ಪ್ರಧಾನಿ ಮೋದಿ ರೋಡ್‌ ಶೋ | ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ ನಿರ್ಬಂಧ?

Date:

Advertisements
  • ಬೆಳಗ್ಗೆ 8ರಿಂದ 12 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ
  • ಭಾನುವಾರ ನಗರದ 23 ರಸ್ತೆಗಳಲ್ಲಿ ಸಂಚರಿಸಲಿರುವ ಪ್ರಧಾನಿ ಮೋದಿ

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಮತಬೇಟೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ 28 ಕಿ.ಮೀ ರೋಡ್‌ ಶೋ ನಡೆಸಿದ್ದಾರೆ. ಭಾನುವಾರವೂ ಪ್ರಧಾನಿ ಅವರ ರೋಡ್‌ ಶೋ ಮುಂದುವರೆಯಲಿದ್ದು, ನಗರದ 23 ರಸ್ತೆಗಳಲ್ಲಿ ಮೋದಿ ಸಂಚರಿಸಲಿದ್ದಾರೆ. ಈ ವೇಳೆ, ಸಾರ್ವಜನಿಕರ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಭಾನುವಾರ ಮಹದೇವಪುರ, ಕೆ ಆರ್​ ಪುರಂ, ಸಿವಿ ರಾಮನ್ ನಗರ, ಶಿವಾಜಿನಗರ ಹಾಗೂ ಶಾಂತಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ನರೇಂದ್ರ ಮೋದಿ ಅವರ ರೋಡ್ ಶೋ ಬೆಳಗ್ಗೆ 10 ರಿಂದ 11.30ರ ಅವಧಿಯಲ್ಲಿ ನಡೆಯಲಿದೆ.

traffic

ಬೆಳಗ್ಗೆ 8ರಿಂದ 12 ಗಂಟೆಯವರೆಗೆ ರಾಜಭವನ ರಸ್ತೆ, ಮೇಖ್ರಿ ಸರ್ಕಲ್, ರೇಸ್​​ಕೋರ್ಸ್ ರಸ್ತೆ, ಟಿ ಚೌಡಯ್ಯ ರಸ್ತೆ, ರಮಣಮಹರ್ಷಿ ರಸ್ತೆ, ಹಳೆ ವಿಮಾನ ನಿಲ್ದಾಣ ರಸ್ತೆ, ಸುರಂಜನ್​ದಾಸ್ ರಸ್ತೆ, ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ರೇಸ್​​ಕೋರ್ಸ್ ರಸ್ತೆ, ಜಗದೀಶ ನಗರ ಕ್ರಾಸ್ ರಸ್ತೆ, ಜೆಬಿ ನಗರ ಮುಖ್ಯ ರಸ್ತೆ, ಬಿಇಎಂಎಲ್ ಜಂಕ್ಷನ್, ನ್ಯೂ ತಿಪ್ಪಸಂದ್ರ ಮಾರ್ಕೆಟ್ ರಸ್ತೆ, 80 ಅಡಿ ರಸ್ತೆ ಇಂದಿರಾನಗರ, ನ್ಯೂ ತಿಪ್ಪಸಂದ್ರ ರಸ್ತೆ, 12ನೇ ಮುಖ್ಯ ರಸ್ತೆ 100 ಅಡಿ ರಸ್ತೆ, ಇಂದಿರಾ ನಗರ, ಕಾವೇರಿ ಸ್ಕೂಲ್, ಸಿಎಂಎಚ್ ರಸ್ತೆ, 17ನೇ ಕ್ರಾಸ್, ಆದರ್ಶ ಜಂಕ್ಷನ್, ಹಲಸೂರು ಮೆಟ್ರೋ ಸ್ಟೇಷನ್, ಟ್ರಿನಿಟಿ ಜಂಕ್ಷನ್ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X