ಸತೀಶ್ ಜಾರಕಿಹೊಳಿಗೆ ಪ್ರೆಸ್‌ ಕ್ಲಬ್‌ನ ‘ವರ್ಷದ ವ್ಯಕ್ತಿ’, ಜಮೀರ್‌ಗೆ ವಿಶೇಷ ಪ್ರಶಸ್ತಿ

Date:

ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು ಪ್ರತಿ ವರ್ಷ ನೀಡುವ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ಈ ವರ್ಷ ಕಂದಾಯ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಬೆಂಗಳೂರಿನ ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

- Advertisement -

ಹಾಗೆಯೇ ಇದೇ ವೇಳೆ ಪ್ರೆಸ್‌ ಕ್ಲಬ್ ವಿಶೇಷ ಪ್ರಶಸ್ತಿಗೆ 2 ಲಕ್ಷಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ಯೋಜನೆ ಕೈಗೊಂಡಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೆಸ್‌ ಕ್ಲಬ್ ಸದಸ್ಯರ ಬಹುಮತದ ಮೇರೆಗೆ ಈ ಆಯ್ಕೆ ಮಾಡಲಾಗಿದೆ ಎಂದು ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? 2023ನೇ ಸಾಲಿನ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ ಪ್ರಕಟಿಸಿದ ಬೆಂಗಳೂರು ಪ್ರೆಸ್‌ಕ್ಲಬ್

ಈ ಹಿಂದೆ ದೇಶದ ಪ್ರತಿಷ್ಠಿತ ವ್ಯಕ್ತಿಗಳಾದ ಭಾರತದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕನ್ನಡಿತ ಡಾ. ಸಿ. ಎನ್. ಆರ್ ರಾವ್, ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಲೋಕಾಯುಕ್ತ ಎನ್. ವೆಂಕಟಾಚಲಯ್ಯ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್, ಪದ್ಮಶ್ರೀ ಪುರಸ್ಕೃತ ಡಾ. ಸಿ.ಎನ್. ಮಂಜುನಾಥ್, ಅಂತಾರಾಷ್ಟ್ರೀಯ ಕ್ರಿಕೆಟ್ ಪಟು ಅನಿಲ್ ಕುಂಬ್ಳೆರವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಆಯ್ಕೆ ಮಾಡಿ ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು ಅಭಿನಂದಿಸಿದೆ.

ಜತೆಗೆ ಹಿರಿಯ ಶಾಸಕ ಬಿ.ಡಿ.ಎ ಅಧ್ಯಕ್ಷರಾದ ಎನ್.ಎ ಹ್ಯಾರಿಸ್ ಮಾಧ್ಯಮ ಕ್ಷೇತ್ರಕ್ಕೆ ಆರೋಗ್ಯ ಸಂಜೀವಿನಿ ಹಾಗೂ ಗ್ರಾಮೀಣ ಬಸ್‌ಪಾಸ್ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲು ಶ್ರಮಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲು ಪ್ರೆಸ್‌ ಕ್ಲಬ್ ಆಫ್ ಬೆಂಗಳೂರು ಆಡಳಿತ ಮಂಡಳಿ ನಿರ್ಧರಿಸಿದೆ.

ಇವರನ್ನು ಡಿಸೆಂಬರ್ 31ರಂದು ಸಂಜೆ 5.00 ಗಂಟೆಗೆ ಪ್ರೆಸ್‌ ಕ್ಲಬ್ ಆವರಣದಲ್ಲಿ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಸಂಪುಟದ ಅನೇಕ ಸಚಿವರು ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...