ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

Date:

  • ಸಂಚಾರ ಮಾರ್ಪಾಡುಗಳಿಗೆ ಸಹಕರಿಸುವಂತೆ ನಾಗರಿಕರಲ್ಲಿ ಪೊಲೀಸರ ಮನವಿ
  • ಬೆಂಗಳೂರಿನಲ್ಲಿ 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ

ರಾಜ್ಯ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ನೈಸ್​ ರಸ್ತೆಯಿಂದ ಸುಮ್ಮನಹಳ್ಳಿ ಜಂಕ್ಷನ್​ವರೆಗೆ ರೋಡ್ ಶೋ ನಡೆಸಲಿದ್ದಾರೆ. ಈ ಹಿನ್ನಲೆ, ನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 2ರಿಂದ ಸಂಜೆ 7.30ರವರೆಗೆ ಮಾಗಡಿ ರಸ್ತೆಯ ನೈಸ್​ ಜಂಕ್ಷನ್​ನಿಂದ ಸುಮನಹಳ್ಳಿ ಸರ್ಕಲ್​​ವರೆಗೂ ಸಂಚಾರ ನಿರ್ಬಂಧ ಹೇರಲಾಗಿದೆ.

ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಓಲ್ಡ್ ಏರ್‌ಪೋರ್ಟ್ ರಸ್ತೆ, ಕಬ್ಬನ್ ರಸ್ತೆ, ಅಂಬೇಡ್ಕರ್ ರಸ್ತೆ, ಕೃಂಬಿಗಲ್ ರಸ್ತೆ, ದೇವಾಂಗ ರಸ್ತೆ, ಕೇಂಬ್ರಿಡ್ಜ್ ಲೇಔಟ್ ರಸ್ತೆ, ಡಿಕನ್‌ಸನ್ ರಸ್ತೆ, ಲಾಲ್‌ಬಾಗ್ ವೆಸ್ಟ್ ಗೇಟ್ ರಸ್ತೆ, ಕೆ.ಆರ್.ಸರ್ಕಲ್, ಆರ್.ವಿ.ಕಾಲೇಜ್ ರಸ್ತೆ, ಲಾಲ್‌ಬಾಗ್‌ ಮುಖ್ಯ ರಸ್ತೆ, ಬಸನವಗುಡಿ 50 ಅಡಿ ರಸ್ತೆ, ಕೆನರಾ ಬ್ಯಾಂಕ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸಂಚಾರಕ್ಕೆ ಪರ್ಯಾಯ ಮಾರ್ಗ

  • ಮಾಗಡಿ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಬರುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಬಲತಿರುವು ಪಡೆದು ಹೆಮ್ಮಿಗೆಪುರ-ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಮಾಗಡಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ತಾವರೆಕೆರೆ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಸೊಂಡೇಕೊಪ್ಪ ನೆಲಮಂಗಲದ ಮೂಲಕ ಸಂಚರಿಸಬಹುದಾಗಿರುತ್ತದೆ.
  • ತುಮಕೂರು ಕಡೆಯಿಂದ ಬಂದು ನೈಸ್ ರಸ್ತೆಯಲ್ಲಿ ಸಂಚರಿಸುವ ಸರಕು ವಾಹನಗಳು ನೆಲಮಂಗಲ ಸೊಂಡೇಕೊಪ್ಪ ಬೈಪಾಸ್‌ನಲ್ಲಿ ಬಲತಿರುವು ಪಡೆದು ಸೊಂಡೇಕೊಪ್ಪ-ತಾವರೆಕೆರೆ-ಹೆಮ್ಮಿಗೆಪುರ-ಕೊಮ್ಮಘಟ್ಟ ಕೆಂಗೇರಿ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ನಾಯಂಡಹಳ್ಳಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ಮೈಸೂರು ರಸ್ತೆಗೆ ಚಲಿಸಿ ಕೆಂಗೇರಿ – ಆರ್ ಆರ್ ಕಾಲೇಜು ಮೂಲಕ ರಾಮೋಹಳ್ಳಿ, ಚಂದ್ರಪ್ಪ ಸರ್ಕಲ್-ತಾವರೆಕೆರೆ ಮೂಲಕ ಮಾಗಡಿ ರಸ್ತೆ ಮತ್ತು ತುಮಕೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಸಿ.ಎಂ.ಟಿ.ಐ ಜಂಕ್ಷನ್‌ನಿಂದ ನಾಯಂಡಹಳ್ಳಿ ಮೈಸೂರು ರಸ್ತೆ ಕಡೆಗೆ ಹೋಗುವ ವಾಹನಗಳು ಗೊರಗುಂಟೆಪಾಳ್ಯ- ವೆಸ್ಟ್ ಆಫ್ ಕಾರ್ಡ್ ರಸ್ತೆ – ಎಂ.ಸಿ ಸರ್ಕಲ್ – ವಿಜಯನಗರದ ಮೂಲಕ ಮೈಸೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ಹಳೇ ರಿಂಗ್ ರಸ್ತೆಯಲ್ಲಿ ಕೆಂಗೇರಿ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಬರುವ ವಾಹನಗಳು ಉಲ್ಲಾಳ ಜಂಕ್ಷನ್‌ನಲ್ಲಿ ಎಡತಿರುವು ಪಡೆದು ಉಲ್ಲಾಳ ವಿಲೇಜ್, ರಾಮಸಂದ್ರ ಬ್ರಿಡ್ಜ್-ಹೆಮ್ಮಿಗೆಪುರ–ತಾವರೆಕೆರೆ ಮೂಲಕ ತುಮಕೂರು ರಸ್ತೆಗೆ ಸಂಚರಿಸಬಹುದಾಗಿದೆ.
  • ನಗರದ ಒಳಭಾಗದಿಂದ ಮಾಗಡಿ ಕಡೆಗೆ ಸಂಚರಿಸುವ ವಾಹನಗಳು ಎಂ.ಸಿ ಸರ್ಕಲ್‌ ನಲ್ಲಿ ಎಡತಿರುವು ಪಡೆದು ಮೈಸೂರು ರಸ್ತೆ ಕೆಂಗೇರಿ ಕೊಮ್ಮಘಟ್ಟ – ಹೆಮ್ಮಿಗೆಪುರ – ತಾವರೆಕೆರೆ ಮೂಲಕ ಸಂಚರಿಸಬಹುದಾಗಿದೆ.

ಈ ಮೇಲ್ಕಂಡಂತೆ ಮಾಡಲಾದ ಸಂಚಾರ ಮಾರ್ಪಾಡುಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ನಗರ ಸಂಚಾರಿ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು

ರಾಜಧಾನಿಯಲ್ಲಿ ಮೋದಿ ರೋಡ್‌ ಶೋ

ಬೆಂಗಳೂರಿನಲ್ಲಿ ಬುಲೆಟ್ ಪ್ರೂಫ್ ವಾಹನದಲ್ಲಿ ಒಟ್ಟು 6 ಕಿ.ಮೀ ಮೋದಿ ರೋಡ್‌ ಶೋ ನಡೆಯಲಿದೆ. ಈ ರಸ್ತೆಯುದ್ದಕ್ಕೂ 1 ಸಾವಿರ ಮನೆ ಮತ್ತು ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ರಸ್ತೆ ಬಳಿಯ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗುತ್ತದೆ. ರಸ್ತೆಯ ಒಂದು ಭಾಗಕ್ಕೆ ಬ್ಯಾರಿಕೇಡ್​ ಅಳವಡಿಸಲಾಗಿದೆ. ಬಿಜೆಪಿ ಮೋದಿ ರೋಡ್ ಶೋಗೆ 2 ಲಕ್ಷ ಜನರನ್ನು ಸೇರಿಸಲು ಸಿದ್ಧತೆ ನಡೆದಿದೆ.

ಮೋದಿ ಅವರ ಭದ್ರತೆಗಾಗಿ 2600 ಪೊಲೀಸರ ನಿಯೋಜನೆ ಮಾಡಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 6 ಡಿಸಿಪಿ, 18 ಎಸಿಪಿ, 120ಕ್ಕೂ ಹೆಚ್ಚು ಪಿಐ​​, 250 ಪಿಎಸ್​​ಐ, 2,600ಕ್ಕೂ ಹೆಚ್ಚು ಪಿಸಿಗಳು, ಕೆಎಸ್​ಆರ್‌ಪಿ ಸಿಬ್ಬಂದಿ ಮೋದಿ ರೋಡ್​ಶೋ ಭದ್ರತೆಗೆ ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಪ್ರಧಾನಿ ಮೋದಿ ಎರಡು ದಿನ ಪ್ರವಾಸ ನಡೆಸಲಿದ್ದಾರೆ. ಒಟ್ಟಾರೆ 6 ಸಮಾವೇಶಗಳು 2 ರೋಡ್‌ ಶೋ ನಡೆಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಇಷ್ಟೆಲ್ಲಾ ಪೊಲೀಸ್ ರನ್ನು ಟ್ರಾಫಿಕ್ ಕಂಟ್ರೋಲ್ ಗೆ ನಿಯೋಜಿಸಿದ್ದು, 29-04-2023ರ ಬೆಳಿಗ್ಗೆ 9-45ರ ಹೊತ್ತಿಗೆ ಮಾಗಡಿ road D Mart ಹತ್ತಿರ ಟ್ರಾಫಿಕ್ ಜಾಮ್ ಆಗಿದ್ದು ವಿಪರ್ಯಾಸವೇ ಸರಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...