ರಾಜಧಾನಿಯಲ್ಲಿ ಮೇ 6ರಂದು 36.6 ಕಿ.ಮೀ ಮೋದಿ ರೋಡ್‌ ಶೋ

Date:

  • ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ರೋಡ್ ಶೋ ನಡೆಸಲಿರುವ ಪ್ರಧಾನಿ
  • ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದರಿಲು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ

ರಾಜ್ಯದಲ್ಲಿ 2023 ವಿಧಾನಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ರಾಜ್ಯದೆಲ್ಲೆಡೆ ಅಬ್ಬರದ ಪ್ರಚಾರ ನಡೆಸಿದ್ದಾರೆ. ಅಂತೆಯೇ, ಮೇ 6ರಂದು ಬೆಂಗಳೂರಿನಲ್ಲಿ ಮೋದಿ ಬೃಹತ್ ರೋಡ್‌ ಶೋ ನಡೆಸಲಿದ್ದಾರೆ.

- Advertisement -

ಮೇ 6ರಂದು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಮೋದಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪಿ.ಸಿ.ಮೋಹನ್, “ಮೇ 6ರಂದು ಪ್ರಧಾನಿಯವರು ರಾಜಧಾನಿಯ 17 ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರ ರೋಡ್ ಶೋ ನಡೆಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ 10.1 ಕಿ.ಮೀ, ಸಂಜೆ 4ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದ್ದು, ಹತ್ತು ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ” ಎಂದರು.

“ಬೆಳಿಗ್ಗೆ ಸುರಂಜನ್‍ದಾಸ್ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಾಗಲಿದೆ. ಸಂಜೆ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ ಕ್ಷೇತ್ರಗಳಲ್ಲಿ ರೋಡ್ ಶೋ ಸಾಗಲಿದೆ. ಇಡೀ ಕರ್ನಾಟಕದ ಜನ ರೋಡ್ ಶೋನಲ್ಲಿ ಪಾಲ್ಗೊಳ್ಳುತ್ತಿದ್ದು, ರೋಡ್ ಶೋ ಸಾಗುವ ಮಾರ್ಗದ ಬಗ್ಗೆ ತಿಳಿಸಲಾಗುವುದು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಮುಂಜಾಗ್ರತೆಗಳನ್ನು ವಹಿಸಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣ ಗೌಡ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ.ಮಂಜುನಾಥ್, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...