‘ಡ್ರಂಕ್‌ ಅಂಡ್ ಡ್ರೈವ್’ ಪ್ರಕರಣ | ಲಂಚ ಕೊಡಲು ನಿರಾಕರಿಸಿದ್ದಕ್ಕೆ ಯುವಕನ ಮೇಲೆ ಪೊಲೀಸರಿಂದ ಹಲ್ಲೆ

Date:

ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ ಈಶ್ವರ್ ಎಂಬವರು ಆರೋಪ ಮಾಡಿದ್ದಾರೆ.

- Advertisement -

ಮಾರ್ಚ್‌ 14ರ ರಾತ್ರಿ ವಿಜಯನಗರದ ಟೋಲ್‌ಗೇಟ್ ಬಳಿ ಸಬ್ ಇನ್ಸ್​ಪೆಕ್ಟರ್​ ಶಾಂತರಾಮ್ ನೇತೃತ್ವದಲ್ಲಿ ಪೊಲೀಸರು ‘ಡ್ರಂಕ್‌ ಅಂಡ್ ಡ್ರೈವ್’ ತಪಾಸಣೆ ಮಾಡುತ್ತಿದ್ದರು. ಈಶ್ವರ್ ಅವರು ಮದ್ಯ ಸೇವಿಸಿದ್ದಾರೆಂದು ಅವರ ಬೈಕ್‌ಅನ್ನು ವಶಕ್ಕೆ ಪಡೆದು, ಕೋರ್ಟ್‌ಗೆ ಹೋದರೆ 10,000 ರೂ.ದಂಡ ಕಟ್ಟಬೇಕಾಗುತ್ತದೆ, ಇಲ್ಲಿಯೇ 3,000 ರೂ. ಕೊಟ್ಟು ಹೋಗು ಎಂದು ಹೇಳಿದ್ದರು. ಆದರೆ, ಈಶ್ವರ್ ಲಂಚಕೊಡಲು ನಿರಾಕರಿಸಿದ್ದರು. ಅವರ ಬೈಕ್‌ಅನ್ನು ಪೊಲೀಸರು ಸೀಜ್ ಮಾಡಿ, ದಂಡದ ರಶೀದಿ ಕೊಟ್ಟಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಮಾರನೆ ದಿನ (ಮಾರ್ಚ್‌ 15) ನ್ಯಾಯಾಲಯಕ್ಕೆ ತೆರಳಿ ದಂಡ ಪಾವತಿಸಿದ್ದಾರೆ. ಬಳಿಕ, ಬೈಕ್ ಬಿಡಿಸಿಕೊಳ್ಳಲು ವಿಜಯನಗರ ಸಂಚಾರ ಪೊಲೀಸ್‌ ಠಾಣೆಗೆ ಹೋಗಿದ್ದಾರೆ. ಈ ವೇಳೆ, ಈಶ್ವರ್‌ಗೆ ಪಿಎಸ್‌ಐ ಶಾಂತಕುಮಾರ್ ಮತ್ತು ಸಿಬ್ಬಂದಿಗಳು ಅವಾಚ್ಯವಾಗಿ ನಿಂದಿಸಿದ್ದಾರೆ. ಮಾತಿಗೆ ಮಾತು ಬೆಳೆದು, ಪೊಲೀಸರು ಈಶ್ವರ್‌ಗೆ ಕಾಲಿನಿಂದ ಒದ್ದು, ಥಳಿಸಿ ಹಲ್ಲೆಗೈದಿದ್ದಾರೆ. ಘಟನೆಯಲ್ಲಿ ಈಶ್ವರ್ ಪ್ರಜ್ಞೆ ಕಳೆದುಕೊಂಡು ಕುಸಿದು ಬಿದ್ದಿದ್ದಾರೆ. ಅವರನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆ ಸಂಬಂಧ ತನಿಖೆ ನಡೆಸಿ, ವರದಿ ನೀಡುವಂತೆ ಎಸಿಪಿಗೆ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಅನಿತಾ ಹದ್ದಣ್ಣನವರು ಸೂಚನೆ ನೀಡಿದ್ದಾರೆ.

ಪ್ರಕರಣ ಸಂಬಂಧ ಮಾಹಿತಿಗಾಗಿ ಈದಿನ.ಕಾಮ್ ವಿಜಯನಗರ ಸಂಚಾರ ಪೊಲೀಸರನ್ನು ಸಂಪರ್ಕಿಸಿತು. ಆದರೆ, ಅವರು ಮಾಹಿತಿ ಕೊಡಲು ನಿರಾಕರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...