ಬಾಡಿಗೆ ನೆಪ | ಮಾಲೀಕನ ತಲೆಗೆ ಹೊಡೆದು ಚಿನ್ನ ದೋಚಿದ ಮಹಿಳೆಯರು

Date:

  • ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವ ಶಾಂತಮ್ಮ
  • ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಮನೆ ಬಾಡಿಗೆ ಕೇಳುವ ನೆಪದಲ್ಲಿ ಇಬ್ಬರು ಮಹಿಳೆಯರು ಮಾಲೀಕರೊಬ್ಬರ ತಲೆಗೆ ಕಟ್ಟಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರಿನ ಲಗ್ಗೆರೆ ಬಳಿ ಪಾರ್ವತಿ ನಗರದಲ್ಲಿ ಈ ಘಟನೆ ನಡೆದಿದೆ. ಈ ಸಂಬಂಧ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಮ್ಮ ಚಿನ್ನಾಭರಣ ಕಳೆದುಕೊಂಡ ಸಂತ್ರಸ್ತೆ. ಪಾರ್ವತಿ ನಗರದಲ್ಲಿರುವ ಶಾಂತಮ್ಮ ಅವರ ಮನೆಯನ್ನು ಬಾಡಿಗೆಗಾಗಿ ನೋಡಲು ಶುಕ್ರವಾರ ಇಬ್ಬರು ಮಹಿಳೆಯರು ಬಂದಿದ್ದರು. ಮನೆ ತೋರಿಸುತ್ತಿದ್ದ ವೇಳೆ ಇಬ್ಬರು ಮಹಿಳೆಯರು ಶಾಂತಮ್ಮ ತಲೆಗೆ ಕಟ್ಟಿಗೆಯಿಂದ ಹೊಡೆದು, ಚಿನ್ನದ ಸರ ಕಿತ್ತುಕೊಂಡು ಹೋಗಿದ್ದಾರೆ ಎಂದು ಶಾಂತಮ್ಮ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಂಡರ್‌ಪಾಸ್‌ನಲ್ಲಿ ಯುವತಿ ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

“ಶಾಂತಮ್ಮ ಪಾರ್ವತಿ ನಗರದಲ್ಲಿ ಒಬ್ಬಳೇ ವಾಸಿಸುತ್ತಿದ್ದು, ಅವರ ಪತಿ ಹಲವು ವರ್ಷಗಳ ಹಿಂದೆ ತೀರಿಕೊಂಡಿದ್ದಾರೆ. ಶಾಂತಮ್ಮ ನಾಲ್ಕು ಬಾಡಿಗೆ ಮನೆಯ ಹಣದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಘಟನೆಯಲ್ಲಿ ಶಾಂತಮ್ಮ ತಲೆಗೆ ಪೆಟ್ಟು ಬಿದ್ದಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಪೊಲೀಸರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಜೋಡಿ ಕೊಲೆ | ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ?

ಬೆಂಗಳೂರಿನ ಸಾರಕ್ಕಿ ಪಾರ್ಕ್‌ನಲ್ಲಿ ನಡೆದಿದ್ದ ಜೋಡಿ ಕೊಲೆಗೆ ಸಂಬಂಧ ಕೆಲವು ಮಾಹಿತಿಗಳು...

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಬೆಂಗಳೂರು |ತಲಾ ₹1 ಲಕ್ಷ ದಂಡ ಬಾಕಿ ಉಳಿಸಿಕೊಂಡಿವೆ 123 ವಾಹನಗಳು

ಹಲವು ಬಾರಿ ಸಂಚಾರ ನಿಯಮ ಉಲ್ಲಂಘಿಸಿ, ಹೆಚ್ಚು ದಂಡಕ್ಕೆ ಗುರಿಯಾಗಿರುವ ವಾಹನಗಳನ್ನು...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ...