ಪಿಸಲು ಸಿಬ್ಬಂದಿಗೆ ವರ್ಕ್ ಫ್ರಮ್ ಹೋಮ್ ನೀಡಿ ಎಂದು ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಿಬ್ಬಂದಿಗೆ ವರ್ಕ್ ಫ್ರಮ್ ಹೊಮ್ ಕೊಡುವುದರಿಂದ ರಸ್ತೆಯಲ್ಲಿ ವಾಹನಗಳ ಸಂಖ್ಯೆ ಕಡಿಮೆಯಾಗಲಿದೆ. ಪ್ರಯಾಣಿಸಬೇಕಾದ ಎಲ್ಲರಿಗೂ ಅನುಕೂಲವಾಗಲಿದೆ. ಈ ವಿಷಯದಲ್ಲಿ ನಿಮ್ಮ ಸಹಕಾರವನ್ನು ನಾವು ನಿರೀಕ್ಷಿಸುತ್ತೇವೆ. ನಿಮ್ಮ ಬೆಂಬಲ ಅಗತ್ಯ ಎಂದು ಪತ್ರ ಮೂಲಕ ಅನುಚೇತ್ ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...